ಮಂಡ್ಯ | ಅಮೃತ ನಗರೋತ್ಥಾನ ಯೋಜನೆ; ಕಾಮಗಾರಿ ಪರಿಶೀಲನಾ ಸಭೆ

Date:

Advertisements

ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ( ಹಂತ-4 )ಸ್ಥಳೀಯ ಸಂಸ್ಥೆಗಳಿಗೆ ಅನುಮೋದನೆಯಾದ ಕ್ರಿಯಾಯೋಜನೆಗಳ ಪೈಕಿ ಪ್ರಾರಂಭವಾಗದೆ ಇರುವ ಕಾಮಾಗಾರಿಗಳನ್ನು ಮಂಡ್ಯ ಜಿಲ್ಲೆಯ ಶಾಸಕರುಗಳೊಂದಿಗೆ ಚರ್ಚಿಸಿ ಟೆಂಡರ್ ಕರೆದು ಪ್ರಾರಂಭಿಸಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು.

ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ನಡೆದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯ(ಹಂತ-4) ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. “ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ(ಹಂತ-4) ಜಿಲ್ಲೆಗೆ ಒಟ್ಟು 105 ಕೋಟಿ ರೂ. ಹಂಚಿಕೆಯಾಗಿದೆ. ಈಗಾಗಲೇ ಪ್ರಗತಿಯಲ್ಲಿರುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಕಾಮಗಾರಿ ವೇಳೆ ಶಾಸಕರುಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಹಂತ ಹಂತವಾಗಿ ಪೂರ್ಣಗೊಳಿಸಿ” ಎಂದರು‌.

“ಕುಡಿಯುವ ನೀರು, ಒಳಚರಂಡಿ, ರಸ್ತೆ ಅಭಿವೃದ್ಧಿ, ಮಳೆನೀರು ಚರಂಡಿ ಸೇರಿದಂತೆ ಇತರೆ ಯೋಜನೆಗಳ ಅಭಿವೃದ್ಧಿ ನಗರೋತ್ಥಾನದ ಉದ್ದೇಶವಾಗಿದ್ದು, ಇದನ್ನು ಸಮಪರ್ಕವಾಗಿ ಬಳಕೆ ಮಾಡಿಕೊಳ್ಳಿ” ಎಂದು ಅಧಿಕಾರಿಗಳಿಗೆ ತಿಳಿಸಿದರು.

Advertisements

“ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ 8 ಕಾಮಾಗಾರಿಗಳು ಪ್ರಗತಿಯಲ್ಲಿದ್ದು, 5 ಕಾಮಗಾರಿಗಳು ಟೆಂಡರ್ ಪ್ರಕ್ರಿಯೆಯಲ್ಲಿದೆ. 3 ಟೆಂಡರ್ ಕರೆಯಬೇಕಿದ್ದು, 9 ಕಾಮಗಾರಿಗಳು ಪೂರ್ಣಗೊಂಡಿವೆ. ಮದ್ದೂರು ವ್ಯಾಪ್ತಿಯಲ್ಲಿ 6 ಕಾಮಾಗಾರಿಗಳು ಪ್ರಗತಿಯಲ್ಲಿದ್ದು, 6 ಕಾಮಗಾರಿಗಳನ್ನು ಟೆಂಡರ್ ಕರೆಯಬೇಕಿದೆ. 7 ಕಾಮಗಾರಿಗಳು ಪೂರ್ಣಗೊಂಡಿವೆ. ಮಳವಳ್ಳಿ ವ್ಯಾಪ್ತಿಯಲ್ಲಿ 3 ಕಾಮಾಗಾರಿಗಳು ಪ್ರಗತಿಯಲ್ಲಿದ್ದು, 6 ಕಾಮಗಾರಿಗಳು ಟೆಂಡರ್ ಪ್ರಕ್ರಿಯೆಯಲ್ಲಿದೆ. 4 ಟೆಂಡರ್ ಕರೆಯಬೇಕಿದ್ದು, 8 ಕಾಮಗಾರಿಗಳು ಪೂರ್ಣಗೊಂಡಿವೆ” ಎಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷಾರಮಣಿ ಅವರು ಸಭೆಗೆ ಮಾಹಿತಿ ನೀಡಿದರು.

“ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ 7 ಕಾಮಾಗಾರಿಗಳನ್ನು ಟೆಂಡರ್ ಕರೆಯಬೇಕಿದ್ದು, 10 ಕಾಮಗಾರಿಗಳು ಪೂರ್ಣಗೊಂಡಿವೆ. ಕೆ.ಆರ್ ಪೇಟೆ ವ್ಯಾಪ್ತಿಯಲ್ಲಿ 3 ಕಾಮಾಗಾರಿಗಳು ಪ್ರಗತಿಯಲ್ಲಿದ್ದು, 7 ಕಾಮಗಾರಿಗಳ ಟೆಂಡರ್ ಕರೆಯಬೇಕಿದೆ. 5 ಕಾಮಗಾರಿಗಳು ಪೂರ್ಣಗೊಂಡಿವೆ. ಪಾಂಡವಪುರ ವ್ಯಾಪ್ತಿಯಲ್ಲಿ 7 ಕಾಮಾಗಾರಿಗಳು ಪ್ರಗತಿಯಲ್ಲಿದ್ದು, 10 ಕಾಮಗಾರಿಗಳ ಟೆಂಡರ್ ಕರೆಯಬೇಕಿದೆ. 1 ಕಾಮಗಾರಿ ಪೂರ್ಣಗೊಂಡಿದೆ. ನಾಗಮಂಗಲ ವ್ಯಾಪ್ತಿಯಲ್ಲಿ 4 ಕಾಮಾಗಾರಿಗಳು ಪ್ರಗತಿಯಲ್ಲಿದ್ದು, 5 ಕಾಮಗಾರಿಗಳು ಟೆಂಡರ್ ಪ್ರಕ್ರಿಯೆಯಲ್ಲಿದೆ. 1 ಕಾಮಗಾರಿಯ ಟೆಂಡರ್ ಕರೆಯಬೇಕಿದ್ದು, 6 ಕಾಮಗಾರಿಗಳು ಪೂರ್ಣಗೊಂಡಿವೆ. ಬೆಳ್ಳೂರು ವ್ಯಾಪ್ತಿಯಲ್ಲಿ 6 ಕಾಮಗಾರಿಗಳು ಟೆಂಡರ್ ಪ್ರಕ್ರಿಯೆಯಲ್ಲಿವೆ. 1 ಕಾಮಗಾರಿಯ ಟೆಂಡರ್ ಕರೆಯಬೇಕಿದ್ದು, 7 ಕಾಮಗಾರಿಗಳು ಪೂರ್ಣಗೊಂಡಿವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಹುಬ್ಬಳ್ಳಿ | ಸ್ಮಶಾನ ಜಾಗವಿಲ್ಲದೆ ಗ್ರಾಮಸ್ಥರ ಪರದಾಟ

“ಸ್ವಚ್ಛ ಭಾರತ್ ಯೋಜನೆಯಡಿ ಮದ್ದೂರು ಪುರಸಭೆ- 72.75 ಲಕ್ಷ ರೂ, ಮಳವಳ್ಳಿ ಪುರಸಭೆ- ರೂ 34.70 ಲಕ್ಷ ರೂ, ಶ್ರೀರಂಗಪಟ್ಟಣ ಪುರಸಭೆ- 67.08 ಲಕ್ಷ ರೂ, ಕೆ ಆರ್ ಪೇಟೆ ಪುರಸಭೆ- 26.07 ಲಕ್ಷ ರೂ ಲಭ್ಯವಿದ್ದು, ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಘನ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳಲಾಗುವುದು” ಎಂದರು.

ಸಭೆಯಲ್ಲಿ ಶಾಸಕರುಗಳಾದ ಪಿ ಎಂ ನರೇಂದ್ರಸ್ವಾಮಿ, ಪಿ ರವಿಕುಮಾರ್, ರಮೇಶ್ ಬಾಬು ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಕೆ‌ ಎಂ ಉದಯ್, ಕೆ ಟಿ ಮಂಜು, ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಯ ಶೇಖ್ ತನ್ವಿ ಆಸಿಫ್, ಪೊಲೀಸ್ ವರಿಷ್ಠಾಧಿಕಾರಿ ಎನ್‌ ಯತೀಶ್ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು‌.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಹೇಮಾವತಿ ನಾಲೆ ಅಕ್ರಮ; ಸರ್ಕಾರಿ ಗೋಮಾಳ ಒತ್ತುವರಿ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

ಮಂಡ್ಯ ಜಿಲ್ಲೆ, ಕೃಷ್ಣರಾಜ ಪೇಟೆ ತಾಲ್ಲೂಕು ಕಚೇರಿ ಅವರಣ ದಲ್ಲಿಂದು ಕರ್ನಾಟಕ...

ಮಂಡ್ಯ | ಗುಡಿ, ಮಸೀದಿ, ಚರ್ಚುಗಳ ಪ್ರಭಾವದಿಂದ ದೂರವಿರಬೇಕಾಗಿದೆ: ನ್ಯಾ. ಬಿ ಟಿ ವಿಶ್ವನಾಥ್

ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ದೇಶದ ಮಕ್ಕಳನ್ನು ನಾವು ಗುಡಿ, ಮಸೀದಿ,...

ಮಂಡ್ಯ | ಅಬಕಾರಿ ಇಲಾಖೆಯಲ್ಲಿ ಭಾರೀ ಭ್ರಷ್ಟಾಚಾರ: 60 ಲಕ್ಷ ರೂ. ಲಂಚಕ್ಕೆ ಬೇಡಿಕೆ ಜಿಲ್ಲಾಧಿಕಾರಿ – ಆರೋಪ

ಬೋರ್ಡಿಂಗ್‌ ಮತ್ತು ಲಾಡ್ಜಿಂಗ್‌ ತೆರೆಯಲು 'ಸಿಎಲ್‌7' ಪರವಾನಗಿ ನೀಡಲು ಮಂಡ್ಯ ಅಬಕಾರಿ...

ಮಂಡ್ಯ | ಸ್ವಾತಂತ್ರ್ಯ ಹೋರಾಟದಲ್ಲಿ ಕನ್ನಡಿಗರ ಪಾತ್ರ ದೊಡ್ಡದಿದೆ: ಸಚಿವ ಎನ್ ಚಲುವರಾಯಸ್ವಾಮಿ

ಸ್ವಾತಂತ್ತ್ಯ ಹೋರಾಟದಲ್ಲಿ ಕನ್ನಡಿಗರ ಪಾತ್ರ ದೊಡ್ಡದು. ಕಿತ್ತೂರು ರಣಿ ಚೆನ್ನಮ್ಮ, ಸಂಗೊಳ್ಳಿ...

Download Eedina App Android / iOS

X