ಮಂಡ್ಯ | ಎಕ್ಸ್​ಪ್ರೆಸ್​ ವೇ ಎಂಟ್ರಿ ಮತ್ತು ಎಕ್ಸಿಟ್ ಬಂದ್‌; ಸವಾರರ ಪರದಾಟ

Date:

ಟೋಲ್ ಸಂಗ್ರಹದ ನೆಪದಲ್ಲಿ ಮಂಡ್ಯ ಜಿಲ್ಲೆಯ ಬಹುತೇಕ ಕಡೆ ಎಂಟ್ರಿ ಮತ್ತು ಎಕ್ಸಿಟ್​​​ಗಳನ್ನು ಕ್ಲೋಸ್ ಮಾಡಲಾಗಿದೆ, ಹೀಗಾಗಿ, ಬೆಂಗಳೂರಿನಿಂದ ಮಂಡ್ಯಕ್ಕೆ, ಮೈಸೂರಿನಿಂದ ಮಂಡ್ಯಕ್ಕೆ, ಮಂಡ್ಯದಿಂದ ಮೈಸೂರಿಗೆ ತೆರಳುವ ವಾಹನ ಸವಾರರು ಪರದಾಡುವಂತಾಗಿದೆ.

- Advertisement -

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇ ಸದಾ ವಿವಾದಗಳಿಗೆ ಸುದ್ದಿಯಾಗಿದೆ. ಈ ಹಿಂದೆ, ತಾಲೂಕು, ಜಿಲ್ಲಾ ಕೇಂದ್ರಗಳಿಗೆ ಎಂಟ್ರಿ ಹಾಗೂ ಎಕ್ಸಿಟ್​​ಗಳು ಇರಲಿಲ್ಲ. ನೇರವಾಗಿ ಬೆಂಗಳೂರಿನಿಂದ ಮೈಸೂರು ಸಂಚಾರಕ್ಕೆ ಮಾತ್ರ ಅವಕಾಶ ಇತ್ತು. ಆನಂತರ ಪ್ರತಿಭಟನೆ, ಹೋರಾಟಗಳು ನಡೆದ ನಂತರ ಜಿಲ್ಲಾ ಹಾಗೂ ತಾಲೂಕು ಕೇಂದ್ರ ಸಂಪರ್ಕ ಕಲ್ಪಿಸಲು ಎಲ್ಲ ಪಟ್ಟಣಗಳ ಬಳಿ ಎಂಟ್ರಿ ಹಾಗೂ ಎಕ್ಸಿಟ್ ಕಲ್ಪಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಆದರೆ, ಇದೀಗ ಟೋಲ್ ಸಂಗ್ರಹದ ನೆಪವೊಡ್ಡಿ, ಮಂಡ್ಯ ಜಿಲ್ಲೆಯ ಬಹುತೇಕ ಕಡೆ ಎಂಟ್ರಿ ಹಾಗೂ ಎಕ್ಸಿಟ್​​​ಗಳನ್ನ ಕ್ಲೋಸ್ ಮಾಡಲಾಗಿದೆ. ಹೀಗಾಗಿ, ಮಂಡ್ಯದಿಂದ ಮೈಸೂರು ಮತ್ತು ಬೆಂಗಳೂರು ಕಡೆಗೆ ಪ್ರಯಾಣಿಸುವ ವಾಹನಗಳು ಸರ್ವಿಸ್ ರಸ್ತೆಯಲ್ಲಿಯೇ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈಗಾಗಲೇ, ಎಕ್ಸ್‌ಪ್ರೆಸ್‌ ವೇನಲ್ಲಿ ದುಬಾರಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ. ಬೆಂಗಳೂರಿನ ಕಣಮಿಣಿಕೆ ಮತ್ತು ಮಂಡ್ಯದ ಗಣಂಗೂರು ಬಳಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ. ಆದರೆ, ಬೆಂಗಳೂರಿನಿಂದ ಬರುವ ವಾಹನ ಸವಾರರು ಪಾಂಡವಪುರಕ್ಕೆ ಹೋಗಬೇಕಾದರೆ, ಇಂಡವಾಳು ಬಳಿ ಎಕ್ಸ್‌ಪ್ರೆಸ್‌ ವೇನಿಂದ ಹೊರ ಬರುತ್ತಿದ್ದರು. ಆದರೆ, ಇದೀಗ ಆ ಎಕ್ಸಿಟ್ಅನ್ನು ಕ್ಲೋಸ್ ಮಾಡಲಾಗಿದೆ.

ಇನ್ನು ಮಂಡ್ಯದಿಂದ ಮೈಸೂರಿಗೆ ಹೋಗುವವರು ಇಂಡುವಾಳು ಬಳಿ ಇರುವ ಎಂಟ್ರಿ ಮೂಲಕ ಎಕ್ಸ್‌ಪ್ರೆಸ್‌ ವೇಗೆ ಬರುತ್ತಿದ್ದರು. ಎಂಟ್ರಿಯನ್ನು ಬಂದ್‌ ಮಾಡಲಾಗಿದ್ದು, ಮಂಡ್ಯದಿಂದ ಮೈಸೂರಿನವರೆಗೂ ಸರ್ವೀಸ್‌ ರಸ್ತೆಯಲ್ಲೇ ಪ್ರಯಾಣಿಸಬೇಕಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...