ಮದ್ದೂರು | ಕರವೇ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

Date:

​ಕರುನಾಡಿನ ನೆಲ, ಜಲ ಹಾಗೂ ನುಡಿಯ ರಕ್ಷಣೆಗಾಗಿ ಸದಾ ಮುಂಚೂಣಿಯಲ್ಲಿರುವ ಕರ್ನಾಟಕ ರಕ್ಷಣಾ ವೇದಿಕೆಯ (ಕರವೇ) ಮದ್ದೂರು ತಾಲೂಕು ಘಟಕದ ವತಿಯಿಂದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಸದಸ್ಯರ ಸೇರ್ಪಡೆ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.

- Advertisement -

​ಪಟ್ಟಣದ ಟಿ ಬಿ ವೃತ್ತದ ಬಳಿಯಿರುವ ಪ್ರವಾಸಿ ಮಂದಿರದಲ್ಲಿ ಮದ್ದೂರು ತಾಲೂಕು ಘಟಕದ ಅಧ್ಯಕ್ಷರಾದ ಮಣಿಗೆರೆ ರಾಮಚಂದ್ರೇಗೌಡ ಅವರ ಮುಂದಾಳತ್ವದಲ್ಲಿ ಈ ಸಭೆಯನ್ನು ಏರ್ಪಡಿಸಲಾಗಿತ್ತು. ಸಭೆಯಲ್ಲಿ ಮದ್ದೂರು ತಾಲೂಕಿನ ಎಲ್ಲಾ ಹೋಬಳಿ ಘಟಕಗಳ ಅಧ್ಯಕ್ಷರು, ಪಟ್ಟಣ ಘಟಕದ ಅಧ್ಯಕ್ಷರು, ಮಹಿಳಾ ಘಟಕದ ಪದಾಧಿಕಾರಿಗಳು ಹಾಗೂ ವಿವಿಧ ಗ್ರಾಮ ಘಟಕಗಳ ನೂತನ ಅಧ್ಯಕ್ಷರುಗಳನ್ನು ಒಮ್ಮತದಿಂದ ಆಯ್ಕೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

​ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ತಾಲೂಕು ಅಧ್ಯಕ್ಷರು, ಕರವೇ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡ ಅವರ ಹೋರಾಟದ ಹಾದಿ ಹಾಗೂ ಕನ್ನಡಪರ ಕಾಳಜಿಯನ್ನು ನೆನಪಿಸಿಕೊಂಡರು. “ಕನ್ನಡ ನಾಡು, ನುಡಿಗಾಗಿ ದುಡಿಯುವುದು ಒಂದು ಪುಣ್ಯದ ಕೆಲಸ. ನಾವೆಲ್ಲರೂ ನಾರಾಯಣಗೌಡರ ಕನಸಿಗೆ ರೆಕ್ಕೆಯಾಗಿ, ಅವರ ಬೆನ್ನೆಲುಬಾಗಿ ನಿಲ್ಲಬೇಕು. ಕರವೇ ಕೇವಲ ಒಂದು ಸಂಘಟನೆಯಲ್ಲ, ಅದೊಂದು ನಾಡು ಕಾಯುವ ಹೋರಾಟದ ಶಕ್ತಿ” ಎಂದು ಯುವಪಡೆಗೆ ಹುರಿದುಂಬಿಸಿದರು.

ಇದನ್ನೂ ಓದಿ: ಮಂಡ್ಯ | ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ತಾಂತ್ರಿಕ ಗೊಂದಲಗಳು; ಎನ್ಯೂಮರೇಷನ್ ಹಂತಕ್ಕೆ ಪೂರ್ವ ಸಿದ್ಧತೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ

​ಇದೇ ವೇಳೆ, ಸಂಘಟನೆಯ ಹಿರಿಯ ಹಾಗೂ ಅನುಭವಿ ಮುಖಂಡರಾದ ಮಹದೇವಣ್ಣ ಮತ್ತು ಗೀತಾ ಅವರನ್ನು ವೇದಿಕೆಗೆ ಆಹ್ವಾನಿಸಿ, ಶಾಲು ಹೊದಿಸಿ ಸನ್ಮಾನಿಸುವ ಮೂಲಕ ನೂತನ ಜವಾಬ್ದಾರಿಗಳನ್ನು ಹಸ್ತಾಂತರಿಸಲಾಯಿತು. ಸಭೆಯಲ್ಲಿ ಕರವೇಯ ಹಲವು ಕಾರ್ಯಕರ್ತರು ಪಾಲ್ಗೊಂಡು ಸಂಘಟನೆಯ ಬಲವರ್ಧನೆಗೆ ಕೈಜೋಡಿಸುವ ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಅಂಬೇಡ್ಕರ್ ಅವಹೇಳನ ಆರೋಪ: ವೇದಮೂರ್ತಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಪೊಲೀಸ್ ಇಲಾಖೆಯ ಬಗ್ಗೆ ಅವಹೇಳನಕಾರಿ ಹೇಳಿಕೆ...

ತಮಿಳು ಕಾಲೊನಿ ನಿವಾಸಿಗಳನ್ನು ‘ಭಯೋತ್ಪಾದಕರು’ ಎಂದಿರುವ ಆರೋಪ: ರವೀಂದ್ರ ವಿರುದ್ಧ FIR ದಾಖಲಿಸಲು ಆಗ್ರಹ

ಮಂಡ್ಯ ನಗರದ ತಮಿಳು ಕಾಲೊನಿ ನಿವಾಸಿಗಳನ್ನು ‘ತಮಿಳುನಾಡಿನಿಂದ ಬಂದವರು’, ‘ಭಯೋತ್ಪಾದಕರು’ ಎಂದು...

ಮಂಡ್ಯದ ನ್ಯೂ ತಮಿಳು ಕಾಲೊನಿಯಲ್ಲಿ ‘SIR’ ಗೊಂದಲ: 207 ಮತದಾರರು ಎಲ್ಲಿ ಹೋದರು?

ವಿಶೇಷ ತೀವ್ರ ಪರಿಷ್ಕರಣೆ (Special Intensive Revision–SIR) ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯ...

ಬರದ ನೆರಳಲ್ಲಿ 101 ತಾಲ್ಲೂಕುಗಳು; ಮೈಸೂರು-ಚಾಮರಾಜನಗರ-ಮಂಡ್ಯದಲ್ಲಿ ರೈತರ ಬದುಕಿಗೆ ಕಠಿಣ ಸವಾಲು

ಕರ್ನಾಟಕದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿರುವುದು ಕೇವಲ ಮಳೆ ಕಡಿಮೆಯಾಗಿದೆ...