ಮದ್ದೂರು | ವಿಶ್ವಮಾನವ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ: ರೈಲು ಪ್ರಯಾಣಿಕರಿಗೆ ಸಂಕಷ್ಟ, ಆಕ್ರೋಶ

Date:

ಮದ್ದೂರು ಮತ್ತು ಸುತ್ತಮುತ್ತಲಿನ ಭಾಗಗಳಿಂದ ಪ್ರತಿನಿತ್ಯ ಬೆಂಗಳೂರಿಗೆ ಉದ್ಯೋಗ ಮತ್ತು ಇತರೆ ಕೆಲಸಗಳಿಗೆ ತೆರಳುವ ರೈಲು ಪ್ರಯಾಣಿಕರಿಗೆ ನೈಋತ್ಯ ರೈಲ್ವೆ ಇಲಾಖೆಯ ನಿರ್ಧಾರವೊಂದು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ಹಿಂದೆ ಮದ್ದೂರಿನಿಂದ ಬೆಳಿಗ್ಗೆ 7 ಗಂಟೆಗೆ ಸಂಚರಿಸುತ್ತಿದ್ದ ‘ವಿಶ್ವಮಾನವ ಎಕ್ಸ್‌ಪ್ರೆಸ್‌’ ರೈಲಿನ ಸಮಯವನ್ನು ಈಗ 8 ಗಂಟೆ 5 ನಿಮಿಷಕ್ಕೆ ಮುಂದೂಡಲಾಗಿದೆ.

- Advertisement -

​”ಬೆಳಿಗ್ಗೆ 6ಕ್ಕೆ ಚೆನ್ನೈ ಎಕ್ಸ್‌ಪ್ರೆಸ್ ರೈಲು ತಪ್ಪಿದರೆ, ಬೆಂಗಳೂರಿಗೆ ಹೋಗುವವರಿಗೆ ಬೆಳಿಗ್ಗೆ 7:30ಕ್ಕೆ ಪ್ಯಾಸೆಂಜರ್ ರೈಲೇ ಗತಿ ಎಂಬಂತಾಗಿದೆ. ವಿಶ್ವಮಾನವ ರೈಲಿನ ಸಮಯ ಬದಲಾವಣೆಯಿಂದಾಗಿ 12 ಬೋಗಿಗಳ ಪ್ಯಾಸೆಂಜರ್ ರೈಲಿನಲ್ಲಿ ಪಾಂಡವಪುರ, ಮಂಡ್ಯ ಮತ್ತು ಮದ್ದೂರಿನ ಸಾವಿರಾರು ಪ್ರಯಾಣಿಕರು ಒಟ್ಟಿಗೆ ಏರುತ್ತಿದ್ದಾರೆ. ಇದರಿಂದಾಗಿ ರೈಲಿನಲ್ಲಿ ಕಾಲಿಡಲು ಜಾಗ ಇಲ್ಲದಂತಾಗಿದ್ದು, ಉಸಿರಾಡಲು ಕಷ್ಟವಾಗುವಷ್ಟು ಜನದಟ್ಟಣೆ ಉಂಟಾಗುತ್ತಿದೆ” ಎಂದು ಪ್ರಯಾಣಿಕರು ಅಳಲು ತೋಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

​ನಿಂತು ಪ್ರಯಾಣ ಮಾಡಲಾಗದೆ ಪ್ರಯಾಣಿಕರು ನಿತ್ಯವೂ ನರಕಯಾತನೆ ಅನುಭವಿಸುತ್ತಿದ್ದಾರೆ. ಸಮಯ ಬದಲಾವಣೆಯಿಂದ ಆಗುತ್ತಿರುವ ತೊಂದರೆಯ ಬಗ್ಗೆ ಈಗಾಗಲೇ ಸ್ಥಳೀಯ ಮದ್ದೂರು ಶಾಸಕರನ್ನು ಭೇಟಿ ಮಾಡಿರುವ ಪ್ರಯಾಣಿಕರ ನಿಯೋಗ, ಲಿಖಿತ ಮನವಿ ಸಲ್ಲಿಸಿದೆ.

