ಸಹಕಾರಿ ಸಂಘಗಳು ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು: ಎಚ್.ಡಿ.ಕುಮಾರಸ್ವಾಮಿ

Date:

ಸಹಕಾರಿ ಸಂಘಗಳು ರೈತರ ಆರ್ಥಿಕ ಭದ್ರತೆ ಹಾಗೂ ಗ್ರಾಮೀಣ ಅಭಿವೃದ್ಧಿಯ ಪ್ರಮುಖ ಆಧಾರವಾಗಿದ್ದು, ರೈತರ ಸಂಕಷ್ಟಕ್ಕೆ ಸ್ಪಂದಿಸುವ ಮೂಲಕ ಸಹಕಾರಿ ಕ್ಷೇತ್ರ ಮತ್ತಷ್ಟು ಬಲಿಷ್ಠವಾಗಬೇಕು ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

- Advertisement -

ತಾಲ್ಲೂಕಿನ ಹೊಳಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಹಿರಿಯರು ಸ್ಥಾಪಿಸಿದ ಸಹಕಾರಿ ಸಂಸ್ಥೆಗಳು ರೈತರ ಬದುಕಿಗೆ ಆಸರೆಯಾಗಿವೆ. ಇಂತಹ ಸಂಸ್ಥೆಗಳನ್ನು ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’...

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು' ಎಂಬ ಪದವೇ ಇದೀಗ ಮೋದಿ ಅವರತ್ತ ತಿರುಗಿದೆ. 1987-88ರ ಡಿಜಿಟಲ್ ಕ್ಯಾಮೆರಾ-ಇಮೇಲ್ ಕಥೆಯಿಂದ ಹಿಡಿದು ಐತಿಹಾಸಿಕ ಪ್ರಮಾದಗಳವರೆಗೆ, ಮೋದಿ ಅವರ...

ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರೈತರ ಸಂಕಷ್ಟಕ್ಕೆ ಸ್ಪಂದಿಸಿ ಸಾಲಮನ್ನಾ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದಾಗಿ ತಿಳಿಸಿದ ಅವರು, 2018ರಲ್ಲಿ ರಾಜ್ಯದ ರೈತರ ಸಾಲಮನ್ನಾ ನಿರ್ಧಾರ ಕೈಗೊಂಡು ಮಂಡ್ಯ ಜಿಲ್ಲೆಯಲ್ಲಿ ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಮನ್ನಾ ಮಾಡಲಾಗಿದೆ. ರೈತರು ಸಂಕಷ್ಟದಲ್ಲಿದ್ದಾಗ ಸರ್ಕಾರ ನೆರವಿಗೆ ಧಾವಿಸುವುದು ಕರ್ತವ್ಯ ಎಂದು ಹೇಳಿದರು.

ಕೃಷಿ ವೆಚ್ಚ ಹೆಚ್ಚಾಗುತ್ತಿದ್ದು, ಬೆಳೆಗಳಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ರೈತರಿಗೆ ಅಲ್ಪ ಪ್ರಮಾಣದ ಆರ್ಥಿಕ ನೆರವು ನೀಡುವುದಷ್ಟೇ ಅಲ್ಲದೆ, ಅವರ ಆದಾಯ ಹೆಚ್ಚಿಸಿ ಕೃಷಿಯನ್ನು ಲಾಭದಾಯಕವಾಗಿಸುವ ಯೋಜನೆಗಳನ್ನು ರೂಪಿಸಬೇಕು. ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ದೊರೆಯಬೇಕು ಹಾಗೂ ಸಕ್ಕರೆ ಕಾರ್ಖಾನೆಗಳ ವಿಚಾರದಲ್ಲಿ ರೈತರ ಹಿತಾಸಕ್ತಿಗೆ ಆದ್ಯತೆ ನೀಡಬೇಕು ಎಂದರು.

ಸಹಕಾರಿ ಬ್ಯಾಂಕ್‌ಗಳು ರೈತರ ಬೆನ್ನೆಲುಬಾಗಿ ನಿಲ್ಲಬೇಕು. ಗ್ರಾಮೀಣ ಭಾಗದಲ್ಲಿ ಹಿಂದೆ ಇದ್ದ ಪರಸ್ಪರ ಸಹಕಾರ, ಕುಟುಂಬದ ಆತ್ಮೀಯತೆ ಹಾಗೂ ಹಿರಿಯರಿಗೆ ಗೌರವ ನೀಡುವ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು. ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರ ಮತ್ತು ಮಾನವೀಯ ಮೌಲ್ಯಗಳನ್ನು ಕಲಿಸಬೇಕು ಎಂದು ಕರೆ ನೀಡಿದರು.

ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಮಾತನಾಡಿ, ಸಹಕಾರಿ ಸಂಘಗಳು ಕೇವಲ ಸಾಲ ನೀಡುವ ಸಂಸ್ಥೆಗಳಾಗದೆ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಶಕ್ತಿಯಾಗಿ ಕಾರ್ಯನಿರ್ವಹಿಸಬೇಕು. 103 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಉಳ್ಳುವಿನ ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘದ ಸಾಧನೆ ಹೆಮ್ಮೆಯ ಸಂಗತಿ ಎಂದರು.

