ಮಂಡ್ಯ | 1,146 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Date:

Advertisements

ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಹೇಳುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಉತ್ತರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ 1,146 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

“ಕಾವೇರಿ ಅಭಿವೃದ್ಧಿ ನಿಗಮ ಒಂದರಲ್ಲೇ ಎರಡು ವರ್ಷದಲ್ಲಿ 560 ಕೋಟಿ ರೂ. ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ನಾಲ್ಕು ವರ್ಷ ಬಿಜೆಪಿ ಸರ್ಕಾರ ಮದ್ದೂರಿನಲ್ಲಿ ಏನು ಮಾಡಿದೆ ಎನ್ನುವುದನ್ನು ಜನತೆಗೆ ತೋರಿಸಿ. ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಮಂಡ್ಯ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಚುಕ್ತಾ ಮಾಡಿದ್ದು ನಾವು, ಕಾರ್ಖಾನೆಯ ಪುನಶ್ಚೇತನಕ್ಕೆ 52 ಕೋಟಿ ರೂಪಾಯಿ ಕೊಟ್ಟಿದ್ದು ನಾವು.‌ ಹಾಲು ಉತ್ಪಾದಕರ ಸಂಘದ ಮನವಿಗೆ ಸ್ಪಂದಿಸಿ ಹಾಲು ಉತ್ಪಾದಕರಿಗೆ ಲೀಟರ್ ಗೆ 5 ರೂ ಸಹಾಯಧನ‌ ಒದಗಿಸಿದ್ದು ನಾವು. ಈಗ ಮತ್ತೆ ಮಂಡ್ಯ ಸಕ್ಕರೆ ಕಾರ್ಖಾನೆಗೆ 10 ಕೋಟಿ ರೂ ಕೊಟ್ಟಿರುವುದು ನಮ್ಮ ಸರ್ಕಾರ. ಮಂಡ್ಯ ಕೃಷಿ ವಿವಿ ಆರಂಭಿಸಿ, ಅಗತ್ಯ ಅನುದಾನ‌ ಕೊಟ್ಟಿರುವುದು ನಾವು. ಇದು ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ಸರ್ಕಾರದ ಬದ್ಧತೆ” ಎಂದು ವಿವರಿಸಿದರು.

Advertisements

“ನಾವು ಜಾರಿ ಮಾಡಿದ ಐದು ಗ್ಯಾರಂಟಿಗಳಿಂದಾಗಿ ರಾಜ್ಯದ ಜನರ ಕೊಳ್ಳುವ ಹೆಚ್ಚಾಗಿ, ರಾಜ್ಯದ ಆರ್ಥಿಕತೆಗೆ ಶಕ್ತಿ ಬಂದಿದೆ. ಪರಿಣಾಮ ಇಡೀ ದೇಶದಲ್ಲಿ ರಾಜ್ಯದ ತಲಾ ಆದಾಯ ನಂಬರ್ ಒನ್ ಆಗಿದೆ ಎಂದು ಮೆಚ್ವುಗೆ ಸೂಚಿಸಿದರು.

ಮಂಡ್ಯ ನಗರದಲ್ಲಿ 100 ಅಡಿ ರಸ್ತೆ ಮಾಡಲು ಶಾಸಕ ಉದಯ್ ಅವರ ಬೇಡಿಕೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಘೋಷಿಸಿದ ಮುಖ್ಯಮಂತ್ರಿಗಳು, ಶಾಸಕ‌ ಉದಯ್ ಅವರದ್ದು ಕಡಿಮೆ ಮಾತು, ಹೆಚ್ಚು ಕೆಲಸ ಮಾಡುತ್ತಾರೆ ಎಂದು ಪ್ರಶಂಶಿಸಿದರು.

ರಾಜ್ಯದ ಪಾಲಿನ ಗೊಬ್ಬರವನ್ನೂ ಕೇಂದ್ರ ಕೊಡುತ್ತಿಲ್ಲ

“ರಾಜ್ಯಕ್ಕೆ ಕೊಡಬೇಕಾದಷ್ಟು ಗೊಬ್ಬರ ಕೊಡದೆ ಕೇಂದ್ರ ಸರ್ಕಾರ ರಾಜ್ಯದ ರೈತರ ವಿರೋಧಿಯಾಗಿದೆ. ನಮ್ಮ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದು ಅಗತ್ಯ ಗೊಬ್ಬರ ಸರಬರಾಜು ಮಾಡುವಂತೆ ಒತ್ತಾಯಿಸಿ ಒಂದು ವಾರ ಕಳೆದರೂ ಇದುವರೆಗೂ ಕೊಟ್ಟಿಲ್ಲ. ಬಿಜೆಪಿ ಸಂಸದರು ಮತ್ತು ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು ಕೇಂದ್ರದ ಜೊತೆ ಮಾತನಾಡಿ ಗೊಬ್ಬರ ಕೊಡಿಸಲಿ” ಎಂದು ಸವಾಲು ಹಾಕಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಪಿರಿಯಾಪಟ್ಟಣ ವೆಂಕಟೇಶ್, ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್, ರಹೀಂ ಖಾನ್, ಶಾಸಕರುಗಳಾದ ರವಿ ಗಣಿಗ, ದಿನೇಶ್ ಗೂಳೀಗೌಡ ಸೇರಿ ಹಲವು ಪ್ರಮುಖರು ಮುಖ್ಯ ಅತಿಥಿಗಳಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ‌ ಉದಯ್ ಅವರು ಅಧ್ಯಕ್ಷತೆ ವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X