ಪ್ರತಿದಿನ ಬೆಳಿಗ್ಗೆ 7:10ಕ್ಕೆ ಚನ್ನಪಟ್ಟಣದಿಂದ ಬೆಂಗಳೂರಿಗೆ ಹೊರಡುವ ಚನ್ನಪಟ್ಟಣ-ಕೆಎಸ್ಆರ್ ಬೆಂಗಳೂರು ಮೆಮೊ(ರೈಲು ಸಂಖ್ಯೆ: 06536) ರೈಲನ್ನು ಮಂಡ್ಯದಿಂದಲೇ ಪ್ರಾರಂಭಿಸುವಂತೆ ಮನವಿಯಲ್ಲಿ ಕೋರಲಾಗಿದೆ. ಈ ಬದಲಾವಣೆಯಿಂದ ಮಂಡ್ಯ ಭಾಗದ ನೂರಾರು ಉದ್ಯೋಗಿಗಳು ಮತ್ತು ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ರೈಲ್ವೆ ಹೋರಾಟಗಾರರು ಅಭಿಪ್ರಾಯಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಕಳಚಿದ ಕಬ್ಬಿನ ಟ್ರೈಲರ್ ಕೊಂಡಿ – ಕೂದಲೆಳೆ ಅಂತರದಲ್ಲಿ ತಪ್ಪಿದ ಭೀಕರ ದುರಂತ!

ಸಾರ್ವಜನಿಕರ ಮನವಿಯನ್ನು ಸ್ವೀಕರಿಸಿದ ಶಾಸಕರು, ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದು, ಮನವಿ ಪತ್ರದಲ್ಲಿರುವ ಅಂಶಗಳನ್ನು ಪರಿಶೀಲಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

ಇದೂ ಅಲ್ಲದೆ ಒಕ್ಕೂಟ ಸಚಿವ ಎಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಈ ಸಮಸ್ಯೆಯನ್ನು ಅವರ ಗಮನಕ್ಕೆ ತರಲು ಪ್ರಯಾಣಿಕರು ನಿರ್ಧರಿಸಿದ್ದಾರೆ. ​”ನಮಗೆ ಹಳೆಯ ಸಮಯದಲ್ಲೇ ರೈಲು ಬೇಕು, ಇಲ್ಲವೇ ಅದೇ ಸಮಯಕ್ಕೆ ಪರ್ಯಾಯವಾಗಿ ಮತ್ತೊಂದು ರೈಲಿನ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದರೆ ನಮ್ಮ ಸಂಕಷ್ಟಕ್ಕೆ ಕೊನೆಯೇ ಇಲ್ಲ” ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.‌

ವರದಿ : ಜಗದೀಶ್‌ ನಗರಕೆರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಅಂಬೇಡ್ಕರ್ ಅವಹೇಳನ ಆರೋಪ: ವೇದಮೂರ್ತಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಪೊಲೀಸ್ ಇಲಾಖೆಯ ಬಗ್ಗೆ ಅವಹೇಳನಕಾರಿ ಹೇಳಿಕೆ...

ತಮಿಳು ಕಾಲೊನಿ ನಿವಾಸಿಗಳನ್ನು ‘ಭಯೋತ್ಪಾದಕರು’ ಎಂದಿರುವ ಆರೋಪ: ರವೀಂದ್ರ ವಿರುದ್ಧ FIR ದಾಖಲಿಸಲು ಆಗ್ರಹ

ಮಂಡ್ಯ ನಗರದ ತಮಿಳು ಕಾಲೊನಿ ನಿವಾಸಿಗಳನ್ನು ‘ತಮಿಳುನಾಡಿನಿಂದ ಬಂದವರು’, ‘ಭಯೋತ್ಪಾದಕರು’ ಎಂದು...

ಮಂಡ್ಯದ ನ್ಯೂ ತಮಿಳು ಕಾಲೊನಿಯಲ್ಲಿ ‘SIR’ ಗೊಂದಲ: 207 ಮತದಾರರು ಎಲ್ಲಿ ಹೋದರು?

ವಿಶೇಷ ತೀವ್ರ ಪರಿಷ್ಕರಣೆ (Special Intensive Revision–SIR) ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯ...

ಬರದ ನೆರಳಲ್ಲಿ 101 ತಾಲ್ಲೂಕುಗಳು; ಮೈಸೂರು-ಚಾಮರಾಜನಗರ-ಮಂಡ್ಯದಲ್ಲಿ ರೈತರ ಬದುಕಿಗೆ ಕಠಿಣ ಸವಾಲು

ಕರ್ನಾಟಕದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿರುವುದು ಕೇವಲ ಮಳೆ ಕಡಿಮೆಯಾಗಿದೆ...