ಮಂಡ್ಯ | ಭಾರತಕ್ಕಾಗಿ ಯುವಶಕ್ತಿ ಧ್ಯೇಯದಡಿ ಎನ್ಎಸ್ಎಸ್ ಶಿಬಿರ

Date:

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ. ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೌರಿಪುರ ಗ್ರಾಮದಲ್ಲಿ ನವೆಂಬರ್ 27ರವರೆಗೆ ‘ಸುಸ್ಥಿರ ಅಭಿವೃದ್ಧಿಯ ಮೂಲಕ ವಿಕಸಿತ ಭಾರತಕ್ಕಾಗಿ ಯುವಶಕ್ತಿ’ ಎಂಬ ಧ್ಯೇಯವಾಕ್ಯದಡಿ ಶಿಬಿರ ನಡೆಯಲಿದೆ.

ಮೈಸೂರು ಕೃಷ್ಣಮೂರ್ತಿಪುರಂನ ಶಾರದಾ ವಿಲಾಸ ಕಾನೂನು ಕಾಲೇಜಿನ ಎನ್‌ಎಸ್‌ಎಸ್ ಘಟಕ ಹಾಗೂ ರೋಟರಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ 2026-27ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ.

- Advertisement -

ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಹಾಗೂ ಸಸಿಗೆ ನೀರೆರೆಯುವ ಮೂಲಕ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಎಸ್.ಎಲ್. ಲಿಂಗರಾಜು ಅವರು ಶಿಬಿರವನ್ನು ಉದ್ಘಾಟಿಸಿ ಚಾಲನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ...

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ ವಿಮರ್ಶಿಸುತ್ತಿದ್ದ ಭಗತ್ ಸಿಂಗ್ ಅವರನ್ನು ಇಂದು ಅದೇ ಸಿದ್ಧಾಂತಗಳ ವಿರುದ್ಧ ನಿಂತಿರುವ ಬಿಜೆಪಿ, ಆರ್‌ಎಸ್‌ಎಸ್, ಎಬಿವಿಪಿ ನಾಯಕರು ತಮ್ಮ 'ಸ್ವಂತ...

ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ...

ಒಂದು ಆನೆಗೆ ದಿನಕ್ಕೆ ನೂರಾರು ಲೀಟರ್ ನೀರು ಮತ್ತು ನೂರಾರು ಕೆ.ಜಿ. ಆಹಾರ ಬೇಕಾಗುತ್ತದೆ. ಇನ್ನು ಕಾಡಿನಲ್ಲಿರುವ ಸಾವಿರಾರು ಆನೆಗಳು, ಹುಲಿಗಳು, ಚಿರತೆಗಳು, ಜಿಂಕೆಗಳು, ಕಾಡೆಮ್ಮೆಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಅಗತ್ಯವನ್ನು ಲೆಕ್ಕಹಾಕಿದರೆ...

ಬಾಗಲಕೋಟೆ | ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತರಗತಿ ಆರಂಭ;...

ಬಾಗಲಕೋಟೆ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಕಾಲ ಕೂಡಿಬಂದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು ಎಂಬ ದಶಕಗಳ ಬೇಡಿಕೆಗೆ ಸಾಕಾರ ರೂಪ ಸಿಕ್ಕಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನಗರದ ಬಹುನಿರೀಕ್ಷಿತ...

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, “ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಮೂಲಕ ಉತ್ತಮ ಪ್ರಜೆಗಳನ್ನು ರೂಪಿಸಲು ಸಾಧ್ಯವಿದೆ. ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದುವುದು ನಮ್ಮೆಲ್ಲರ ಆಶಯವಾಗಬೇಕು. ದೇಶದ ಭವಿಷ್ಯಕ್ಕಾಗಿ ಪ್ರತಿಯೊಬ್ಬರೂ ಹೆಚ್ಚಿನ ಶ್ರಮ ವಹಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು” ಎಂದು ಹೇಳಿದರು.