ಈ ವಿಶೇಷ ವರದಿ ಓದಿದ್ದೀರಾ? ಬರಗಾಲ | ಮಳೆಯ ಕೊರತೆಗೆ ಬತ್ತಿದ ಕಾಡಿನ ಕೆರೆಗಳು: ನೀರಿಗಾಗಿ ಪರದಾಡುವ ವನ್ಯಜೀವಿಗಳು

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರೈತರ ಪರವಾಗಿ ಹಲವು ಮಹತ್ವದ ಕೆಲಸಗಳನ್ನು ಮಾಡಿದ್ದಾರೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ 25 ಸಾವಿರ ಕೋಟಿಗೂ ಅಧಿಕ ಮೊತ್ತದ ಸಾಲಮನ್ನಾ ಮಾಡಿದ್ದು, ಮಂಡ್ಯ ಜಿಲ್ಲೆಯಲ್ಲಿ 800 ಕೋಟಿಗೂ ಅಧಿಕ ಮೊತ್ತದ ಸಾಲಮನ್ನಾದಿಂದ 1.50 ಲಕ್ಷಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ನೆರವಾಗಿದೆ ಎಂದು ತಿಳಿಸಿದರು.

ಈ ತನಿಖಾ ವರದಿ ಓದಿದ್ದೀರಾ? ತನಿಖಾ ವರದಿ | ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರ ಬದಲಾವಣೆ ಸುತ್ತ ರಾಜಕೀಯ: ಆದೇಶವಿಲ್ಲದೆ ನೇಮಕದ ಸುದ್ದಿ ಹರಡಿದ್ದೇಕೆ?

ರಾಜ್ಯದ ರೈತರು ಬರ ಹಾಗೂ ನೀರಿನ ಕೊರತೆಯಿಂದ ಸಂಕಷ್ಟ ಎದುರಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಸಹಕಾರಿ ಸಂಘಗಳು ರೈತರ ನೆರವಿಗೆ ಧಾವಿಸಬೇಕು. ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಸಂಘಗಳು ಸೇವೆಯನ್ನು ಮತ್ತಷ್ಟು ವಿಸ್ತರಿಸಬೇಕು ಎಂದು ಹೇಳಿದರು.

ಈ ವಿಶೇಷ ಲೇಖನ ಓದಿದ್ದೀರಾ? ಆರ್‌ಟಿಇ ಶಿಕ್ಷಣ ಹಕ್ಕೋ, ಶಾಲೆಗಳಲ್ಲಿನ ಸಾಮಾಜಿಕ ಅಂತರಕ್ಕೆ ಕಾರಣವೋ?

ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಎಚ್.ಪಿ.ಸಚ್ಚಿದಾನಂದ, ಮಾಜಿ ಶಾಸಕರಾದ ಎಚ್.ಬಿ.ರಾಮು, ಜಿ.ಬಿ.ಶಿವಕುಮಾರ್, ಎಚ್.ಎಲ್.ಶಿವಣ್ಣ, ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯ್ ಆನಂದ್, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಶೀಳನೆರೆ ಮೋಹನ್, ಎಚ್.ಸಿ.ಹರಿಪ್ರಸಾದ್, ಬಿ.ಆರ್.ರಾಮಚಂದ್ರ, ಡಾಲು ರವಿ, ಸಿ.ಶಿವಕುಮಾರ್, ಪುಟ್ಟಸ್ವಾಮಿಗೌಡ, ಅನುಪಮ ಯೋಗೇಶ್, ಹೊಳಲು ಯೋಗೇಶ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಗ್ಯಾರಂಟಿ ಸಮಾವೇಶಕ್ಕೆ ಗ್ರಾಪಂ ಹಣ ಬಳಸುವುದು ಕಾನೂನುಬಾಹಿರ: ಸುನೀಲ್ ಕುಮಾರ್

ನ.24ರಂದು ಉಡುಪಿಯಲ್ಲಿ ನಡೆಯಲಿರುವ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಗ್ರಾಮ...

ಉಡುಪಿ | ನ.24ರಂದು ಪಂಚ ಗ್ಯಾರಂಟಿ ಫಲಾನುಭವಿಗಳ ಸಂಭ್ರಮೋತ್ಸವ

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದ ಸಂಭ್ರಮ...

ಉಡುಪಿ | ಪತ್ರಿಕಾ ರಂಗದಲ್ಲಿ ನೈಜ ಸತ್ಯ ಹೇಳುವವರ ಅಗತ್ಯವಿದೆ: ಡಾ. ರಾಘವ ನಂಬಿಯಾರ್

ವ್ಯಾವಹಾರಿಕ ಸತ್ಯ ಹೇಳುವವರ ನಡುವೆ ನೈಜ ಸತ್ಯವನ್ನು ಪ್ರತಿಪಾದಿಸುವ ಪತ್ರಕರ್ತರ ಅಗತ್ಯವಿದೆ....

ಉಡುಪಿ | ಜನಪರ ಯೋಜನೆಗಳ ಬಗ್ಗೆ ಬಿಜೆಪಿಗೆ ಹೊಟ್ಟೆಕಿಚ್ಚು: ರಮೇಶ್ ಕಾಂಚನ್

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಚುನಾವಣಾಪೂರ್ವದಲ್ಲಿ ಜನರಿಗೆ ನೀಡಿದ ಭರವಸೆಯಂತೆ ಪಂಚ...