ಮಂಡ್ಯ | ಜೀವದ ಹಂಗು ತೊರೆದು ದುಡಿಯುವ ದಾದಿಯರಿಗೆ ನಮನ: ಆರೋಗ್ಯಾಧಿಕಾರಿ ಎನ್ ಮಹೇಶ್

Date:

ರೋಗಿಗಳ ಪಾಲಿಗೆ ವೈದ್ಯರು ದೇವರಾದರೆ, ಅವರ ಸೂಚನೆಯಂತೆ ನಿರಂತರವಾಗಿ ರೋಗಿಗಳ ಆರೈಕೆ ಮಾಡುವ ದಾದಿಯರ ಪಾತ್ರ ಅತ್ಯಂತ ಪವಿತ್ರವಾದದ್ದು. ಸಮಾಜದ ಪ್ರತಿಯೊಬ್ಬರೂ ದಾದಿಯರ ಸೇವೆಯನ್ನು ಗೌರವಿಸಬೇಕು ಎಂದು ಅಚ್ಚಪ್ಪನ ಕೊಪ್ಪಲು ಆರೋಗ್ಯ ಉಪ ಕೇಂದ್ರದ ಸಮುದಾಯ ಆರೋಗ್ಯಾಧಿಕಾರಿ ಎನ್ ಮಹೇಶ್ ಹೇಳಿದರು.

- Advertisement -

ಶ್ರೀರಂಗಪಟ್ಟಣದ ತಾಲೂಕಿನ ಕಡತನಾಳು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ‘ಸಮರ್ಪಣ ಟ್ರಸ್ಟ್’ ವತಿಯಿಂದ ಹಮ್ಮಿಕೊಂಡಿದ್ದ ʼವಿಶ್ವ ದಾದಿಯರ ದಿನʼವನ್ನು ಅತ್ಯಂತ ಸಡಗರ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ವೇಳೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ದಾದಿಯರ ಸೇವೆಯ ಮಹತ್ವವನ್ನು ಒತ್ತಿ ಹೇಳಿದ ಅವರು, “ಮೇ 12 ಇದೊಂದು ಸಾಮಾನ್ಯ ದಿನಾಂಕ ಅಲ್ಲ. ಇದು ವಿಶ್ವ ದಾದಿಯರ ದಿನ. ಮಾನವೀಯತೆಯ ಬಿಳಿ ದೇವತೆಗಳಿಗೆ ನಾವು ಕೃತಜ್ಞತೆ ಸಲ್ಲಿಸುವ ಪವಿತ್ರ ದಿನ” ಎಂದು ಸ್ಮರಿಸಿದರು.

ದಾದಿಯರು ಗ್ರಾಮೀಣ ಮಟ್ಟದಲ್ಲಿ ಜನರ ಆರೋಗ್ಯ ರಕ್ಷಣೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಅವರ ನಿಸ್ವಾರ್ಥ ಸೇವೆಯನ್ನು ಸ್ಮರಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಿತ ಅಧಿಕಾರಿ ಶ್ರೀಮತಿ ಪದ್ಮ ಅವರನ್ನು ಸಮರ್ಪಣ ಟ್ರಸ್ಟ್ ವತಿಯಿಂದ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಸಮರ್ಪಣ ಟ್ರಸ್ಟ್‌ ಅಧ್ಯಕ್ಷ ಕೆ ಎಸ್ ಜಯಶಂಕರ್ ಮಾತನಾಡಿ, “ಗ್ರಾಮೀಣ ಭಾಗದಲ್ಲಿ ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ದಾದಿಯರು ಮತ್ತು ಆಶಾ ಕಾರ್ಯಕರ್ತೆಯರ ಪಾತ್ರ ದೊಡ್ಡದು. ಇಂತಹ ಕೋವಿಡ್‌ನಂತಹ ದುಗುಡದ ಹೊತ್ತಿನಲ್ಲೂ ಜೀವದ ಹಂಗು ತೊರೆದು ದುಡಿದ ಈ ಆರೋಗ್ಯ ಕಾವಲುಗಾರರನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಟ್ರಸ್ಟ್‌ಗೆ ಹೆಮ್ಮೆಯ ವಿಷಯವಾಗಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ನೀಟ್‌ ಪರೀಕ್ಷೆ ರದ್ದು : ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸಚಿವರ ವಾಗ್ದಾಳಿ

​ಈ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಅಂಗನವಾಡಿ ಸಹಾಯಕಿ ಕವಿತಾ, ಆಶಾ ಕಾರ್ಯಕರ್ತೆ ಕೆ ಲೀಲಾ ಮಣಿ, ಸಮಾಜ ಸೇವಕರಾದ ಕೆ ಎನ್ ಸುನಿಲ್ ಕುಮಾರ್, ಕೆ ಎಂ ಮಂಜುನಾಥ್, ಮಧುಕರ್, ಅನುಶ್ರೀ, ಶಿವಮ್ಮ ಚಂದನ್ ಕುಮಾರ್, ಲಕ್ಷ್ಮಿ ಅರುಣ ಕುಮಾರ್, ಶೀಲಾ ಎಚ್ ಜೆ ಸೇರಿದಂತೆ ಗ್ರಾಮಸ್ಥರು ಹಾಗೂ ಗಣ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಅಂಬೇಡ್ಕರ್ ಅವಹೇಳನ ಆರೋಪ: ವೇದಮೂರ್ತಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಪೊಲೀಸ್ ಇಲಾಖೆಯ ಬಗ್ಗೆ ಅವಹೇಳನಕಾರಿ ಹೇಳಿಕೆ...

ತಮಿಳು ಕಾಲೊನಿ ನಿವಾಸಿಗಳನ್ನು ‘ಭಯೋತ್ಪಾದಕರು’ ಎಂದಿರುವ ಆರೋಪ: ರವೀಂದ್ರ ವಿರುದ್ಧ FIR ದಾಖಲಿಸಲು ಆಗ್ರಹ

ಮಂಡ್ಯ ನಗರದ ತಮಿಳು ಕಾಲೊನಿ ನಿವಾಸಿಗಳನ್ನು ‘ತಮಿಳುನಾಡಿನಿಂದ ಬಂದವರು’, ‘ಭಯೋತ್ಪಾದಕರು’ ಎಂದು...

ಮಂಡ್ಯದ ನ್ಯೂ ತಮಿಳು ಕಾಲೊನಿಯಲ್ಲಿ ‘SIR’ ಗೊಂದಲ: 207 ಮತದಾರರು ಎಲ್ಲಿ ಹೋದರು?

ವಿಶೇಷ ತೀವ್ರ ಪರಿಷ್ಕರಣೆ (Special Intensive Revision–SIR) ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯ...

ಬರದ ನೆರಳಲ್ಲಿ 101 ತಾಲ್ಲೂಕುಗಳು; ಮೈಸೂರು-ಚಾಮರಾಜನಗರ-ಮಂಡ್ಯದಲ್ಲಿ ರೈತರ ಬದುಕಿಗೆ ಕಠಿಣ ಸವಾಲು

ಕರ್ನಾಟಕದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿರುವುದು ಕೇವಲ ಮಳೆ ಕಡಿಮೆಯಾಗಿದೆ...