ಮಂಡ್ಯ | ಕಂದಾಯ ಇಲಾಖೆಯ ಭ್ರಷ್ಟಾಚಾರ ಖಂಡಿಸಿ ರೈತ ಸಂಘದಿಂದ 15 ದಿನಗಳ ಜನಸಂಪರ್ಕ ಸಭೆ

Date:

ಕಂದಾಯ ಇಲಾಖೆಯಲ್ಲಿನ ಭ್ರಷ್ಟಾಚಾರ, ಕಡತಗಳ ವಿಲೇವಾರಿಯಲ್ಲಿನ ವಿಳಂಬ ಹಾಗೂ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಮಂಡ್ಯ ತಾಲ್ಲೂಕು ಘಟಕವು 15 ದಿನಗಳ ಕಾಲ ರೈತರ ಜನಸಂಪರ್ಕ ಸಭೆ ಹಾಗೂ ಕುಂದುಕೊರತೆ ಸ್ವೀಕಾರ ಕಾರ್ಯಕ್ರಮವನ್ನು ಸೋಮವಾರದಿಂದ ಮಂಡ್ಯ ತಾಲ್ಲೂಕು ಕಚೇರಿ ಎದುರು ಆರಂಭಿಸಿದೆ.

- Advertisement -

ಕಾರ್ಯಕ್ರಮದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಮಂಡ್ಯ ತಾಲ್ಲೂಕು ಅಧ್ಯಕ್ಷ ಅಣ್ಣಯ್ಯ, ಮಂಡ್ಯ ತಾಲ್ಲೂಕಿನ ಕಂದಾಯ ಇಲಾಖೆಯಲ್ಲಿ ಆರ್‌ಟಿಸಿ (RTC) ತಿದ್ದುಪಡಿ, ಪೋಡಿ, ಸರ್ವೆ, ಖಾತೆ ಬದಲಾವಣೆ, ಅನಿಲೇಷನ್, ಪೌತಿ ಖಾತೆ ಸೇರಿದಂತೆ ಕಾನೂನುಬದ್ಧವಾಗಿ ಮಾಡಬೇಕಾದ ಅನೇಕ ಕಡತಗಳು ತಿಂಗಳುಗಟ್ಟಲೆ ಹಾಗೂ ವರ್ಷಗಟ್ಟಲೆ ಬಾಕಿ ಉಳಿಯುತ್ತಿವೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಅಧಿಕಾರಿಗಳು ವಿವಿಧ ಕಾರಣಗಳನ್ನು ನೀಡಿ ಸಾರ್ವಜನಿಕರನ್ನು ಕಚೇರಿಗಳಿಗೆ ಅಲೆದಾಡಿಸುತ್ತಿದ್ದು, ಲಂಚ ನೀಡದೇ ಯಾವುದೇ ಕೆಲಸ ಆಗುವುದಿಲ್ಲ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿ ಕೇಳಿಬರುತ್ತಿವೆ. ಸರ್ಕಾರ ‘ಮನೆ ಬಾಗಿಲಿಗೆ ಸರ್ಕಾರದ ಸೇವೆ’ ಎಂಬ ಘೋಷಣೆಯನ್ನು ನೀಡಿದ್ದರೂ, ಜನರಿಗೆ ಸಮಯಕ್ಕೆ ಸರಿಯಾಗಿ ನ್ಯಾಯಯುತ ಸೇವೆ ದೊರೆಯುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘವು 15 ದಿನಗಳ ಕಾಲ ರೈತರ ಜನಸಂಪರ್ಕ ಸಭೆ ನಡೆಸಿ, ರೈತರ ಸಮಸ್ಯೆಗಳು ಹಾಗೂ ಸಂಬಂಧಿಸಿದ ದಾಖಲೆಗಳನ್ನು ಸ್ವೀಕರಿಸಲಿದೆ. ಬಳಿಕ ಎಲ್ಲ ಸಮಸ್ಯೆಗಳ ಸಮಗ್ರ ವರದಿಯನ್ನು ತಾಲ್ಲೂಕು ಆಡಳಿತಕ್ಕೆ ಸಲ್ಲಿಸಲಾಗುವುದು. ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ರೈತ ಸಂಘದ ವತಿಯಿಂದ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅಣ್ಣಯ್ಯ ಎಚ್ಚರಿಕೆ ನೀಡಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?SIR ಪ್ರಕ್ರಿಯೆಯೇ ಗೊಂದಲದ ಗೂಡು: ಮತದಾರರ ಪಟ್ಟಿಯೇ ಒಂದು, ನೆಲಮಟ್ಟದ ವಾಸ್ತವವೇ ಇನ್ನೊಂದು!

ಈ ಅಭಿಯಾನಕ್ಕೆ ಕರ್ನಾಟಕ ಜನಶಕ್ತಿ ಬೆಂಬಲ ವ್ಯಕ್ತಪಡಿಸಿದೆ. ಕಾರ್ಯಕ್ರಮದಲ್ಲಿ ರಾಜ್ಯ ರೈತ ಸಂಘದ ಜೈರಾಮ್, ಸಾಗರ್ ಗೌಡ, ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ನಾಗರಾಜು, ಕೆಆರ್‌ಎಸ್ ಪಕ್ಷದ ಜಿಲ್ಲಾಧ್ಯಕ್ಷ ಮಲ್ಲೇಶ್, ಆನಂದ್ ಕುಮಾರ್, ರೇಣುಕಮ್ಮ ಸೇರಿದಂತೆ ಹಲವು ರೈತ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮಾದಕ ವ್ಯಸನದಿಂದ ಅಪರಾಧಗಳ ಹೆಚ್ಚಳ: ಜಿಲ್ಲಾಡಳಿತ ವಿಫಲ, ಜನಪ್ರತಿನಿಧಿಗಳಿಂದ ಆರೋಪಿಗಳ ರಕ್ಷಣೆ — ಎಂ. ವಿರೂಪಾಕ್ಷಿ ಆರೋಪ

ಜಿಲ್ಲೆಯಲ್ಲಿ ಮಾದಕ ವ್ಯಸನದಿಂದ ಕೊಲೆಗಳು, ದೌರ್ಜನ್ಯ, ಹಲ್ಲೆಗಳು ಹೆಚ್ಚಳವಾಗುತ್ತಿದ್ದು ಜಿಲ್ಲಾಡಳಿತ ನಿಯಂತ್ರಿಸುವಲ್ಲಿ...

ಕಲಬುರಗಿ | ಮನೆಯ ಛಾವಣಿಯಲ್ಲಿ ಬೆಂಕಿ ಅವಘಡ

ನಗರದ ಪಿಡಿಎ ಇಂಜಿನಿಯರಿಂಗ್ ಕಾಲೇಜು ರಸ್ತೆಯಲ್ಲಿರುವ ಎ.ಕೆ. ಇಂಫ್ರಾ ಸಂಸ್ಥೆಗೆ ಸೇರಿದ...

ಕಲಬುರಗಿ | ಕಾಣೆಯಾದ ಮಕ್ಕಳ ಪತ್ತೆಗೆ ವಿಶೇಷ ಕಾರ್ಯಪಡೆ ಸಮಿತಿ ಸಭೆ

ನಗರ ಪೊಲೀಸ್ ಆಯುಕ್ತಾಲಯದ ಪೊಲೀಸ್ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ,...