ಕೆ.ಆರ್. ಪೇಟೆ | ಸಿಪಿಐ ಸುಮಾ ರಾಣಿ ದರ್ಪಕ್ಕೆ ಆಕ್ರೋಶ; ಎಸ್‌ಪಿ ಶೋಭಾರಾಣಿಗೆ ಕೆಆರ್‌ಎಸ್ ಪಕ್ಷ ದೂರು

Date:

​ಮಂಡ್ಯದ ಕೆ.ಆರ್. ಪೇಟೆ ಪಟ್ಟಣದ ಸಿಪಿಐ ಸುಮಾ ರಾಣಿ ಸಾರ್ವಜನಿಕರ ಮೇಲೆ ನಡೆಸುತ್ತಿರುವ ದರ್ಪ ಹಾಗೂ ಬೆದರಿಕೆ ವರ್ತನೆಯನ್ನು ಖಂಡಿಸಿ, ಇಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ಕಾರ್ಯಕರ್ತರು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ ಅವರಿಗೆ ದೂರು ನೀಡಿದರು.
​
​ಕೆ.ಆರ್. ಪೇಟೆಯಲ್ಲಿ ನಿನ್ನೆ ಸಿವಿಲ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿದ್ದ ಸಿಪಿಐ ಸುಮಾ ರಾಣಿ, ಅಲ್ಲಿನ ಯುವಕ ಚಂದ್ರು ಎಂಬುವವರ ಮೇಲೆ ಏಕವಚನದಲ್ಲಿ ದರ್ಪ ಪ್ರದರ್ಶಿಸಿದ್ದಾರೆ. “ನೀನು ವಿಡಿಯೋ ಮಾಡಿದರೆ ನಿನ್ನ ಮೇಲೆ ಸುಳ್ಳು ಕೇಸ್ ಹಾಕಿ ನಿನ್ನ ಜೀವನವನ್ನೇ ಹಾಳು ಮಾಡುತ್ತೇನೆ, ಡೈರಿಯಲ್ಲಿ ನಿನ್ನ ಹೆಸರನ್ನು ಈಗಾಗಲೇ ಕೆತ್ತಿದ್ದೇನೆ” ಎಂದು ಬೆದರಿಕೆ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
​
​ಈ ವರ್ತನೆಯನ್ನು ತೀವ್ರವಾಗಿ ಖಂಡಿಸಿರುವ ಕೆಆರ್‌ಎಸ್ ಪಕ್ಷದ ಮಂಡ್ಯ ಜಿಲ್ಲಾ ಉಪಾಧ್ಯಕ್ಷ ಮಲ್ಲೇಶ್ ಹಾಗೂ ಪದಾಧಿಕಾರಿಗಳು ಇಂದು ಎಸ್‌ಪಿ ಅವರನ್ನು ಭೇಟಿ ಮಾಡಿದರು. ಪೊಲೀಸರು ಜನಸ್ನೇಹಿಯಾಗಿರಬೇಕು. ಆದರೆ ಸುಮಾ ರಾಣಿ ಸಮವಸ್ತ್ರವಿಲ್ಲದೆಯೇ ಕರ್ತವ್ಯಕ್ಕೆ ಹಾಜರಾಗಿ ಜನರನ್ನು ಹೆದರಿಸುತ್ತಿದ್ದಾರೆ. ​ಹಣ ಪಡೆದು ಸಿವಿಲ್ ಪ್ರಕರಣಗಳಲ್ಲಿ ಮಧ್ಯಪ್ರವೇಶಿಸಿ ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಮತ್ತು ಕಾನೂನುಬದ್ಧ ಹೋರಾಟಗಾರರ ಮೇಲೆ ದಬ್ಬಾಳಿಕೆ ಎಸಗುತ್ತಿದ್ದಾರೆ ಎಂದು ಆರೋಪಿಸಿರುವ ಅವರು, ಇಂತಹ ಅಧಿಕಾರಿಗಳಿಂದ ಇಡೀ ಪೊಲೀಸ್ ಇಲಾಖೆಗೆ ಅವಮಾನವಾಗುತ್ತಿದೆ. ಕೂಡಲೇ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.

