ಮಂಡ್ಯ | ಗೃಹಸಚಿವರ ಕುಮ್ಮಕ್ಕಿನಿಂದ ಸುಳ್ಳು ಕೇಸ್; ಕೆಆರ್‌ಎಸ್ ಪಕ್ಷದಿಂದ ಪ್ರತಿಭಟನೆ, ಸಿಎಂಗೆ ಮನವಿ

Date:

ತುಮಕೂರಿನಲ್ಲಿ ನಡೆದ ಜನತಾದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಸಲ್ಲಿಸಲು ತೆರಳಿದ್ದ ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ನಾಯಕರ ಮೇಲೆ ಪೊಲೀಸರು ದಬ್ಬಾಳಿಕೆ ಎಸಗಿ, ಸುಳ್ಳು ಮೊಕದ್ದಮೆಗಳನ್ನು ದಾಖಲಿಸಿರುವುದನ್ನು ಖಂಡಿಸಿ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಮಂಡ್ಯದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

- Advertisement -

​ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ಗೃಹ ಸಚಿವರಿಗೆ ಮನವಿ ಪತ್ರ ಸಲ್ಲಿಸಿದ ಕಾರ್ಯಕರ್ತರು, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ರಾಜೀನಾಮೆಗೆ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಗೃಹ ಸಚಿವ ಜಿ. ಪರಮೇಶ್ವರ್ ಅವರ ಸೂಚನೆಯ ಮೇರೆಗೆ, ರಾಜಕೀಯ ಹಗೆಯಿಂದ ಪಕ್ಷದ ರಾಜ್ಯ ಉಪಾಧ್ಯಕ್ಷ ಸೋಮಸುಂದರ್ ಕೆ.ಎಸ್., ಜ್ಞಾನಸಿಂಧು ಸ್ವಾಮಿ ಹಾಗೂ ಕಾರ್ಯದರ್ಶಿ ಮಲ್ಲಿಕಾರ್ಜುನಯ್ಯ ಭಟ್ಟರಹಳ್ಳಿ ಸೇರಿದಂತೆ ಇತರ ನಾಯಕರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪಕ್ಷವು ಗಂಭೀರವಾಗಿ ಆರೋಪಿಸಿದೆ.

ಬಿಎನ್‌ಎಸ್ ಪ್ರಕಾರ ಪ್ರಾಥಮಿಕ ತನಿಖೆಗೆ ಅವಕಾಶವಿದ್ದರೂ, ಯಾವುದೇ ತನಿಖೆ ನಡೆಸದೆ ದಿಢೀರ್ ಕ್ರಮ ಕೈಗೊಂಡಿರುವುದು ಹಾಗೂ ಮಹಿಳಾ ಪೊಲೀಸರ ಪಿಎಸ್‌ಐ ಮಂಜುಳಾ ಮೂಲಕ ದೂರು ದಾಖಲಿಸುವ ತಂತ್ರದ ಹಿಂದೆ ಷಡ್ಯಂತ್ರವಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

​ಸಾರ್ವಜನಿಕರ ಅಹವಾಲು ಸಲ್ಲಿಸಲು ಬಂದವರ ಎದುರಾಗಿ ಪ್ರಕರಣ ದಾಖಲಿಸುವುದು ಪ್ರಜಾಪ್ರಭುತ್ವಕ್ಕೆ ವಿರೋಧವಲ್ಲವೇ? ​ಊರೊಟ್ಟಿನ ಎಡೆಯಲ್ಲಿ ವಿಡಿಯೋ ಮಾಡುವುದು ಕಾನೂನುಬಾಹಿರವೇ? ​ಕಿಂಚಿತ್ತೂ ತನಿಖೆ ನಡೆಸದೆ ತುರ್ತಾಗಿ ಕ್ರಮ ಕೈಗೊಂಡಿದ್ದರ ಹಿಂದಿನ ಮರ್ಮವೇನು? ​ಮಹಿಳಾ ಪೊಲೀಸರ ಮೂಲಕ ದೂರು ದಾಖಲಿಸುವ ತಂತ್ರದ ಹಿಂದಿರುವ ಉದ್ದೇಶವೇನು? ಎಂದು ಯಾವುದೇ ರಸ್ತೆ ತಡೆ ಇಲ್ಲವೇ ಸಾರ್ವಜನಿಕರಿಗೆ ತೊಡಕು ನೀಡದೆ, ಶಿಸ್ತುಬದ್ಧವಾಗಿ ತೆರಳಿ ಅಧಿಕಾರಿಗಳಿಗೆ ವೈಯಕ್ತಿಕವಾಗಿ ಮನವಿ ಸಲ್ಲಿಸಿರುವ ಕೆಆರ್‌ಎಸ್ ಕಾರ್ಯಕರ್ತರು, ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮಂಡ್ಯ | ಯುವ ರೈತರಿಗೆ ಶಕ್ತಿ ತುಂಬುವ ಕೆಲಸ ಮಾಡಲಾಗುವುದು: ಸಚಿವ ಚಲುವರಾಯಸ್ವಾಮಿ

​ಕೆಆರ್‌ಎಸ್ ಪಕ್ಷದ ಮುಖಂಡರ ಮೇಲೆ ದಾಖಲಾಗಿರುವ ಸುಳ್ಳು ಪ್ರಕರಣಗಳನ್ನು ಸರ್ಕಾರವು ಈ ಕೂಡಲೇ ಹಿಂಪಡೆಯಬೇಕು.
​ಮುಖಂಡರ ಮೇಲೆ ಸುಳ್ಳು ದೂರು ನೀಡಿದ ಪಿಎಸ್‌ಐ ಮಂಜುಳಾ ಅವರ ಮೇಲೆ ಸೂಕ್ತ ತನಿಖೆಯಾಗಬೇಕು. ​”ಗೊತ್ತಿಲ್ಲ” ಖ್ಯಾತಿಯ ಗೃಹ ಸಚಿವರು ತಮ್ಮ ಸ್ಥಾನಕ್ಕೆ ತಕ್ಷಣವೇ ರಾಜೀನಾಮೆ ನೀಡಬೇಕು. ​ಹೋರಾಟಗಾರರನ್ನು ಬಂಧಿಸುವುದನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕು. ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಈ ಹೊತ್ತಿನಲ್ಲಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ರಮೇಶ್ ಗೌಡ, ಮಂಡ್ಯ ಜಿಲ್ಲಾಧ್ಯಕ್ಷ ಡಿ.ಜಿ. ನಾಗರಾಜ್, ಜಿಲ್ಲಾ ಉಪಾಧ್ಯಕ್ಷ ಮಲ್ಲೇಶ್ ಹೆಬ್ಬಕವಾಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರು ಕಿಲಾರ್, ರೈತ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರೀಶ್ ಕಂಪಾಲಾಪುರ, ಯುವ ಘಟಕದ ಪ್ರಧಾನ ಕಾರ್ಯದರ್ಶಿ ದೀಪಿಕಾ ಸೇರಿದಂತೆ ಹಲವು ತಾಲೂಕು ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA)...

ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ...

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ...