SIR ವೆಚ್ಚದ ಶ್ವೇತಪತ್ರ ಬಿಡುಗಡೆಗೆ ಜಾಗೃತ ಕರ್ನಾಟಕ ಒತ್ತಾಯ

Date:

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಸಂದರ್ಭದಲ್ಲಿ ಕರ್ನಾಟಕದ ವಿವಿಧೆಡೆ ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿ ನೀಡಿ ಅಥವಾ ದುರುದ್ದೇಶದಿಂದ ಫಾರಂ-7 ದುರ್ಬಳಕೆ ಮಾಡಿರುವ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಬೇಕು ಎಂದು ಜಾಗೃತ ಕರ್ನಾಟಕದ ಸಂಚಾಲಕ ಡಾ. ವಾಸು ಎಚ್.ವಿ. ಆಗ್ರಹಿಸಿದರು.

- Advertisement -

ಮಂಡ್ಯ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಸ್‌ಐಆರ್‌ ಪ್ರಕ್ರಿಯೆಗಾಗಿ ಮಾಡಿರುವ ಒಟ್ಟು ವೆಚ್ಚದ ಅಧಿಕೃತ ಲೆಕ್ಕಪತ್ರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು. ಈ ಸಂಬಂಧ ವೆಚ್ಚದ ಸಂಪೂರ್ಣ ವಿವರಗಳನ್ನು ಒಳಗೊಂಡ ಶ್ವೇತಪತ್ರವನ್ನು ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಜಾಗೃತ ಕರ್ನಾಟಕದ ಸಂಚಾಲಕ ಪೃಥ್ವಿರಾಜ್ ಬಿ.ಎಲ್. ಮಾತನಾಡಿ, ಎಸ್‌ಐಆರ್‌ ಪ್ರಕ್ರಿಯೆಯಿಂದ ಮತದಾರರ ಪಟ್ಟಿಯಿಂದ ಕೈಬಿಡಲಾದವರ ಸಂಖ್ಯೆ ಹಾಗೂ ಮರುಸೇರ್ಪಡೆಗಾಗಿ ಅರ್ಜಿ ಸಲ್ಲಿಸಬೇಕಾದ ಮತದಾರರ ವಿವರಗಳನ್ನು ರಾಜ್ಯವಾರು ಮತ್ತು ಜಿಲ್ಲಾವಾರು ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಆಗ್ರಹಿಸಿದರು.

ಎಸ್‌ಐಆರ್‌ ಅನುಷ್ಠಾನದ ಸಂದರ್ಭದಲ್ಲಿ ನಡೆದಿರುವ ಲೋಪಗಳು, ಅನಗತ್ಯ ವೆಚ್ಚ ಹಾಗೂ ಆಡಳಿತಾತ್ಮಕ ದೋಷಗಳ ಕುರಿತು ಸ್ವತಂತ್ರ ಪರಿಶೀಲನೆ ನಡೆಸುವುದು ಅಗತ್ಯವಾಗಿದೆ. ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು. ಯಾವುದೇ ಅರ್ಹ ಮತದಾರರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು. ಚುನಾವಣಾ ಆಯೋಗವು ಸಂವಿಧಾನಾತ್ಮಕ ಸಂಸ್ಥೆಯಾಗಿದ್ದು, ಅದರ ಸ್ವಾಯತ್ತತೆ ಎಂದರೆ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸುವ ಹೊಣೆಗಾರಿಕೆಯಿಂದ ಮುಕ್ತವಾಗಿದೆ ಎಂದರ್ಥವಲ್ಲ. ಸ್ವಾಯತ್ತತೆಯೊಂದಿಗೆ ಪಾರದರ್ಶಕತೆ, ನಿಷ್ಪಕ್ಷಪಾತತೆ ಮತ್ತು ಹೊಣೆಗಾರಿಕೆಯೂ ಇರಬೇಕು ಎಂದು ಪೃಥ್ವಿರಾಜ್ ಅಭಿಪ್ರಾಯಪಟ್ಟರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರು ಚುನಾವಣಾ ಆಯೋಗಕ್ಕೆ ಉತ್ತರದಾಯಕರಲ್ಲ; ಬದಲಾಗಿ ಚುನಾವಣಾ ಆಯೋಗವು ಸಂವಿಧಾನ ಮತ್ತು ಜನರಿಗೆ ಉತ್ತರದಾಯಿಯಾಗಿದೆ ಎಂಬುದನ್ನು ಮರೆಯಬಾರದು. ಮತದಾರರ ಹಕ್ಕುಗಳ ರಕ್ಷಣೆ, ಸಾರ್ವಜನಿಕ ಹಣದ ಸದ್ಬಳಕೆ ಹಾಗೂ ಚುನಾವಣಾ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನು ಕಾಪಾಡುವುದು ಅತ್ಯಗತ್ಯ ಎಂದು ತಿಳಿಸಿದರು.

