ಮಂಡ್ಯ | ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಪ್ರಕರಣ ದಾಖಲು

Date:

ದಲಿತ ಯುವಕನನ್ನು ಅಡ್ಡಗಟ್ಟಿ, ಜಾತಿ ನಿಂಧನೆ ಮಾಡಿ, ಹಲ್ಲೆ ಮಾಡಿದ್ದ ಆರೋಪಿಗಳ ವಿರುದ್ಧ ಹಲಗೂಡು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗೌಡಗೆರೆ ಗ್ರಾಮದ ದಲಿತ ಯುವಕ ಕಿರಣ್ ಜಿ ಎಂಬಾತ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಾಲೂಕಿನ ಬಸವನಪುರ ಗ್ರಾಮದ ಬಿ.ಪಿ ಗಿರೀಶ, ಗಂಗಾಧರ, ಚನ್ನಿಪುರ ಗ್ರಾಮದ ಸುರೇಶ, ಅಗಸನಪುರ ಗ್ರಾಮದ ಅಪ್ಪಯ್ಯ, ಬಸವನಪುರದ ಪ್ರಸನ್ನ ಹಾಗೂ ಇತರರ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ಐಪಿಸಿ ಸೆಕ್ಷನ್‌ 504, 506, 355, 149, 323, 324, 327ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರಿಗೆ ದೂರು ನೀಡಿರುವ ಕಿರಣ್, “ನನ್ನ ಸ್ನೇಹಿತನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಹಿಂದಿನಿಂದ ಕಾರಿನಲ್ಲಿ ಬಂದ ಆರೋಪಿಗಳು ಬೈಕ್‌ಗೆ ಗುದ್ದುವ ರೀತಿಯಲ್ಲಿ ಬೆದರಿಸಿದ್ದಾರೆ. ಹಳೆಯ ದ್ವೇಷದಿಂದ ನಮ್ಮನ್ನು ತಡೆದು ನಿಲ್ಲಿಸಿ, ನನ್ನ ಕುತ್ತಿಗೆ ಹಿಡಿದು ಎಳೆದಾಡಿದ್ದಾರೆ. ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ‘ನಮ್ಮನ್ನು ಎದುರು ಹಾಕಿಕೊಂಡು ಮರೆಯುತ್ತಿದ್ದೀಯಾ. ನಿನ್ನ ಕೊಲೆ ಮಾಡುತ್ತೇವೆ’ ಎಂದು ಬೆದರಿಕೆ ಹಾಕಿದ್ದಾರೆ” ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನೀನು ದಲಿತ ಜಾತಿಗೆ ಸೇರಿದವನೆಂದು ನಿಂದಿಸಿ, ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ನನ್ನನ್ನು ಕೆಡವಿ, ಚಪ್ಪಲಿ ಕಾಲಿನಿಂದ ನನ್ನ ಎದೆ, ಹೊಟ್ಟೆಗೆ ಒದ್ದಿದ್ದಾರೆ. ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ನನ್ನ ಬಟ್ಟೆಯನ್ನು ಹರಿದು, ನಾನು ಕತ್ತಿನಲ್ಲಿ ಹಾಕಿದ್ದ 20 ಗ್ರಾಂ ಚಿನ್ನದ ಸರ ಹಾಗೂ ಜೇಬಿನಲ್ಲಿದ್ದ 50,000 ರೂಪಾಯಿಯನ್ನೂ ಕಿತ್ತುಕೊಂಡಿದ್ದಾರೆ. ಬರಿ ಚಡ್ಡಿಯಲ್ಲಿ 1 ಕಿ.ಮೀ ನಡೆಸಿಕೊಂಡು ಎಳೆದೊಯ್ದಿದ್ದಾರೆ” ಎಂದು ಕಿರಣ್ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಮಂಡ್ಯ | ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಜಾಮೀನು

“ಬಿ.ಪಿ ಗಿರೀಶ ಎಂಬಾತ ಗ್ರಾಮ ಪಂಚಾಯತಿ ಅಧ್ಯಕ್ಷನಾಗಿದ್ದು, ಆತ, ‘ನನಗೆ ರಾಜಕೀಯ ಬೆಂಬಲವಿದೆ. ನನ್ನ ಮೇಲೆ ಪ್ರಕರಣ ದಾಖಲಿಸಲು ಕೂಡ ಆಗುವುದಿಲ್ಲ. ನಾನು ಎಲ್ಲದರಿಂದ ಬಚಾವ್ ಆಗಬಲ್ಲೆ’ ಎಂದು ಹೇಳಿ, ಕಪಾಳಕ್ಕೆ ಹೊಡೆದಿದ್ದಾರೆ. ಪೊಲೀಸರಿಗೆ ದೂರು ನೀಡಿದರೆ, ಕೊಲೆ ಮಾಡುತ್ತೇವೆಂದು ಬೆದರಿಕೆ ಹಾಕಿದ್ದಾರೆ” ಎಂದು ಆರೋಪಿಸಿದ್ದಾರೆ.

ಕಿರಣ್ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಶಾಲೆಗಳಲ್ಲಿ ಮಕ್ಕಳ ರಕ್ಷಣಾ ಸಮಿತಿ ರಚನೆ ಕಡ್ಡಾಯ: ನ್ಯಾ. ನೇರಳೆ ವೀರಭದ್ರಯ್ಯ ಭವಾನಿ

ಮಕ್ಕಳ ಸುರಕ್ಷತೆ ಹಾಗೂ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರದ ಆದೇಶದಂತೆ ಪ್ರತಿ ಶಾಲೆಯಲ್ಲಿಯೂ...

ಚಿಕ್ಕಬಳ್ಳಾಪುರ | ವೀರಪ್ಪ ಮೊಯ್ಲಿ ವಿರಚಿತ ‘ವಿಶ್ವಸಂಸ್ಕೃತಿಯ ಮಹಾಯಾನ’ ಪುಸ್ತಕ ಬಿಡುಗಡೆ

ವೀರಪ್ಪ ಮೊಯ್ಲಿ ಮರೆಯಲಾರದ ರಾಜಕಾರಣಿಯೂ ಹೌದು ಮತ್ತು ಲೇಖಕರೂ ಹೌದು ಎಂದು...

ಬೆಂಗಳೂರು | ಕುಡಿಯುವ ನೀರಿಗಾಗಿ ಬಂಗಾರಪ್ಪನಗರ ನಿವಾಸಿಗಳ ಪರದಾಟ

ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ನೀರಿಗೆ ಹಾಹಾಕಾರ ಶುರುವಾಗಿದೆ. ಇದೀಗ, ರಾಜರಾಜೇಶ್ವರಿ...

ಚಿತ್ರದುರ್ಗ | ಹಾಳಾಗಿದೆ ಆರೋಗ್ಯ ಉಪಕೇಂದ್ರ; ಗ್ರಾಮಸ್ಥರಿಗೆ ಆರೋಗ್ಯ ಸೇವೆಯೂ ದೂರ

ಚಿಕ್ಕಂದವಾಡಿಯಲ್ಲಿ ಒಂದು ಪ್ರಾಥಮಿಕ ಆರೋಗ್ಯ ಉಪ ಕೇಂದ್ರವಿದೆ. ಆದರೆ, ಅದು ನಿಜಕ್ಕೂ...