ಮದ್ದೂರು | ನಗರಸಭೆಯ ʼಪರಿಸರ ವಿರೋಧಿʼ ಧೋರಣೆ; ಒತ್ತುವರಿ ತೆರವು ನೆಪದಲ್ಲಿ ಹಸಿರು ನಾಶಕ್ಕೆ ಸಾರ್ವಜನಿಕರ ಆಕ್ರೋಶ

Date:

​ಮದ್ದೂರು ಪಟ್ಟಣದಲ್ಲಿ ಪಾದಚಾರಿ ಮಾರ್ಗದ ಒತ್ತುವರಿ ತೆರವುಗೊಳಿಸುವ ಹೆಸರಿನಲ್ಲಿ ನಗರಸಭೆಯು ಪರಿಸರಕ್ಕೆ ಮಾರಕವಾಗುವಂತೆ ವರ್ತಿಸಿದೆ. ಜನವರಿ 8 ರಂದು ನಡೆದ ಕಾರ್ಯಾಚರಣೆಯ ವೇಳೆ ಸಿಬ್ಬಂದಿ ಜೆಸಿಬಿ ಬಳಸಿ ಅನ್ಯಾಯವಾಗಿ ಮರವೊಂದನ್ನು ಬುಡಮೇಲು ಮಾಡಿದ್ದು, ಈ ಕೃತ್ಯ ಸ್ಥಳೀಯರ ಮತ್ತು ಪರಿಸರ ಪ್ರೇಮಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
​
ನಗರಸಭೆಯ ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ಒತ್ತುವರಿ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿದ್ದ ಮರಗಳನ್ನು ಸಂರಕ್ಷಿಸುವ ಕಾಳಜಿ ತೋರಬೇಕಿತ್ತು. ಆದರೆ, ಅದನ್ನು ಬಿಟ್ಟು ಜೆಸಿಬಿ ಯಂತ್ರದ ಮೂಲಕ ಮರವನ್ನು ಉರುಳಿಸಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಗಿಡ ನೆಟ್ಟು ಪರಿಸರ ಬೆಳೆಸಬೇಕಾದ ಸ್ಥಳೀಯ ಆಡಳಿತವೇ ಈ ರೀತಿ ಹಸಿರು ನಾಶಕ್ಕೆ ಮುಂದಾಗಿರುವುದು ದೊಡ್ಡ ದುರಂತ ಎಂದು ಸಾರ್ವಜನಿಕರು ದೂರಿದ್ದಾರೆ.
​
ಈ ಘಟನೆಯನ್ನು ರಾಜ್ಯ ತೆಂಗು ಬೆಳೆಗಾರರ ಸಂಘದ ಅಧ್ಯಕ್ಷ ಚೆನ್ನಸಂದ್ರ ಲಕ್ಷ್ಮಣ್ ತೀವ್ರವಾಗಿ ಖಂಡಿಸಿದ್ದಾರೆ. “ಒತ್ತುವರಿ ತೆರವಿನ ನೆಪದಲ್ಲಿ ಮದ್ದೂರು ಪಟ್ಟಣದ ಸೌಂದರ್ಯ ಹೆಚ್ಚಿಸುತ್ತಿದ್ದ ಮರಗಳನ್ನು ಉರುಳಿಸಿರುವುದು ಅಕ್ಷಮ್ಯ ಅಪರಾಧ. ಪರಿಸರ ರಕ್ಷಿಸಬೇಕಾದ ಅಧಿಕಾರಿಗಳೇ ಮರಗಳನ್ನು ಸಾಯಿಸುತ್ತಿರುವುದು ಖೇದಕರ” ಎಂದು ಆಕ್ರೋಶ ವ್ಯಕ್ತಪಡಿಸಿದರು.