ಎಸ್‌ಐಆರ್‌ ಪ್ರಕ್ರಿಯೆಯಲ್ಲಿನ ಲೋಪಗಳು, ಫಾರಂ-7 ದುರ್ಬಳಕೆಯ ಆರೋಪಗಳು, ಪ್ರಕ್ರಿಯೆಗೆ ತಗಲಿರುವ ವೆಚ್ಚ ಹಾಗೂ ಮತದಾರರ ಪಟ್ಟಿಯಿಂದ ಕೈಬಿಡಲಾದವರ ಕುರಿತ ಮಾಹಿತಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳು ಸ್ಪಷ್ಟ ಉತ್ತರ ನೀಡಬೇಕು. ಈ ಎಲ್ಲ ವಿಷಯಗಳಲ್ಲಿ ಪಾರದರ್ಶಕತೆ ಖಚಿತಪಡಿಸಿ, ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಬೇಕು. ತಮ್ಮ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ದೊರೆಯುವವರೆಗೆ ಜಾಗೃತ ಕರ್ನಾಟಕ ಪ್ರಜಾಸತ್ತಾತ್ಮಕ ಹೋರಾಟವನ್ನು ಮುಂದುವರಿಸಲಿದೆ ಎಂದು ಎಚ್ಚರಿಸಿದರು.

ಈ ವಿಶೇಷ ವರದಿ ಓದಿದ್ದೀರಾ? ‘ಟಿಪ್ಪು ನಿಜ ಕನಸು’ಗಳಿಂದ ‘ಗಾಂಧೀ ಹತ್ಯೆಯ ಸತ್ಯ’ದವರೆಗೆ: ಇತಿಹಾಸ ತಿರುಚುವಿಕೆಯ ಸುತ್ತ ಮತ್ತೆ ವಿವಾದ

ಸುದ್ದಿಗೋಷ್ಠಿಯಲ್ಲಿ ಜಾಗೃತ ಕರ್ನಾಟಕದ ಸಂಚಾಲಕರಾದ ಕೃಷ್ಣ ಪ್ರಕಾಶ್, ಸಂತೋಷ್ ಎಂ. ಹಾಗೂ ನಗರಕೆರೆ ಜಗದೀಶ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಅ. 24ರಂದು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಪದಾಧಿಕಾರಿಗಳ ಪದಗ್ರಹಣ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.) ಸೇಡಂ ತಾಲೂಕು ಘಟಕದ ನೂತನ...

ಕಲಬುರಗಿ | ಗಾಂಜಾ ಸೇವನೆ ಆರೋಪ: 19 ವರ್ಷದ ಯುವಕನ ಬಂಧನ

ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯ ಪಾಕೀಜಾ ಸಮೀಪದ ಸಾರ್ವಜನಿಕ ಸ್ಥಳದಲ್ಲಿ...

ಕಲಬುರಗಿ | 20 ಪ್ರಕರಣಗಳ ಆರೋಪಿಗೆ ಗುಂಡಾ ಕಾಯ್ದೆ ಅಡಿ ಬಂಧನ

ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ಹಲ್ಲೆ ಸೇರಿದಂತೆ...

ವಿಜಯಪುರ |ಆಲಮಟ್ಟಿಯಿಂದ ನೀರು ಹರಿಸುವುದನ್ನು ನಿಲ್ಲಿಸಿ; ಇಲ್ಲದಿದ್ದರೆ ಜಲಾಶಯಕ್ಕೆ ಇಳಿದು ಪ್ರತಿಭಟನೆ:ಅರವಿಂದ ಕುಲಕರ್ಣಿ ಎಚ್ಚರಿಕೆ

ಆಲಮಟ್ಟಿ ಲಾಲಬಹದ್ದೂರ ಶಾಸ್ತ್ರಿ ಜಲಾಶಯದಿಂದ ಕೆಪಿಸಿಎಲ್ ಮೂಲಕ ನಾರಾಯಣಪುರ ಜಲಾಶಯಕ್ಕೆ ಪ್ರತಿದಿನ...