ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಮಳವಳ್ಳಿಯಲ್ಲಿ ಬೆಂಬಲ

Date:

ಮಂಡ್ಯ ಜಿಲ್ಲೆ ಮಳವಳ್ಳಿ ಬಸ್ ನಿಲ್ದಾಣದ ಬಳಿ ನಡೆದ ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ವಿರೋಧಿ ಕರ್ನಾಟಕ ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರ ಚಿಂತಕರು ಬೆಂಬಲ ವ್ಯಕ್ತಪಡಿಸಿದರು.

- Advertisement -

ಸಭೆಯನ್ನು ಉದ್ದೇಶಿಸಿ ಮಾತನಾಡಿದ ವಕ್ತಾರರು, ಚುನಾವಣೆ ಪ್ರಜಾಪ್ರಭುತ್ವದ ಅತ್ಯಂತ ಪವಿತ್ರ ಪ್ರಕ್ರಿಯೆಯಾಗಿದ್ದು, ಚುನಾವಣಾ ಆಯೋಗ, ಮತದಾನದ ವಿಧಾನ ಹಾಗೂ ಮತದಾರರ ಪಟ್ಟಿ ಅದರ ಮೂರು ಪ್ರಮುಖ ಸ್ತಂಭಗಳಾಗಿವೆ ಎಂದು ತಿಳಿಸಿದರು. ಈ ಮೂಲಾಧಾರಗಳ ಮೇಲೆಯೇ ದಾಳಿ ನಡೆಯುತ್ತಿರುವುದು ದೇಶದ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ...

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು ಶೂನ್ಯಕ್ಕೆ ತಲುಪಿದೆ. ಜಲಾಶಯ ಭರ್ತಿಯಾಗಿ ಈಗ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ, ಇದುವರೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸದಿರುವುದು ಬಾಗಲಕೋಟೆ ಜಿಲ್ಲೆಯ...

ದೇವರು, ಪುರಾಣ, ಕರ್ಮಕಾಂಡಗಳು ಮನುಷ್ಯನನ್ನು ಗುಲಾಮನನ್ನಾಗಿ ಮಾಡುತ್ತವೆಂದು ಹೇಳಿದ...

ಪೆರಿಯಾರ್ ದೇವರನ್ನು ವಿರೋಧಿಸಿದ್ದು ದೇವರ ಮೇಲಿನ ದ್ವೇಷಕ್ಕಲ್ಲ; ಬದಲಿಗೆ ದೇವರ ಹೆಸರಿನಲ್ಲಿ ನಡೆಯುವ ಮೋಸ, ಶೋಷಣೆಯ ವಿರುದ್ಧ. ಅವರು ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದರು. ಜೀವನಪೂರ್ತಿ ಯಾವುದೇ ಅಧಿಕಾರದ ಕುರ್ಚಿಯನ್ನೂ ಏರಲಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ...

ಚುನಾವಣಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಹಿಂದೆ ಭಾರತದ ಮುಖ್ಯ ನ್ಯಾಯಮೂರ್ತಿ, ಪ್ರಧಾನಿ ಹಾಗೂ ವಿರೋಧ ಪಕ್ಷದ ನಾಯಕರು ಸದಸ್ಯರಾಗಿದ್ದ ಸಮಿತಿಯಲ್ಲಿ ಮುಖ್ಯ ನ್ಯಾಯಮೂರ್ತಿಯನ್ನು ಹೊರಗಿಟ್ಟು, ಪ್ರಧಾನಿಯವರೇ ಸೂಚಿಸುವ ಸಚಿವರನ್ನು ಸೇರಿಸಿರುವುದು ಚುನಾವಣಾ ವ್ಯವಸ್ಥೆಯ ಸ್ವಾಯತ್ತತೆಗೆ ಧಕ್ಕೆ ತಂದಿದೆ ಎಂದು ಆರೋಪಿಸಿದರು. ಇದೇ ಹಿನ್ನೆಲೆಯಲ್ಲೇ ಎಸ್‌ಐಆರ್ ಪ್ರಕ್ರಿಯೆ ಮೂಲಕ ಮತದಾರರ ಹಕ್ಕುಗಳನ್ನು ಕಸಿಯುವ ಪ್ರಯತ್ನಗಳು ನಡೆಯುತ್ತಿದ್ದು, ಅದರ ಅನ್ಯಾಯಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ?ಮೈಸೂರು | ಪುಟ್ಟ ವಯಸ್ಸಿನಲ್ಲೇ ಅಪೂರ್ವ ಸಾಧನೆ: ಪ್ರಾಂಜಲಿ ರಾಜ್‌ಗೆ ಏಷ್ಯಾ ಗ್ರ್ಯಾಂಡ್‌ಮಾಸ್ಟರ್ 2026 ಪ್ರಶಸ್ತಿ

ಜಾಥಾದಲ್ಲಿ ಪ್ರಗತಿಪರ ಚಿಂತಕರಾದ ಎಂ.ವಿ. ಕೃಷ್ಣ, ಡಾ. ಮ.ಪು. ಪೂರ್ಣಾನಂದ, ನಂದಕುಮಾರ್ ಶೃಂಗೇರಿ-ಕೊಪ್ಪ, ಸಾಮಾಜಿಕ ಹೋರಾಟಗಾರ್ತಿ ಕಿರಣ್ ಪಿ.ಆರ್., ಶಿವಕುಮಾರ್, ಲಿಂಗರಾಜು, ನಸ್ರೀನ್ ಮಿಠಾಯಿ, ಮಹಿಳಾ ಮುನ್ನಡೆಯ ಶಿಲ್ಪಾ, ಕರ್ನಾಟಕ ಜನಶಕ್ತಿ ಜಿಲ್ಲಾ ಕಾರ್ಯದರ್ಶಿ ಸಿದ್ದರಾಜು ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಬೇಳೂರು ಗ್ರಾಪಂ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ಧಾಳಿ

ಕಟ್ಟಡ ಪರವಾನಿಗೆ ನೀಡುವಲ್ಲಿ ವಿಳಂಬ ಹಾಗೂ ಪಂಚಾಯತ್ ಆಡಳಿತಕ್ಕೆ ಸಂಬಂಧಿಸಿದ ವಿವಿಧ...

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್...

ಭಟ್ಕಳ | ಗಣಪತಿ ವಿಸರ್ಜನೆ ವೇಳೆ ಮಸೀದಿ ಕಿಟಕಿ ಗಾಜು ಒಡೆದು, ಗೊಜ್ಜು ತೂರಾಟ ಆರೋಪ: ದೂರು–ಪ್ರತಿದೂರು ದಾಖಲು

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಮಸೀದಿಯ ಕಿಟಕಿ ಗಾಜನ್ನು ಕಲ್ಲಿನಿಂದ...

ಕಸ್ತೂರಿ ರಂಗನ್ ವರದಿ: ಸಿಎಂಗೆ ಮನವಿ ಸಲ್ಲಿಸಲು ಪಕ್ಷ, ಸಂಘಟನೆಗಳಿಗೆ ಅವಕಾಶವಿದೆ; ಟಿ.ಡಿ ರಾಜೇಗೌಡ 

ಕಸ್ತೂರಿರಂಗನ್ ವರದಿ ಕುರಿತು ತಮ್ಮ ಅಭಿಪ್ರಾಯ, ಆಕ್ಷೇಪಣೆ ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿ...