ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ಕೃಷಿ ಜಮೀನಿನಲ್ಲಿ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ತಿರುಮಲಾಪುರದಲ್ಲಿ ನಡೆದಿದೆ.
ಸುಮಾರು 31 ವರ್ಷದ ಮಹಿಳೆಯ ಶವ ಗ್ರಾಮದ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
“ಮಹಿಳೆ ಮಾನಸಿಕ ಅಸ್ವಸ್ಥೆಯಾಗಿದ್ದು, ಆಕೆಯ ನಿವಾಸ ಮತ್ತು ಆಕೆಯ ಶವ ಪತ್ತೆಯಾದ ಸ್ಥಳದಿಂದ 3 ಕಿ.ಮೀ ದೂರವಿರುವುದಾಗಿ ಮಾಹಿತಿ ಇದೆ” ಎಂದು ಪೊಲೀಸರು ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮೈಸೂರು | ಸಿದ್ದರಾಮಯ್ಯ ಬಗ್ಗೆ ಅವಹೇಳನ; ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಪ್ರತಿಭಟನೆ
“ಎಫ್ಎಸ್ಎಲ್ ತಂಡವು ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ತನಿಖೆಗಾಗಿ ಮಾದರಿಗಳನ್ನು ಸಂಗ್ರಹಿಸಿದೆ. ಪೊಲೀಸರು ಹತ್ತಿರದ ಕಟ್ಟಡಗಳಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿದ್ದಾರೆ. ಸಾವಿಗೆ ಕಾರಣ ಮತ್ತು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆಯೇ ಎಂದು ಕಂಡುಹಿಡಿಯಲು ಮರಣೋತ್ತರ ವರದಿಗಾಗಿ ಕಾಯುತ್ತಿದ್ದೇವೆ” ಎಂದರು.
ಮಂಡ್ಯ ಎಸ್‌ಪಿ ಎನ್ ಯತೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.