- Advertisement -

ಇದನ್ನೂ ಓದಿ: ಮಂಡ್ಯ | ಮೆಡಿಕಲ್ ಕಾಲೇಜು ಒತ್ತುವರಿ ಹಗರಣ; ಹೈಕೋರ್ಟ್ ಎಜಿ ಮಧ್ಯಪ್ರವೇಶಕ್ಕೆ ಕರವೇ ಆಗ್ರಹ
​
​ಸಿಪಿಐ ಸುಮಾ ರಾಣಿ ವಿರುದ್ಧ ಶಿಸ್ತು ಕ್ರಮ ಜರುಗಿಸದಿದ್ದರೆ, ಕೆ.ಆರ್. ಪೇಟೆಯಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು. ಈಗಾಗಲೇ ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಾನವ ಹಕ್ಕುಗಳ ಆಯೋಗಕ್ಕೂ ದೂರು ನೀಡಲಾಗಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಕೊಡುವಾಗ ಕೆಆರ್‌ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ರಮೇಶ್‌ಗೌಡ, ಮಂಡ್ಯ ಜಿಲ್ಲಾ ಉಪಾಧ್ಯಕ್ಷ ಮಲ್ಲೇಶ, ಕೆಆರ್ ಪೇಟೆ ತಾಲೂಕು ಅಧ್ಯಕ್ಷರು ನಾಗರಾಜು, ಯುವ ಘಟಕ ಜಿಲ್ಲಾಧ್ಯಕ್ಷ ಪ್ರಮೋದ್, ಮಂಡ್ಯ ತಾಲೂಕು ಅಧ್ಯಕ್ಷ ರವೀಂದ್ರ, ಜಯರಾಮ್, ದೀಪಿಕಾ ಸೇರಿದಂತೆ ಹಲವಾರು ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಅಂಬೇಡ್ಕರ್ ಅವಹೇಳನ ಆರೋಪ: ವೇದಮೂರ್ತಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಪೊಲೀಸ್ ಇಲಾಖೆಯ ಬಗ್ಗೆ ಅವಹೇಳನಕಾರಿ ಹೇಳಿಕೆ...

ತಮಿಳು ಕಾಲೊನಿ ನಿವಾಸಿಗಳನ್ನು ‘ಭಯೋತ್ಪಾದಕರು’ ಎಂದಿರುವ ಆರೋಪ: ರವೀಂದ್ರ ವಿರುದ್ಧ FIR ದಾಖಲಿಸಲು ಆಗ್ರಹ

ಮಂಡ್ಯ ನಗರದ ತಮಿಳು ಕಾಲೊನಿ ನಿವಾಸಿಗಳನ್ನು ‘ತಮಿಳುನಾಡಿನಿಂದ ಬಂದವರು’, ‘ಭಯೋತ್ಪಾದಕರು’ ಎಂದು...

ಮಂಡ್ಯದ ನ್ಯೂ ತಮಿಳು ಕಾಲೊನಿಯಲ್ಲಿ ‘SIR’ ಗೊಂದಲ: 207 ಮತದಾರರು ಎಲ್ಲಿ ಹೋದರು?

ವಿಶೇಷ ತೀವ್ರ ಪರಿಷ್ಕರಣೆ (Special Intensive Revision–SIR) ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯ...

ಬರದ ನೆರಳಲ್ಲಿ 101 ತಾಲ್ಲೂಕುಗಳು; ಮೈಸೂರು-ಚಾಮರಾಜನಗರ-ಮಂಡ್ಯದಲ್ಲಿ ರೈತರ ಬದುಕಿಗೆ ಕಠಿಣ ಸವಾಲು

ಕರ್ನಾಟಕದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿರುವುದು ಕೇವಲ ಮಳೆ ಕಡಿಮೆಯಾಗಿದೆ...