ಮಂಡ್ಯ | ವಿದ್ಯಾರ್ಥಿಗಳ ಸಂಕಷ್ಟಕ್ಕೆ ಕೊನೆಗೂ ಸಿಕ್ಕ ಮುಕ್ತಿ; ಕಾಲೇಜಿಗೆ ಬಸ್‌ ಸೇವೆ ಆರಂಭ

Date:

ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ಪಟ್ಟಣದ ಬಸ್‌ ನಿಲ್ದಾಣದಿಂದ ಸರ್ಕಾರ ಪ್ರಥಮ ದರ್ಜೆ ಕಾಲೇಜು, ಜೂನಿಯರ್ ಕಾಲೇಜು, ಮಹಿಳಾ ಸರ್ಕಾರಿ ಕಾಲೇಜು ಮತ್ತು ಸರ್ಕಾರಿ ಐಟಿಐ ಕಾಲೇಜುಗಳಿಗೆ ಬಸ್‌ ಸೇವೆ ಆರಂಭವಾಗಿದೆ. ಕೆ.ಆರ್‌ ಪೇಟೆ ಶಾಸಕ ಎಚ್‌.ಟಿ ಮಂಜು ಅವರು ಬಸ್‌ ಸಂಚಾರಕ್ಕೆ ಹಸಿರು ನಿಶಾನೆ ತೋರಿದ್ದಾರೆ.

ಕೆ.ಆರ್‌ ಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ಕಾರಿ ಐಟಿಐ ಕಾಲೇಜುಗಳು ಪಟ್ಟಣದ ಬಸ್‌ ನಿಲ್ಧಾಣದಿಂದ 4 ಕಿ.ಮೀ ದೂರದಲ್ಲಿವೆ. ಮಹಿಳಾ ಸರ್ಕಾರಿ ಕಾಲೇಜು ಮತ್ತು ಸರ್ಕಾರಿ ಜೂನಿಯರ್ ಕಾಲೇಜು 3 ಕಿ.ಮೀ ದೂರದಲ್ಲಿವೆ. ವಿದ್ಯಾರ್ಥಿಗಳು ಪ್ರತಿನಿತ್ಯ ಬಸ್‌ ನಿಲ್ದಾಣದಿಂದ ಕಾಲೇಜಿಗೆ, ಕಾಲೇಜಿನಿಂದ ಬಸ್‌ ನಿಲ್ದಾಣಕ್ಕೆ ನಡೆದುಕೊಂಡೇ ಹೋಗಬೇಕಿತ್ತು.

ಹೀಗಾಗಿ, ವಿದ್ಯಾರ್ಥಿಗಳು ನಡೆದೇ ಸುಸ್ತಾಗುತ್ತಿದ್ದರಿಂದ ಬೋಧನೆಯ ಕಡೆಗೆ ಗಮನವಿಟ್ಟು ಆಲಿಸಲಾಗುತ್ತಿಲ್ಲವೆಂದು ಹೇಳುತ್ತಲೇ ಇದ್ದರು. ಹಲವಾರು ವರ್ಷಗಳಿಂದ ಬಸ್‌ ನಿಲ್ದಾಣದಿಂದ ಕಾಲೇಜಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದ್ದರು. ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಬಸ್‌ ವ್ಯವಸ್ಥೆಗಾಗಿ ಒತ್ತಾಯಿಸಿ ಹಲವು ಬಾರಿ ಪ್ರತಿಭಟನೆ ನಡೆಸಿತ್ತು. ಮಾತ್ರವಲ್ಲದೆ, ಹಿಂದಿನ ಶಾಸಕರಿಗೆ ಮನವಿಯನ್ನೂ ಸಲ್ಲಿಸಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದೀಗ, ವಿದ್ಯಾರ್ಥಿಗಳ ವರ್ಷಗಳ ಬೇಡಿಕೆ ಈಡೇರಿದೆ. ಬಸ್‌ ನಿಲ್ದಾಣದಿಂದ ಕಾಲೇಜುಗಳಿಗೆ ಬಸ್‌ ಸಂಚಾರ ವ್ಯವಸ್ಥೆ ಒದಗಿಸಲಾಗಿದೆ.

ಬಸ್‌ ವ್ಯವಸ್ಥೆಯ ಬಗ್ಗೆ ಮಾತನಾಡಿರುವ ಶಾಸಕ ಮಂಜು, “ವಿದ್ಯಾರ್ಥಿ ಜೀವನದಲ್ಲಿ ನಾನು ಸಹ ಬಹಳ ಕಷ್ಟಪಟ್ಟಿದ್ದೇನೆ. ಆದ್ದರಿಂದ ತಾಲೂಕಿನ ವಿದ್ಯಾರ್ಥಿಗಳ ಹಿತವನ್ನು ಕಾಪಾಡುವುದು ನನ್ನ ಕರ್ತವ್ಯವಾಗಿದೆ. ಪಟ್ಟಣದಲ್ಲಿರುವ ಸರ್ಕಾರಿ ಬಸ್ ನಿಲ್ದಾಣದಿಂದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಜೂನಿಯರ್ ಕಾಲೇಜು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನವರೆಗೂ ಬಸ್ ಸಂಚರಿಸಲು ನಗರ ಸಾರಿಗೆ ವ್ಯವಸ್ಥೆ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ದಲಿತರ ಸ್ಮಶಾನ ಭೂಮಿ ವ್ಯಾಪ್ತಿಯ ಅಳತೆ ಕಲ್ಲು ಕಿತ್ತೊಗೆದ ಕಿಡಿಗೇಡಿಗಳು

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಮಡೇನಹಳ್ಳಿ ಗ್ರಾಮಕ್ಕೆ ಸೇರಿದ ಗೋಮಾಳ ಜಮೀನಿನಲ್ಲಿ...

ನಾನು ರಾಜ್ಯಕ್ಕೆ ಭೇಟಿ ನೀಡುವುದು ಡಿ ಕೆ ಶಿವಕುಮಾರ್‌ಗೆ ಸಹಿಸಲು ಆಗುತ್ತಿಲ್ಲ: ಎಚ್‌ ಡಿ ಕುಮಾರಸ್ವಾಮಿ

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿಕೆಗಳಲ್ಲಿ ತಾಳಮೇಳವಿಲ್ಲ, ಸ್ಥಿರತೆ ಇಲ್ಲ. ಅವರೊಬ್ಬ...

ಧಾರವಾಡ | ರಾಜ್ಯದ ಹಲವು ಜ್ವಲಂತ ಸಮಸ್ಯೆಗಳ ಬಗ್ಗೆ ಬಿಜೆಪಿ ಹೋರಾಟ‌ ಮಾಡಲಿ: ಶಾಸಕ ಕೋನರೆಡ್ಡಿ

ರಾಜ್ಯದಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿವೆ. ಸಮಸ್ಯೆಗಳ ಕಡೆಗೆ ಗಮನಹರಿಸದೆ ಬಿಜೆಪಿಯವರು ಒಂದು...

ಯಾದಗಿರಿ | ಮಾಜಿ ಶಾಸಕ ಡಾ.ವೀರಬಸವಂತರಡ್ಡಿ ಮುದ್ನಾಳ ನಿಧನ

ಯಾದಗಿರಿ ಜಿಲ್ಲೆಯ ಮಾಜಿ ಶಾಸಕ ಹಾಗೂ ವೈದ್ಯ ಡಾ. ವೀರಬಸವಂತರೆಡ್ಡಿ ಮುದ್ನಾಳ...