ನಮ್ಮ ದೇಶದಲ್ಲಿ ಅನೇಕ ಮಹಾನ್ ವ್ಯಕ್ತಿಗಳು ಹಾಗೂ ಸಾಮಾಜಿಕ ಸುಧಾರಕರು ಜನಿಸಿದ್ದಾರೆ. ಅವರ ಆದರ್ಶ ಮತ್ತು ಮಾರ್ಗದಲ್ಲಿ ಮುನ್ನಡೆಯಬೇಕು. ಇಲ್ಲವಾದರೆ, ಅವರ ಸಾಧನೆಗಳ ನೆರಳಿನಲ್ಲಿ ಬದುಕುವ ಮನೋಭಾವವನ್ನಾದರೂ ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು.

ಕಾರ್ಯಕ್ರಮದಲ್ಲಿ ಶಾರದಾ ವಿಲಾಸ ಕಾನೂನು ಕಾಲೇಜಿನ ಡೀನ್ ಎ.ಎಂ. ಬೊಳ್ಳಮ್ಮ, ಪ್ರಾಂಶುಪಾಲ ಡಾ. ಬಿ.ಪಿ. ಮಹೇಶ್, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಕುಮಾರಿ ಸವಿತಾ ಎಚ್.ಎಂ., ಕಾಲೇಜಿನ ಅಧ್ಯಾಪಕ ಚೇತನ್, ಗ್ರಂಥಪಾಲಕ ಸಿದ್ದರಾಜು, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಡಾ. ಆರ್. ರಾಘವೇಂದ್ರ, ರೋಟರಿ ಸಂಸ್ಥೆ ಶ್ರೀರಂಗಪಟ್ಟಣದ ಅಧ್ಯಕ್ಷ ನಾಗೇಂದ್ರ ಉಪಸ್ಥಿತರಿದ್ದರು.

ಗೌರಿಪುರ ಹಾಗೂ ಕೆ. ಶೆಟ್ಟಹಳ್ಳಿ ಗ್ರಾಮದ ಮುಖಂಡರಾದ ಆನಂದ, ಪುನೀತ್, ನಟರಾಜು, ಮಂಜುನಾಥ್, ಪ್ರಸಾದ್, ನರಸಿಂಹಯ್ಯ ಸೇರಿದಂತೆ ಗ್ರಾಮದ ಮುಖಂಡರು, ಗ್ರಾಮಸ್ಥರು ಹಾಗೂ ಎನ್‌ಎಸ್‌ಎಸ್ ಘಟಕದ ಶಿಬಿರಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಣ್ಣನವರ ಅವಹೇಳನ; ರವಿ ಹಂಜ್ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಬಸವಪರ ಸಂಘಟನೆಗಳ ಆಗ್ರಹ

ಕರ್ನಾಟಕ ಸಾಂಸ್ಕೃತಿಕ ನಾಯಕ "ವಿಶ್ವಗುರು" ಬಸವಣ್ಣನವರನ್ನು ಅವಹೇಳನ ಮಾಡಿದ ಇಂಗ್ಲಿಷ್ ಲೇಖಕ...

ಕಾಂಗ್ರೆಸ್‌ನಲ್ಲಿ ಭಿನ್ನಮತ? ಬಂಡಾಯ ಶಾಸಕರಿಗೆ ‘ಹುಚ್ಚು ನಾಯಿ ಕಚ್ಚಿದೆ’ ಎಂದ ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸುಮಾರು ಮೂರು ವರ್ಷಗಳು ಕಳೆದಯುತ್ತಿವೆ. ಈ...

ಯುಪಿ ಚುನಾವಣೆ | ಬಿಜೆಪಿಯನ್ನು ಸೋಲಿಸಲು ಎಸ್‌ಪಿ-ಕಾಂಗ್ರೆಸ್ ಗಂಭೀರವಾಗಿಲ್ಲ: ಆಜಾದ್ ಆರೋಪ

ಮುಂದಿನ ವರ್ಷ (2027) ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ...

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ ಅಂದಿನ ಐತಿಹಾಸಿಕ ನಿಲುವುಗಳ ಅರಿವಿದೆಯೇ?

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ...