ಮಂಡ್ಯ | ಕೌಟುಂಬಿಕ ಕಲಹದಿಂದ ಮಹಿಳೆ ಆತ್ಮಹತ್ಯೆ; ಪತಿಯ ವಿರುದ್ಧ ಕೊಲೆ ಆರೋಪ

Date:

ಕೌಟುಂಬಿಕ ಕಲಹದಿಂದ ಮಹಿಳೆಯೊಬ್ಬಳು ನೇಣಿಗೆ ಶರಣಾದ ಘಟನೆ ಮಂಡ್ಯದ ನೆಹರೂನಗರದ ಪೂರ್ವ ಬಡಾವಣೆಯಲ್ಲಿ ನಡೆದಿದೆ.

ಮೃತ ಮಹಿಳೆ ಪದ್ಮ(36). ಇವರಿಗೆ ಇಬ್ಬರು ಮಕ್ಕಳಿದ್ದು, ಕುಟುಂಬ ಕಲಹಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಮೃತ ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

“ಇವರಿಬ್ಬರೂ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪ್ರೀತಿಸಿ ಮದುವೆಯಾದ ಬಳಿಕ ಚೆನ್ನಾಗಿಯೇ ಇದ್ದ ಸಂಸಾರದಲ್ಲಿ, ದಿನ ಕಳೆದಂತೆ ಜಗಳ ನಡೆಯುತ್ತಿತ್ತು. ಇದೀಗ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅವಳು ಮೃತಪಟ್ಟಿದ್ದಾಳೆ” ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮೃತ ಮಹಿಳೆ ಪದ್ಮ ಪತಿ ಸಿದ್ದರಾಜು ಎಂಬಾತನ ಮೇಲೆ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದು, “ಇದು ಆತ್ಮಹತ್ಯೆಯಲ್ಲ ಕೊಲೆ” ಎಂದು ದೂರಿದ್ದಾರೆ.

ರಾಮನಗರ ತಾಲೂಕಿನ ಅಂಕನಹಳ್ಳಿ ನಿವಾಸಿಯಾಗಿದ್ದ ಪದ್ಮ ಹಾಗೂ ಮಂಡ್ಯ ಮೂಲದ ಸಿದ್ದರಾಜು ಪ್ರೀತಿಸಿ, 13 ವರ್ಷದ ಹಿಂದೆ ಮದುವೆಯಾಗಿದ್ದರು. ಪತಿ ಸಿದ್ದರಾಜು ಹಣಕ್ಕಾಗಿ ಸಾಕಷ್ಟು ಪೀಡಿಸುತ್ತಿದ್ದ. ಆಗಾಗ ಗಲಾಟೆಯೂ ನಡೆಯುತ್ತಿತ್ತು” ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಗ್ರಾಮೀಣ ಅಂಚೆ ಸೇವಕ ಹುದ್ದೆಗಾಗಿ ಅಂಕಪಟ್ಟಿ ತಿದ್ದುಪಡಿ; 25 ಮಂದಿ ವಿರುದ್ಧ ಪ್ರಕರಣ ದಾಖಲು

“ಮದುವೆಯಾದ ಬಳಿಕ ಒಂದು ಬಾರಿಗೂ ತವರು ಮನೆಗೆ ಸಿದ್ದರಾಜು ಕಳುಹಿಸಲಿಲ್ಲ. ಅಲ್ಲದೆ ಸಂಬಂಧಿಕರನ್ನೂ ಕೂಡ ಮನೆಗೆ ಬರದಂತೆ ಒತ್ತಡ ಹಾಕುತ್ತಿದ್ದ. ಆತ್ಮಹತ್ಯೆ ಮಾಡಿಕೊಂಡ ನಂತರ ವಿಷಯ ತಿಳಿಸದೇ ಅಂತ್ಯಕ್ರಿಯೆಗೆ ತಯಾರಿ ಕೂಡ ಮಾಡಿಕೊಂಡಿದ್ದ” ಎಂದು ವಿಚಾರ ತಿಳಿದು ಮಂಡ್ಯಕ್ಕೆ ಬಂದ ಮಹಿಳೆ ಪದ್ಮ ಕುಟುಂಬಸ್ಥರು ಆರೋಪಿಸಿದ್ದಾರೆ.

ಘಟನೆ ಸಂಬಂಧ ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸಿದ್ದರಾಜು ಎಂಬಾತನನ್ನು ಪೂರ್ವಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಸಂಬಂಧಿಕರು ಒತ್ತಾಯಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಎಚ್‌ಡಿಕೆ ಹೇಳಿಕೆಗೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರ ಖಂಡನೆ

ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು...

ಕಲಬುರಗಿ | ಪ್ರಜಾಪ್ರಭುತ್ವದ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ಗೆ ಬೆಂಬಲ: ದಸಂಸ

2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌...

ದಾವಣಗೆರೆ | ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ: ಪ್ರಾಂಶುಪಾಲ ಕಲ್ಲೇಶ್‌

ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ. ಅದರ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ...

ರಾಯಚೂರು | ಎಚ್‌ಡಿಕೆಯಿಂದ ಮಹಿಳೆಯರಿಗೆ ಅವಮಾನ, ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ...