ಮಂಡ್ಯ | ವಿದ್ಯುತ್ ತಂತಿ ತುಳಿದು ರೈತ ಸಾವು; ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

Date:

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಬೇಳತೂರು ಗ್ರಾಮದಲ್ಲಿ ನಡೆದಿದೆ.

- Advertisement -

ಗ್ರಾಮದ ರವಿಕುಮಾರ್ ಮೃತ ರೈತ. ತಾಲೂಕಿನ ರಾಜೇನಹಳ್ಳಿ ಗ್ರಾಮದವರಾದ ರವಿಕುಮಾರ್, ಗುರುವಾರ ಬೆಳತೂರು ಬಳಿ ಇರುವ ತಮ್ಮ ಜಮೀನಿಗೆ ತೆರಳಿದ್ದರು. ಈ ವೇಳೆ, ತುಂಡಾಗಿ ಬಿದ್ದ ವಿದ್ಯುತ್‌ ತಂತಿಯನ್ನು ಗಮನಿಸದೆ ತುಳಿದಿದ್ದಾರೆ. ಪರಿಣಾಮ, ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಸವಣ್ಣನವರಿಂದ ಗಾಂಧಿಯವರೆಗೆ: ಆಯ್ದ ಕಥನಗಳ ಮೂಲಕ ಇತಿಹಾಸವನ್ನು ತಿರುಚುವ...

ಇತಿಹಾಸವನ್ನು ವಿಮರ್ಶಿಸುವ ಹಕ್ಕು ಎಲ್ಲರಿಗೂ ಇದೆ; ಆದರೆ ಇತಿಹಾಸವನ್ನು ತಿರುಚುವ ಹಕ್ಕು ಯಾರಿಗೂ ಇಲ್ಲ. ಬಸವಣ್ಣನವರನ್ನು ವೈದಿಕ ಚೌಕಟ್ಟಿಗೆ ಸೀಮಿತಗೊಳಿಸುವುದಾಗಲಿ, ಗಾಂಧಿಯವರ ಹತ್ಯೆಯನ್ನು ಗೋಡ್ಸೆಯ ಸಮರ್ಥನೆಯ ಮೂಲಕ ನ್ಯಾಯೀಕರಿಸುವುದಾಗಲಿ ಇತಿಹಾಸದ ಸಮಗ್ರ ಅಧ್ಯಯನಕ್ಕೆ...

ಕೋಲಾರ ಕ್ಲಾಕ್ ಟವರ್ ವಿವಾದ: ಜಿಲ್ಲಾಡಳಿತದ ನಿರ್ಧಾರದತ್ತ ಜನರ...

ಕೋಲಾರ ನಗರದ ಇತಿಹಾಸ ಪ್ರಸಿದ್ಧ ಕ್ಲಾಕ್‌ ಟವರ್‌ನಲ್ಲಿ ಸಂಸದರ ಅನುದಾನದಲ್ಲಿ ಅಳವಡಿಸಲಾಗುತ್ತಿರುವ ಎಚ್‌ಎಂಟಿ ಗಡಿಯಾರದಲ್ಲಿ ಸಂಸದ ಮಲ್ಲೇಶ್‌ ಬಾಬು ಹೆಸರಿರಬೇಕೋ, ಬೇಡವೋ ಎಂದು ಕಳೆದ ಮೂರ್ನಾಲ್ಕು ದಿನಗಳಿಂದ ನಡೆಯುತ್ತಿರುವ ಚರ್ಚೆ ಈಗ ವಿವಾದದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಮಧ್ಯಹ್ನ ಹುಲ್ಲು ಕೊಯ್ಯಲು ಹೋದವರು ಸಂಜೆಯಾದರೂ ಮನೆಗೆ ಬರದ್ದನ್ನು ಗಮನಿಸಿದ ರವಿಕುಮಾರ್ ಅವರ ಕುಟುಂಬಸ್ಥರು, ಜಮೀನಿಗೆ ಬಂದಿದ್ದಾರೆ. ಅಲ್ಲಿ, ರವಿಕುಮಾರ್ ಅವರ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ.

ರವಿಕುಮಾರ್ ಸಾವಿಗೆ ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಕೆಆರ್‌ ಪೇಟೆ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಡಲ ಅಲೆಗಳ ನಡುವೆ ಜೀವ ಉಳಿಸುವ ಕಾವಲುಗಾರರು: ಕಾಪು ಬೀಚ್‌ನ ರಿಯಲ್ ಹೀರೋಗಳು!

ಸಮಾಜದ ಕಣ್ಣಿಗೆ ಸದಾ ಕಾಣಿಸಿಕೊಳ್ಳದಿದ್ದರೂ, ಅಪಾಯದ ಅಲೆಗಳ ನಡುವೆ ಸಿಲುಕಿದವರ ಪಾಲಿಗೆ...

ಗದಗ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನ.26ರಿಂದ ರೈತರಿಂದ ಅನಿರ್ದಿಷ್ಟಾವಧಿ ಧರಣಿ

"ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ...

ಚಿಕ್ಕಮಗಳೂರು | 36 ಜಿ.ಪಂ. ಕ್ಷೇತ್ರಗಳ ಅಂತಿಮ ಮೀಸಲಾತಿ ಪಟ್ಟಿ ಬಿಡುಗಡೆ 

ರಾಜ್ಯ ಸರ್ಕಾರ ನವೆಂಬರ್ 23ರಂದು ಜಿಲ್ಲೆಯ 36 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ...

ಮೈಸೂರಿನಲ್ಲಿ ಸಂವಿಧಾನ ಜಾಗೃತಿಯ ಅಭಿಯಾನಕ್ಕೆ ಸಜ್ಜು: ನಾಳೆ ಚಾಲನೆ

ಭಾರತದ ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವದ ಮೌಲ್ಯಗಳು, ಸಾಮಾಜಿಕ ನ್ಯಾಯ, ಸಮಾನತೆ ಹಾಗೂ...