ಮಂಡ್ಯ | ಕಾವೇರಿಗೆ ನಮಿಸಲು ಅವಕಾಶ ನಿರಾಕರಣೆ; ನಿಗಮದ ಮುಖ್ಯ ಎಂಜಿನಿಯರ್ ಕ್ಷಮೆ ಕೋರುವಂತೆ ರೈತ ಸಂಘ ಆಗ್ರಹ

Date:

ಕಾವೇರಿ ಮಾತೆಗೆ ನಮಿಸಲು ಅವಕಾಶ ನಿರಾಕರಣೆ ಮಾಡಿದ ಕಾವೇರಿ ನಿಗಮದ ಮುಖ್ಯ ಎಂಜಿನಿಯರ್ ರಘುರಾಮ್ ಅವರು ಕ್ಷೇಮೆ ಕೋರಬೇಕು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹಾಗೂ ಕಾರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಪಟ್ಟುಹಿಡಿದರು.

- Advertisement -

ಮಂಡ್ಯ ಜಿಲ್ಲೆಯ ಕೆಆರ್‌ಎಸ್‌ ಬಳಿ ದರ್ಶನ್ ಪುಟ್ಟಣ್ಣಯ್ಯ ಹಾಗೂ ಕಾರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಆಹೋರಾತ್ರಿ ಧರಣಿ ವೇಳೆ ಪ್ರತಿಭಟನಾಕಾರರು ಪ್ರತಿಭಟನಾ ಸ್ಥಳದಿಂದ ಬೃಂದಾವನದ ಒಳಗಿರುವ ಕಾವೇರಿ ಮಾತಿಗೆ ನಮಿಸಲು ಪಂಜಿನ ಮೆರವೆಣೆಗೆ ಮೂಲಕ ಮುತ್ತಿಗೆ ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಈ ವೇಳೆ ಕಾವೇರಿ ನಿಗಮದ ಮುಖ್ಯ ಎಂಜಿನಿಯರ್ ರಘುರಾಮ್ ಅವರು ಕಾವೇರಿ ಮಾತೆಗೆ ನಮಿಸಲು ಅವಕಾಶ ನಿರಾಕರಿಸಿದ್ದರಿಂದ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಮಾತನಾಡಿ, “ನಿಗಮದ ಎಂಜಿನಿಯರ್‌ ಪ್ರತಿಭಟನಾಕಾರರ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಕಾವೇರಿ ಮಾತೆ ಪ್ರತಿಮೆ ಬಳಿಯೇ ಚಳವಳಿ ಮಾಡಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಇಲಾಖೆಗಳಲ್ಲಿನ ಬೇಕಾಬಿಟ್ಟಿ ವರ್ಗಾವಣೆಗೆ ಕಡಿವಾಣ ಹಾಕಿದ ಸಿಎಂ ಸಿದ್ದರಾಮಯ್ಯ

ಕಾವೇರಿ ನಿಗಮದ ಮುಖ್ಯ ಎಂಜಿನಿಯರ್ ರಘುರಾಮ್ ಅವರು ಶಾಸಕರು ಹಾಗೂ ರೈತ ಸಂಘದ ಕ್ಷಮೆ ಕೋರಿದ ಬಳಿಕ ಎಂದಿನಂತೆ ಆಹೋರಾತ್ರಿ ಧರಣಿ ಸ್ಥಳದಲ್ಲಿ ಪ್ರತಿಭಟನೆ ಮುಂದುವರಿಸಿದರು.

ಈ ವೇಳೆ ಬಡಗಪುರ ನಾಗೇಂದ್ರ, ಕೆಂಪೂಗೌಡ್ರು, ಪಿ ನಾಗರಾಜ್, ಕೊಡಗಿನ ಮನುಸೋಮಯ್ಯ, ಹೋಸಕೋಟೆ ಬಸವರಾಜ್ ಸೇರಿದಂತೆ ಪಾಂಡವಪುರ, ಶ್ರೀರಂಗಪಟ್ಟಣದ ರೈತ ಸಂಘದ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...