ಕಬ್ಬಿನ ದರ ನಿಗದಿಗೆ ಆಗ್ರಹಿಸಿ ಮೈಶುಗರ್ ಸಕ್ಕರೆ ಗೋದಾಮಿಗೆ ರೈತರ ಮುತ್ತಿಗೆ

Date:

ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ನೀಡಬೇಕು ಹಾಗೂ ಪ್ರತಿ ಟನ್ ಕಬ್ಬಿಗೆ ₹5,500 ದರ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ಮಂಡ್ಯ ನಗರದ ಮೈಶುಗರ್ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

- Advertisement -

ರೈತ ಸಂಘದ ಮುಖಂಡೆ ಹಾಗೂ ಪ್ರೊ. ನಂಜುಂಡಸ್ವಾಮಿ ಅವರ ಪುತ್ರಿ ಚುಕ್ಕಿ ನಂಜುಂಡಸ್ವಾಮಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದ ರೈತರು, ಕಬ್ಬಿನ ಬೆಲೆ ನಿಗದಿ ವಿಚಾರದಲ್ಲಿ ಸರ್ಕಾರಗಳು ವಿಳಂಬ ಧೋರಣೆ ಅನುಸರಿಸುತ್ತಿವೆ ಎಂದು ಆಕ್ಷೇಪಿಸಿದರು. ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನಿಗದಿಪಡಿಸುವವರೆಗೆ ಸಕ್ಕರೆ ಮಾರಾಟಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ಕಾರ್ಖಾನೆ ಆವರಣದಲ್ಲಿರುವ ಸಕ್ಕರೆ ಗೋದಾಮಿಗೆ ಮುತ್ತಿಗೆ ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ರೈತರು ಸಕ್ಕರೆ ಗೋದಾಮಿನತ್ತ ತೆರಳಲು ಮುಂದಾದಾಗ ಮೈಶುಗರ್ ಆಡಳಿತ ಮಂಡಳಿ ಆರಂಭದಲ್ಲಿ ಅವಕಾಶ ನಿರಾಕರಿಸಿತು. ಈ ಹಿನ್ನೆಲೆಯಲ್ಲಿ ಕಾರ್ಖಾನೆಯ ಮುಖ್ಯ ಗೇಟ್ ಮುಚ್ಚಲಾಯಿತು. ಆಕ್ರೋಶಗೊಂಡ ಕೆಲ ರೈತರು ಗೇಟ್ ಏರಲು ಯತ್ನಿಸಿದಾಗ ಪೊಲೀಸರು ತಡೆದರು. ಪರಿಸ್ಥಿತಿ ಉದ್ವಿಗ್ನಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಕಾರ್ಖಾನೆ ಆವರಣದಲ್ಲಿ ಪೊಲೀಸ್ ಭದ್ರತೆ ನಿಯೋಜಿಸಲಾಗಿತ್ತು.

ರೈತರ ಒತ್ತಾಯ ಹೆಚ್ಚಾದ ಬಳಿಕ ಅಧಿಕಾರಿಗಳು ಗೇಟ್ ತೆರೆಯಲು ಅವಕಾಶ ನೀಡಿದರು. ನಂತರ ಕಾರ್ಖಾನೆ ಆವರಣ ಪ್ರವೇಶಿಸಿದ ಪ್ರತಿಭಟನಾಕಾರರು ಸಕ್ಕರೆ ಗೋದಾಮಿನ ಬಳಿ ಜಮಾಯಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮೈಶುಗರ್ ಕಾರ್ಖಾನೆಯಲ್ಲಿ ಕಬ್ಬಿನ ದರ ನಿಗದಿಗೂ ಮುನ್ನ ಸಕ್ಕರೆ ಮಾರಾಟ ಮಾಡುತ್ತಿರುವುದಕ್ಕೆ ರೈತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಕಬ್ಬಿನ ದರ ಅಂತಿಮಗೊಳ್ಳುವವರೆಗೆ ಸಕ್ಕರೆ ಮಾರಾಟ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದರೂ, ಕಾರ್ಖಾನೆಯಲ್ಲಿ ಸಕ್ಕರೆ ಮಾರಾಟ ಮುಂದುವರಿದಿದೆ ಎಂದು ಆರೋಪಿಸಿದರು.

