ಮಂಡ್ಯ | ರೈಲಿನಲ್ಲಿ ಸೀಟಿಗಾಗಿ ಜಗಳ: ಇಬ್ಬರಿಗೆ ಚಾಕು ಇರಿತ, ಆರೋಪಿಗಳು ವಶ

Date:

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸೀಟಿಗಾಗಿ ಪ್ರಯಾಣಿಕರ ನಡುವೆ ಗಲಾಟೆ ನಡೆದ ಪರಿಣಾಮ ಇಬ್ಬರಿಗೆ ಚಾಕು ಇರಿತವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಸಮೀಪ ನಡೆದಿದೆ. 

- Advertisement -

ಶಿವಕುಮಾರ್ ಮತ್ತು ಕುಮಾರ್ ಚಾಕು ಇರಿತಕ್ಕೊಳಗಾದವರು. ಗಾಯಾಳುಗಳನ್ನು ಮದ್ದೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗೆ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ‘ರಾಜ-ರಾಣಿ’ ರೈಲಿನಲ್ಲಿ ಘಟನೆ ನಡೆದಿದ್ದು, ಸೀಟಿಗಾಗಿ ಗಲಾಟೆಯಾದ ಸಂದರ್ಭ ಪ್ರಶ್ನಿಸಲು ಹೋದ ತುಮಕೂರು ಮೂಲದ ಶಿವಕುಮಾರ್‌ ಮತ್ತು ರೈಲ್ವೆ ಸಿಬ್ಬಂದಿ ಕುಮಾರ್ ಅವರಿಗೆ ಆರೋಪಿಗಳು ಚಾಕುವಿನಿಂದ ಇರಿದಿದ್ದಾರೆ. 

ಈ ಸುದ್ದಿ ಓದಿದ್ದೀರಾ? ಕೊಡಗು | ಮುಂಗಾರು ಮುನ್ನ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಭೋಸರಾಜು

ಸುಬಾನ್ ಖುರೇಷಿ, ಶೋಯಬ್, ವಾಸಿಮ್ ಚಾಕುವಿನಿಂದ ಹಲ್ಲೆ ನಡೆಸಿದ ಆರೋಪಿಗಳು. ಇವರು ಕುಟುಂಬಸ್ಥರೊಂದಿಗೆ ರೈಲಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದರು. 

ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದ ಮೂವರು ಪ್ರಯಾಣಿಕರನ್ನು ರೈಲು ಪ್ರಯಾಣಿಕರು ಹಾಗೂ ಸಾರ್ವಜನಿಕರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...