ಮಳವಳ್ಳಿ ಇಒ ಅಮಾನತಿಗೆ ಕೆಆರ್‌ಎಸ್ ಪಕ್ಷ ಆಗ್ರಹ: ಜಿಲ್ಲಾ ಪಂಚಾಯತ್ ಸಿಇಒಗೆ ದೂರು

Date:

​ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ(EO) ಶ್ರೀನಿವಾಸ್ ಅವರು ಕೆ‌ಆರ್‌ಎಸ್‌ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಮಲ್ಲೇಶ್ ಅವರಿಗೆ ಫೋನ್ ಮೂಲಕ ಬೆದರಿಕೆ ಹಾಕಿದ್ದಾರೆಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಧಿಕಾರಿಯನ್ನು ಅಮಾನತುಗೊಳಿಸುವಂತೆ ಅಪರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ಅಧಿಕೃತವಾಗಿ ದೂರು ನೀಡಲಾಗಿದೆ.

- Advertisement -

ಇತ್ತೀಚೆಗೆ ಮಳವಳ್ಳಿ ತಾಲೂಕಿನ ಹಲವು ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ಕರ್ತವ್ಯ ಲೋಪದ ಬಗ್ಗೆ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಪ್ರಶ್ನಿಸುತ್ತಿದ್ದರು. ಇದನ್ನೇ ನೆಪವಾಗಿಟ್ಟುಕೊಂಡ ಇಒ ಶ್ರೀನಿವಾಸ್, ಮಲ್ಲೇಶ್ ಅವರಿಗೆ ಕರೆ ಮಾಡಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಲಭ್ಯವಿರುವ ಆಡಿಯೋ ಸಂಭಾಷಣೆಯಲ್ಲಿ ಇಒ, ʼಪೊಲೀಸ್ ಇಲಾಖೆಯಿಂದ(DG & IGP) ಆದೇಶ ಬಂದಿದೆ. ಇನ್ನು ಮುಂದೆ ಕಚೇರಿಗೆ ಬಂದು ದಾಂಧಲೆ ಮಾಡಿದರೆ ಮೊದಲ ಎಫ್‌ಐಆರ್(FIR) ನಿಮ್ಮ ಮೇಲೆಯೇ ದಾಖಲಿಸುತ್ತೇನೆʼ ಎಂದು ಎಚ್ಚರಿಕೆ ನೀಡಿರುವುದು ಕೇಳಿಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....
ಕೆಆರ್‌ಎಸ್‌ ಪಕ್ಷ 1 1

ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಿಂದ ರಾಮನಗರ ಜಿಲ್ಲೆಗೆ ಸಂಬಂಧಿಸಿದಂತೆ ಹೊರಡಿಸಲಾದ ಕೇವಲ ಒಂದು ಜ್ಞಾಪನಾ ಪತ್ರವನ್ನು ಇಡೀ ರಾಜ್ಯಕ್ಕೆ ಅನ್ವಯವಾಗುವ ಆದೇಶವೆಂದು ಬಿಂಬಿಸಿ ಅಧಿಕಾರಿಗಳು ಸಾರ್ವಜನಿಕರನ್ನು ಭಯಭೀತಿಗೊಳಿಸುತ್ತಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

“ಕಚೇರಿಗೆ ಬರುವ ಸಾರ್ವಜನಿಕರನ್ನು ಮತ್ತು ಪ್ರಶ್ನಿಸುವವರನ್ನು ‘ಧಾಂದಲೆ ಮಾಡುವವರು’ ಎಂದು ಕರೆದು ಅಧಿಕಾರಿಯು ಅಸಡ್ಡೆಯಿಂದ ಮಾತನಾಡಿದ್ದಾರೆ. ಸಾರ್ವಜನಿಕ ಸೇವಕರಾಗಿ ಜನರ ಸಮಸ್ಯೆ ಆಲಿಸಬೇಕಾದ ಅಧಿಕಾರಿ, ಈ ರೀತಿ ರಾಜಕೀಯ ಪಕ್ಷದ ಮುಖಂಡರಿಗೆ ಬೆದರಿಕೆ ಹಾಕಿರುವುದು ಕಾನೂನುಬಾಹಿರ. ಆದ್ದರಿಂದ ಅವರನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಿ ಇಲಾಖಾ ತನಿಖೆ ನಡೆಸಬೇಕು” ಎಂದು ಮಲ್ಲೇಶ್ ಆಗ್ರಹಿಸಿದ್ದಾರೆ.

