ಮಂಡ್ಯ | ಮಡುವಿನಕೋಡಿಯಲ್ಲಿ ಉಚಿತ ಆರೋಗ್ಯ ಶಿಬಿರ

Date:

ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿರುವ ಶಿಬಿರದಲ್ಲಿ ಪಾಲ್ಗೊಳ್ಳಬೇಕು ಎಂದು ಲಯನ್ಸ್ ಕ್ಲಬ್ ಆಫ್ ಮೈಸೂರಿನ ಅಧ್ಯಕ್ಷ ಮತ್ತಿಘಟ್ಟ ವಾಸು ತಿಳಿಸಿದ್ದಾರೆ.

- Advertisement -

ಕೆ.ಆರ್‌ ಪೇಟೆ ತಾಲೂಕಿನ ಮಡವಿನಕೋಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಯನ್ಸ್ ಕ್ಲಬ್ ಆಫ್ ಮೈಸೂರು, ಚಿರಾಗ್ ಮೋಟಾರ್ಸ್ ಸಹಯೋಗದಲ್ಲಿ ನೆಡೆದ ವಾಕ್‌ (ಮಾತು), ಶ್ರವಣ (ಕಿವಿ), ಕಣ್ಣು ಹಾಗೂ ದಂತ(ಹಲ್ಲು) ದೋಷಗಳ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಆಯೋಜಿಸಲಾಗಿತ್ತು. ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಈಗಿನ ಕಾಲಘಟ್ಟದಲ್ಲಿ ಮನುಷ್ಯ ತಮ್ಮ ಒತ್ತಡದ ಜೀವನ ಶೈಲಿಯಿಂದ ಅಧಿಕ ರಕ್ತದೊತ್ತಡ, ಮಧುಮೇಹ, ಮಾನಸಿಕ ಒತ್ತಡ ಸೇರಿದಂತೆ ಹಲವಾರು ಕಾಯಿಲೆಗಳಿಗಗೆ ತುತ್ತಾಗುತ್ತಾರೆ. ಕಾಲ ಕಾಲಕ್ಕೆ ತಪಾಸಣೆ ಹಾಗೂ ವೈದ್ಯರ ಚಿಕಿತ್ಸೆಯಿಂದ ರೋಗಗಳನ್ನು ಪ್ರಾಥಮಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಗುಣಪಡಿಸಬಹುದು. ಗ್ರಾಮಾಂತರ ಭಾಗದ ಜನರಿಗೆ ಆರೋಗ್ಯ ಸೇವೆ ಒದಗಿಸಲು ಆರೋಗ್ಯ ಶಿಬಿರ ಏರ್ಪಡಿಸಲಾಗಿದೆ. ಇಂತಹ ಉಪಯುಕ್ತ ಶಿಬಿರದ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು. ಆ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣವಾಗಲು ಸಾಧ್ಯ” ಎಂದು ಹೇಳಿದರು.

ಶಿಬಿರದಲ್ಲಿ ಮಾತನಾಡಿದ ಎಪಿಎಂಸಿ ಮಾಜಿ ಅಧ್ಯಕ್ಷ ಎಂ.ಪಿ ಲೋಕೇಶ್, “ಮನುಷ್ಯನಿಗೆ ಆರೋಗ್ಯವೇ ಮುಖ್ಯ. ನಮ್ಮ ಪೂರ್ವಜರ ದಿನಗಳಲ್ಲಿ ವಾಂತಿ-ಬೇದಿ, ಟೈಫಾಯಿಡ್‌, ಕ್ಷಯ, ಕಾಲಾರದಂತಹ ರೋಗಗಳು ಸಾಮಾನ್ಯವಾಗಿದ್ದವು. ಆದರೆ, ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಬಿಪಿ, ಶುಗರ್‌, ಹೃದ್ರೋಗ ಹಾಗೂ ಕಿಡ್ನಿ ಕಾಯಿಲೆಗಳು ಸಾಮಾನ್ಯವಾಗಿವೆ. ಇವು ಶ್ರೀಮಂತ ಖಾಯಿಲೆಗಳಾಗಿದ್ದು, ಬಡಜನರು ಆರ್ಥಿಕವಾಗಿ ಭರಿಸಲು ಅಸಾಧ್ಯ. ಗ್ರಾಮೀಣ ಭಾಗದ ಹಾಗೂ ನಗರ ಪ್ರದೇಶದ ಬಡ ಜನರಿಗೆ ಇಂತಹ ಉಚಿತ ಶಿಬಿರಗಳ ಮೂಲಕವೇ ಚಿಕಿತ್ಸೆಗೊಳಪಡಿಸಿದಾಗ ಮಾತ್ರ ಅವರನ್ನು ಸಂಕಷ್ಟದಿಂದ ಪಾರು ಮಾಡಲು ಸಾಧ್ಯ” ಎಂದರು.

ಆರೋಗ್ಯ ಶಿಬಿರದಲ್ಲಿ ಮಡುವಿನಕೊಡಿ ಪ್ರಾಥಮಿಕ ಅರೋಗ್ಯ ಕೇಂದ್ರ ಡಾ. ವಿಶ್ವನಂದ್, ಲಯನ್ ಮಹಾದೇವ ಮೂರ್ತಿ,ಲಯನ್ ಡಾ. ರವಿ ಕಿರಣ್, ಲಯನ್ ಪುಟ್ಟಸ್ವಾಮಿ ಗೌಡ, ಲಯನ್ ಕಾಳಯ್ಯ, ಲಯನ್ ಮೇಲ್ವಿನ್, ಲಯನ್ ಶಿವಕುಮಾರ್, ಲಯನ್ ಡಿ ಪಿ ಪ್ರಕಾಶ್, ಕೆ.ಎಸ್ ಪ್ರಕಾಶ್ ಜೈಕುಮಾರ್, ಡಾ. ಎಸ್ ಆರ್ ಚಂದ್ರಶೇಖರ ಬೆಂಗಳೂರು, ವಾಕ್ ಮತ್ತು ಶ್ರಾವಣ ಸಂಸ್ಥೆ ಸೇರಿದಂತೆ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...