ಸಕ್ಕರೆ ಮಾರಾಟವನ್ನು ತಕ್ಷಣ ಸ್ಥಗಿತಗೊಳಿಸಬೇಕು ಎಂದು ಪಟ್ಟು ಹಿಡಿದ ರೈತರು, ಗೋದಾಮಿನಲ್ಲಿದ್ದ ಟ್ರ್ಯಾಲಿಗಳನ್ನು ಹೊರಗೆಳೆದು ಸಕ್ಕರೆ ಗೋದಾಮಿಗೆ ತಾವೇ ಬೀಗ ಹಾಕಿದರು. ಕಬ್ಬಿನ ಬೆಲೆ ನಿಗದಿ ಕುರಿತು ಸರ್ಕಾರ ನೀಡಿರುವ ಭರವಸೆಯನ್ನು ಕೂಡಲೇ ಈಡೇರಿಸಬೇಕು ಎಂದು ಆಗ್ರಹಿಸಿದರು. ಪ್ರಸ್ತುತ ನಡೆಸಿರುವುದು ಸಾಂಕೇತಿಕ ಪ್ರತಿಭಟನೆಯಾಗಿದ್ದು, ರೈತರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ರೈತರನ್ನು ಸಂಘಟಿಸಿ ಬೃಹತ್ ಹೋರಾಟ ನಡೆಸಲಾಗುವುದು ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದರು.

ವಿಶೇಷ ವರದಿ ಓದಿದ್ದೀರಾ? ಮೌಢ್ಯತೆಯೊಳಗೆ ನಾ ಕಂಡ ಭಾರತ

ಕಬ್ಬು ಬೆಳೆಯಲು ತಗಲುತ್ತಿರುವ ಉತ್ಪಾದನಾ ವೆಚ್ಚ, ಕಾರ್ಮಿಕರ ಕೂಲಿ, ಗೊಬ್ಬರ, ಸಾಗಣೆ ಸೇರಿದಂತೆ ವಿವಿಧ ವೆಚ್ಚಗಳನ್ನು ಪರಿಗಣಿಸಿ ರೈತರಿಗೆ ಲಾಭದಾಯಕ ಬೆಲೆ ನಿಗದಿಪಡಿಸಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕಬ್ಬು ಬೆಳೆಗಾರರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ವಿಶೇಷ ವರದಿ ಓದಿದ್ದೀರಾ? ಕಳೆಗುಂದಿದ ದರಿಯಾ ದೌಲತ್: ಟಿಪ್ಪು ಅರಮನೆಯ ಮೂಲ ಸೌಂದರ್ಯ ಉಳಿಸುವ ಹೊಣೆ ಯಾರದ್ದು?

ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡರಾದ ಚುಕ್ಕಿ ನಂಜುಂಡಸ್ವಾಮಿ, ಜಿಲ್ಲಾಧ್ಯಕ್ಷ ಕೆಂಪುಗೌಡ, ತನು, ಫಯಾಜ್, ಪರ್ವೀಜ್, ವಿಜಯಕುಮಾರ್, ಮಂಜುನಾಥ್, ಲಿಂಗಪ್ಪಾಜಿ, ಜವರೇಗೌಡ, ಸುರೇಶ್‌ಗೌಡ, ನಾಗರಾಜು, ಶಿವರಾಂ, ಶಿವಳ್ಳಿ ಚಂದ್ರಶೇಖರ್, ಮರಿಚನ್ನೇಗೌಡ, ಪ್ರಕಾಶ್ ಆನಂದ, ಸಂತೋಷ್ ಸೇರಿದಂತೆ ಹಲವು ರೈತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

Previous article

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಪ್ರಗತಿಪರ ಒಕ್ಕೂಟದಿಂದ ಪ್ರತಿಭಟನೆ

"ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಉಡುಪಿ | ಮನೆ ಮಾಲೀಕನ ಮೇಲೆ ಆಸಿಡ್ ದಾಳಿ, ತಲವಾರಿನಿಂದ ಕೊ*ಲೆಗೆ ಯತ್ನ ; ಆರೋಪಿಯ ಬಂಧನ

ಮನೆ ಬಾಡಿಗೆಯ ಮುಂಗಡ ಹಣದ ವಿಚಾರದಲ್ಲಿ ಉಂಟಾದ ವಿವಾದ ವಿಕೋಪಕ್ಕೆ ತಿರುಗಿ,...

ಯಾದಗಿರಿ | ಚಾಕೋಲೆಟ್ ಆಮಿಷವೊಡ್ಡಿ ಅಪ್ರಾಪ್ತತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಪ್ರಕರಣ ದಾಖಲು

ಚಾಕೋಲೆಟ್ ಕೊಡಿಸುವುದಾಗಿ ನಂಬಿಸಿ 12 ವರ್ಷದ ಬಾಲಕಿಯನ್ನು ಮನೆಗೆ ಕರೆದೊಯ್ದು ಲೈಂಗಿಕ...

ಉಡುಪಿ | ಮದುವೆ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಬೆದರಿಕೆ? ₹42.97 ಲಕ್ಷ ವಂಚನೆ ಆರೋಪ; ಇಬ್ಬರ ಬಂಧನ

ಮದುವೆ ಪ್ರಸ್ತಾಪದ ವಿಚಾರವಾಗಿ ಪರಿಚಯವಾಗಿದ್ದ ಮಹಿಳೆಯೊಬ್ಬರು ಹಾಗೂ ಇತರರು ಸೇರಿ ಬೆದರಿಕೆ...