ಮೃತ ವ್ಯಕ್ತಿಗಳ ಹೆಸರಲ್ಲೂ ಹಣ ಲೂಟಿ: ಮಂಡ್ಯ ಜಿಲ್ಲಾಧಿಕಾರಿಗೆ KRS ದೂರು

Date:

​ಮಂಡ್ಯ ಜಿಲ್ಲೆಯ ರಿವರ್ ವ್ಯಾಲಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಅಂಗವಿಕಲರ ಕಲ್ಯಾಣ ಇಲಾಖೆಯ ಅನುದಾನವನ್ನು ಭಾರೀ ಪ್ರಮಾಣದಲ್ಲಿ ದುರುಪಯೋಗಪಡಿಸಿಕೊಂಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಕರ್ನಾಟಕ ರಾಜ್ಯ ಸಮಿತಿ (KRS) ಪಕ್ಷದ ಮಂಡ್ಯ ಜಿಲ್ಲಾ ಘಟಕವು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಸಮಗ್ರ ತನಿಖೆಗೆ ಆಗ್ರಹಿಸಿದೆ.

- Advertisement -

​ಪತ್ರಿಕೆಯಲ್ಲಿ ಪ್ರಕಟವಾದ ವರದಿಗಳ ಪ್ರಕಾರ, ಈ ಸಂಸ್ಥೆಯು ಮೃತಪಟ್ಟ ವ್ಯಕ್ತಿಗಳನ್ನು ದಾಖಲೆಗಳಲ್ಲಿ ಜೀವಂತವಾಗಿರಿಸಿ, ಅವರ ಹೆಸರಿನಲ್ಲಿ ಸರಕಾರಿ ಹಣವನ್ನು ಲೂಟಿ ಮಾಡುತ್ತಿದೆ ಎಂಬ ಅಂಶ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಸತ್ತು ಹೋದವರ ಆಧಾರ್ ಕಾರ್ಡ್‌ಗಳನ್ನು ಬಳಸಿ, ನಕಲಿ ಸಹಿ ಮಾಡಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟ ಉಂಟುಮಾಡಲಾಗುತ್ತಿದೆ.​ ಸರಕಾರದ ಕಟ್ಟುನಿಟ್ಟಿನ ಮಾರ್ಗಸೂಚಿಗಳಿದ್ದರೂ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕೆಲವು ಸ್ವಯಂ ಸೇವಾ ಸಂಸ್ಥೆಗಳೊಂದಿಗೆ ಕೈಜೋಡಿಸಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

WhatsApp Image 2026 01 28 at 8.59.56 PM

2026ರ ಜ.27ರಂದು ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದರು. ಅವರ ಪ್ರಮುಖ ಬೇಡಿಕೆಗಳು ಈ ಕೆಳಗಿನಂತಿವೆ:

ತಕ್ಷಣವೇ ತನಿಖಾ ತಂಡವನ್ನು ರಚಿಸಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಅಂಗವಿಕಲರ ಸಬಲೀಕರಣ ಇಲಾಖೆಯ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಬೇಕು. ಭ್ರಷ್ಟಾಚಾರ ಸಾಬೀತಾದಲ್ಲಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವುದಲ್ಲದೆ, ಆದಾಯಕ್ಕಿಂತ ಅಧಿಕವಾಗಿ ಹೊಂದಿರುವ ಅವರ ಆಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು.

ಇದನ್ನೂ ಓದಿ: ​ಮಂಡ್ಯ | ಯುವಜನರ ಭಾವನೆಗಳ ಜತೆಗಿನ ರಾಜಕೀಯ ಚೆಲ್ಲಾಟ ನಿಲ್ಲಿಸಿ: ಸಿಪಿಐಎಂ

​ಸಾರ್ವಜನಿಕರ ತೆರಿಗೆ ಹಣವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಬದಲು, ಈ ರೀತಿ ಅಕ್ರಮ ಎಸಗುತ್ತಿರುವುದು ಖಂಡನೀಯ ಎಂದು ಪಕ್ಷದ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯ ಒದಗಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಳೆಯೂ ಇಲ್ಲ, ಬೆಳೆಯೂ ಇಲ್ಲ; ಕಾವೇರಿ ಹರಿದಿದ್ದು ತಮಿಳುನಾಡಿನತ್ತ-ರೈತನ ಬದುಕಿನ ಮುಂದಿನ ದಾರಿ ಏನು?

ಮಳೆ ಕೈಕೊಟ್ಟಿದೆ. ಹೊಲದಲ್ಲಿ ಬೆಳೆ ಕಾಣುತ್ತಿಲ್ಲ. ಕೆರೆ-ಕಟ್ಟೆಗಳು ತುಂಬಿಲ್ಲ. ಜಾನುವಾರುಗಳಿಗೆ ಮೇವು...

ಪಾಂಡವಪುರ | ಮೇಲುಕೋಟೆ ಕ್ಷೇತ್ರದ ಬಳಗಟ್ಟ ಪಂಚಾಯಿತಿಯಲ್ಲಿ ಸಮಗ್ರ ಅಭಿವೃದ್ಧಿಗೆ ಹೊಸ ಹೆಜ್ಜೆ

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಗ್ರಾಮಗಳನ್ನು ಸಮಗ್ರ ಹಾಗೂ ಸುಸ್ಥಿರವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ...

ಹಳೇ ಮೈಸೂರು ರಾಜಕೀಯದ ಭವಿಷ್ಯದ ಬುನಾದಿ: ಮಹಿಳಾ ನಾಯಕತ್ವ ಎಲ್ಲಿ ಕಳೆದುಹೋಯಿತು?

ಹಳೇ ಮೈಸೂರು ಭಾಗ ಕರ್ನಾಟಕದ ರಾಜಕೀಯ ಇತಿಹಾಸವನ್ನು ರೂಪಿಸಿದ ಪ್ರಮುಖ ರಾಜಕೀಯ...