ಮಂಡ್ಯ | ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ; ದರೋಡೆ

Date:

ಒಂಟಿ ಮನೆಯೊಂದಕ್ಕೆ ನುಗ್ಗಿ, ಮನೆಯಲ್ಲಿದ್ದವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ದುಷ್ಕರ್ಮಿಗಳು, ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ನಡೆದಿದೆ.

- Advertisement -

ತಾಲೂಕಿನ ಚಾಮಲಾಪುರ ಗೇಟ್‌ನಲ್ಲಿ ಭಾನುವಾರ ಘಟನೆ ನಡೆದಿದೆ. ಕಾರಿನಲ್ಲಿ ಬಂದ ನಾಲ್ಕು ಮಂದಿ ದರೋಡೆಕೋರರು ಒಂಟಿ ಮನೆಗೆ ನುಗ್ಗಿ, ಮನೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸಿದ್ದಾರೆ. ಬೆಲೆ ಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಘಟನೆಯಲ್ಲಿ ಮನೆ ಮಾಲೀಕ ಮಂಜುನಾಥ್ ಅವರಿಗೆ ಗಂಭೀರ ಗಾಯಗಳಾಗಿವೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮಂಜುನಾಥ್ ಅವರ ಪತ್ನಿ, ತಂದೆ, ತಾಯಿ ಹಾಗೂ ಮಗಳ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ವೇಳೆ ಮಂಜುನಾಥ್‌ ಅವರು ತಮ್ಮ ಸೋದರನಿಗೆ ಕರೆ ಮಾಡಿದ್ದಾರೆ. ಘಟನೆ ಬಗ್ಗೆ ಅರಿತ ಸೋದರ ಸ್ಥಳ ಬಂದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬೆಳ್ಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೂಡಲೇ ಸಾಲಮನ್ನಾ ಮಾಡಿ: ನರಸಿಂಗ್‌ರಾವ್‌ ಸರರ್ಕಿಲ್‌ ಆಗ್ರಹ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ...

ಕೋಲಾರ | ಜಾನಪದ ಗಾಯಕ ಗೋ.ನಾ. ಸ್ವಾಮಿಗೆ ಕಲಾದರ್ಪಣ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಜಿಲ್ಲೆಯ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಸಂರಕ್ಷಣಾ...