“ಸರ್ಕಾರಿ ಕಚೇರಿಗಳಲ್ಲಿ ಆಗುತ್ತಿರುವ ಲೋಪದೋಷಗಳನ್ನು ಪ್ರಶ್ನಿಸುವುದು ನಾಗರಿಕರ ಹಕ್ಕು. ಆದರೆ, ಅಧಿಕಾರಿಗಳು ಪೊಲೀಸ್ ಇಲಾಖೆಯ ಹೆಸರಿನಲ್ಲಿ ಇಂತಹ ಜ್ಞಾಪನಾ ಪತ್ರಗಳನ್ನು ಮುಂದಿಟ್ಟುಕೊಂಡು ಜನರ ಧ್ವನಿಯನ್ನು ಅಡಗಿಸಲು ಯತ್ನಿಸುತ್ತಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ ಎಂಬ ಆಕ್ರೋಶ ವ್ಯಕ್ತವಾಗಿದೆ.​ ಈ ಬಗ್ಗೆ ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹುಬ್ಬಳ್ಳಿ | ಮನೆಗಳ ಹಂಚಿಕೆ ಕಾರ್ಯಕ್ರಮ; ಕಟೌಟ್ ಬಿದ್ದು ನಾಲ್ವರಿಗೆ ಗಾಯ

ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾಧ್ಯಕ್ಷ ಡಿ ಜಿ ನಾಗರಾಜ್, ಜಿಲ್ಲಾ ಉಪಾಧ್ಯಕ್ಷ ಮಲ್ಲೇಶ ಹೆಬ್ಬಕವಾಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರು ಕಿಲಾರ, ಜಿಲ್ಲಾ ಕಾರ್ಯದರ್ಶಿ ಯೋಗೇಶ್ ಪಾಂಡವಪುರ, ಅಧ್ಯಕ್ಷ ಶಾಂತಿ ಪ್ರಸಾದ್, ಕೆ ಆರ್ ಪೇಟೆಯ ಕಾರ್ಯದರ್ಶಿ ಶಂಕರ್ ನಾಗ್, ಮಂಡ್ಯ ಕಾರ್ಯದರ್ಶಿ ಮಲ್ಲಯ್ಯ ಮತ್ತು ಶಂಕರೇಗೌಡ ಸೇರಿದಂತೆ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೈತರ ಬೆನ್ನಿಗೆ ರಾಜ್ಯ ಸರ್ಕಾರ: ಸಚಿವ ಚಲುವರಾಯಸ್ವಾಮಿ ಭರವಸೆ

ರೈತರ ಸಮಸ್ಯೆಗಳಿಗೆ ಸ್ಪಂದಿಸುವುದರಿಂದ ರಾಜ್ಯ ಸರ್ಕಾರ ಹಿಂದೆ ಸರಿಯುವುದಿಲ್ಲ. ರೈತರ ಹಿತ...

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗಣಂಗೂರು ಟೋಲ್‌ನಲ್ಲಿ ರೈತರಿಂದ ಹೆದ್ದಾರಿ ತಡೆ

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವುದು, ಸಕ್ಕರೆ ಬೆಲೆ ಪರಿಷ್ಕರಣೆ, ಕಳೆದ ಸಾಲಿನ...

SIR ವೆಚ್ಚದ ಶ್ವೇತಪತ್ರ ಬಿಡುಗಡೆಗೆ ಜಾಗೃತ ಕರ್ನಾಟಕ ಒತ್ತಾಯ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಸಂದರ್ಭದಲ್ಲಿ ಕರ್ನಾಟಕದ ವಿವಿಧೆಡೆ...

ಮಂಡ್ಯ | ಟನ್ ಕಬ್ಬಿಗೆ ₹5,500 ಎಫ್‌ಆರ್‌ಪಿ ಘೋಷಿಸಲು ಆಗ್ರಹ

2025-26ನೇ ಸಾಲಿನ ಕಬ್ಬಿಗೆ ಟನ್‌ಗೆ ₹5,500ರ ನ್ಯಾಯಯುತ ಮತ್ತು ಲಾಭದಾಯಕ ಬೆಲೆ...