- Advertisement -

​ಈ ಕೂಡಲೇ ಅರಣ್ಯ ಇಲಾಖೆಯು ಮರ ಕಡಿಯಲು ಆದೇಶ ನೀಡಿದ ನಗರಸಭೆಯ ಅಧಿಕಾರಿಗಳ ಮೇಲೆ ಎಫ್‌ಐಆರ್ (FIR) ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದರು.
​
ಈ ವಿಚಾರವಾಗಿ ನಗರಸಭೆ ಆಯುಕ್ತೆ ರಾಧಿಕಾ ಅವರನ್ನು ಪ್ರಶ್ನಿಸಿದಾಗ, “ಮರ ಕಡಿದಿರುವ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ, ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು” ಎಂಬ ಹಾರಿಕೆಯ ಉತ್ತರ ನೀಡಿದ್ದಾರೆ. ಈ ಬೇಜವಾಬ್ದಾರಿ ಹೇಳಿಕೆಯು ಪರಿಸರ ಕಾಳಜಿಯುಳ್ಳ ನಾಗರಿಕರ ಕೋಪವನ್ನು ಮತ್ತಷ್ಟು ಹೆಚ್ಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ರಾಯಚೂರು | ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಇದನ್ನೂ ಓದಿ: ಮದ್ದೂರು | ವಿಶ್ವಮಾನವ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ: ರೈಲು ಪ್ರಯಾಣಿಕರಿಗೆ ಸಂಕಷ್ಟ, ಆಕ್ರೋಶ
​
ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯಿದೆ 1976ರ ಪ್ರಕಾರ, ಯಾವುದೇ ಮರವನ್ನು ಕಡಿಯುವ ಮೊದಲು ಅರಣ್ಯ ಇಲಾಖೆಯಿಂದ ಕಡ್ಡಾಯವಾಗಿ ಲಿಖಿತ ಅನುಮತಿ ಪಡೆಯಬೇಕು. ನಗರಸಭೆಯಾಗಲಿ ಇಲ್ಲವೇ ಯಾವುದೇ ಸರ್ಕಾರಿ ಸಂಸ್ಥೆಯಾಗಲಿ ಈ ನಿಯಮವನ್ನು ಪಾಲಿಸುವುದು ಕಡ್ಡಾಯ. ಅನುಮತಿ ಇಲ್ಲದೆ ಮರ ಕಡಿಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ದಂಡ ಅಥವಾ ಜೈಲು ಶಿಕ್ಷೆಗೆ ಅವಕಾಶವಿದೆ.

​”ಒಂದು ಮರವನ್ನು ಅನಿವಾರ್ಯವಾಗಿ ತೆಗೆಯಲೇಬೇಕಾದ ಸಂದರ್ಭ ಬಂದರೆ, ಅದರ ಬದಲಾಗಿ ಕನಿಷ್ಠ 10 ಗಿಡಗಳನ್ನು ನೆಟ್ಟು ಬೆಳೆಸಬೇಕು ಎಂಬ ನಿಯಮವಿದೆ. ಅಧಿಕಾರಿಗಳೇ ಕಾನೂನು ಉಲ್ಲಂಘಿಸಿರುವುದರಿಂದ ನಾವು ಇದರ ವಿರುದ್ಧ ನ್ಯಾಯಾಂಗ ಹೋರಾಟ ನಡೆಸಬೇಕಾಗುತ್ತದೆ” ಎಂದು ಚನ್ನಸಂದ್ರ ಲಕ್ಷ್ಮಣ್ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಅಂಬೇಡ್ಕರ್ ಅವಹೇಳನ ಆರೋಪ: ವೇದಮೂರ್ತಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಪೊಲೀಸ್ ಇಲಾಖೆಯ ಬಗ್ಗೆ ಅವಹೇಳನಕಾರಿ ಹೇಳಿಕೆ...

ತಮಿಳು ಕಾಲೊನಿ ನಿವಾಸಿಗಳನ್ನು ‘ಭಯೋತ್ಪಾದಕರು’ ಎಂದಿರುವ ಆರೋಪ: ರವೀಂದ್ರ ವಿರುದ್ಧ FIR ದಾಖಲಿಸಲು ಆಗ್ರಹ

ಮಂಡ್ಯ ನಗರದ ತಮಿಳು ಕಾಲೊನಿ ನಿವಾಸಿಗಳನ್ನು ‘ತಮಿಳುನಾಡಿನಿಂದ ಬಂದವರು’, ‘ಭಯೋತ್ಪಾದಕರು’ ಎಂದು...

ಮಂಡ್ಯದ ನ್ಯೂ ತಮಿಳು ಕಾಲೊನಿಯಲ್ಲಿ ‘SIR’ ಗೊಂದಲ: 207 ಮತದಾರರು ಎಲ್ಲಿ ಹೋದರು?

ವಿಶೇಷ ತೀವ್ರ ಪರಿಷ್ಕರಣೆ (Special Intensive Revision–SIR) ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯ...

ಬರದ ನೆರಳಲ್ಲಿ 101 ತಾಲ್ಲೂಕುಗಳು; ಮೈಸೂರು-ಚಾಮರಾಜನಗರ-ಮಂಡ್ಯದಲ್ಲಿ ರೈತರ ಬದುಕಿಗೆ ಕಠಿಣ ಸವಾಲು

ಕರ್ನಾಟಕದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿರುವುದು ಕೇವಲ ಮಳೆ ಕಡಿಮೆಯಾಗಿದೆ...