ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಗಣಂಗೂರು ಟೋಲ್ ಪ್ಲಾಜಾ ಬಳಿಯ ಗೌಡಹಳ್ಳಿ ಬಳಿ ತಮಿಳುನಾಡು ನೋಂದಣಿ ವಾಹನಕ್ಕೆ ಬೆಂಕಿ ತಗುಲಿರುವ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಮೂವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪ್ರಯಾಣಿಕರು ಬೆಂಗಳೂರಿನಿಂದ ತಮಿಳುನಾಡಿಗೆ ಪ್ರಯಾಣಿಸುತ್ತಿದ್ದಾಗ ಮಧ್ಯಾಹ್ನ ಈ ಘಟನೆ ನಡೆದಿದೆ. ಅವರು ಟೋಲ್ ಪ್ಲಾಜಾವನ್ನು ದಾಟಿದ ಕೂಡಲೇ, ಬಾನೆಟ್ನಿಂದ ಹೊಗೆ ಹೊರಸೂಸುತ್ತಿರುವುದನ್ನು ಗಮನಿಸಿದ ಸವಾರರು ವಾಹನದಿಂದ ಕೆಳಗಿಳಿದರು. ಕೆಲವೇ ನಿಮಿಷಗಳಲ್ಲಿ, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತಲುಪುವ ಮೊದಲೇ ಕಾರು ಬೆಂಕಿಗೆ ಆಹುತಿಯಾಗಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಅವರು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಕಾರ್ಯಪ್ರವೃತ್ತರಾದರು.
ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಸರಣಿ ಅಪಘಾತ; ಹಲವರಿಗೆ ಸಣ್ಣಪುಟ್ಟ ಗಾಯ
“ಬಾನೆಟ್ನಿಂದ ಹೊಗೆ ಹೊರಸೂಸುತ್ತಿರುವುದನ್ನು ಗಮನಿಸಿದ ಕೂಡಲೇ ಅವರೆಲ್ಲರೂ ವಾಹನದಿಂದ ಹೊರಬಂದಿದ್ದರಿಂದ ಕಾರು ಪ್ರಯಾಣಿಕರಿಗೆ ಯಾವುದೇ ರೀತಿಯ ಗಾಯಗಳಾಲಿ, ಅನಾಹುತಗಳಾಗಲೀ ಸಂಭವಿಸಿಲ್ಲ” ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಸಂಬಂಧ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.