ಮಂಡ್ಯ | ಮೈಶುಗರ್ ಕಾರ್ಖಾನೆಯ ಬಿಸಿನೀರಿನ ಹೊಂಡಕ್ಕೆ ಬಿದ್ದು ಕಾರ್ಮಿಕ ಸಾವು: ಸಂಬಂಧಿಕರಿಂದ ತೀವ್ರ ಪ್ರತಿಭಟನೆ

Date:

ಮಂಡ್ಯ ಜಿಲ್ಲೆಯ ಮೈಸೂರು ಶುಗರ್ ಫ್ಯಾಕ್ಟರಿ(ಮೈಶುಗರ್ ಕಾರ್ಖಾನೆ)ಯಲ್ಲಿ ಬಿಸಿ ನೀರಿನ ಹೊಂಡಕ್ಕೆ ಬಿದ್ದು 33 ವರ್ಷದ ಗುತ್ತಿಗೆ ಕಾರ್ಮಿಕ ಮೃತಪಟ್ಟಿರುವ ಘಟನೆ ನಡೆದಿದ್ದು, ಕಾರ್ಮಿಕನ ಸಾವಿಗೆ ಕಾರ್ಖಾನೆ ಆಡಳಿತದ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿರುವ ಕುಟುಂಬಸ್ಥರು, ಸಂಬಂಧಿಕರು ಹಾಗೂ ಗ್ರಾಮಸ್ಥರು ಕಾರ್ಖಾನೆ ಎದುರು ಪ್ರತಿಭಟನೆ ನಡೆಸಿದರು.

- Advertisement -

ಮೃತ ಕಾರ್ಮಿಕನನ್ನು ಮದ್ದೂರು ತಾಲೂಕಿನ ಕೆ. ಶೆಟ್ಟಿಹಳ್ಳಿ ಗ್ರಾಮದ ಚರಣ್ ಎಂದು ಗುರುತಿಸಲಾಗಿದೆ. ಖಾಸಗಿ ಏಜೆನ್ಸಿಯೊಂದರ ಮೂಲಕ ಕಳೆದ ಒಂದೂವರೆ ವರ್ಷದಿಂದ ಅವರು ಗುತ್ತಿಗೆ ಆಧಾರದ ಮೇಲೆ ಮೈಶುಗರ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಮೂಲಗಳ ಪ್ರಕಾರ, ಸೆಪ್ಟೆಂಬರ್ 3ರಂದು ಚರಣ್ ಕಾರ್ಖಾನೆಯೊಳಗಿನ ಬಿಸಿನೀರಿನ ಹೊಂಡಕ್ಕೆ ಬಿದ್ದಿದ್ದರು. ಗಂಭೀರವಾಗಿ ಗಾಯಗೊಂಡ ಅವರನ್ನು ಚಿಕಿತ್ಸೆಗಾಗಿ ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಹಲವು ದಿನಗಳ ಕಾಲ ಚಿಕಿತ್ಸೆ ಪಡೆದರೂ ಚರಣ್ ಅವರ ಸ್ಥಿತಿ ಸುಧಾರಿಸದೆ, ಮಂಗಳವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಚರಣ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕೆ. ಶೆಟ್ಟಿಹಳ್ಳಿ ಗ್ರಾಮದ ಕುಟುಂಬಸ್ಥರು, ಸಂಬಂಧಿಕರು ಹಾಗೂ ಗ್ರಾಮಸ್ಥರು ಮೈಸುಗರ್ ಕಾರ್ಖಾನೆ ಎದುರು ಜಮಾಯಿಸಿ ಧರಣಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಗಣೇಶ ಹಬ್ಬದ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಎಸ್‌ಪಿ ಶೋಭಾರಾಣಿ ಖಡಕ್‌ ವಾರ್ನಿಂಗ್‌

ಘಟನೆಗೆ ಕಾರ್ಖಾನೆ ಆಡಳಿತದ ನಿರ್ಲಕ್ಷ್ಯವೇ ಕಾರಣ. ಕಾರ್ಮಿಕರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ಆಡಳಿತ ವಿಫಲವಾಗಿದೆ ಎಂದು ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ವಿವಿಧ ಸಂಘಟನೆಗಳೂ ಪ್ರತಿಭಟನೆಗೆ ಬೆಂಬಲ ಸೂಚಿಸಿವೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಕಾರ್ಖಾನೆ ಮುಂಭಾಗದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಸೇರಿ ಎಲ್ಲಾ ಉತ್ಸವಗಳಲ್ಲಿ ಆನೆಗಳ ಬಳಕೆ ನಿಷೇಧಿಸಿ, ರೋಬೋಟಿಕ್ ಆನೆ ಬಳಸಿ: ಅರಣ್ಯ ಸಚಿವರಿಗೆ ಮನವಿ

ನಾಡಹಬ್ಬ ಮೈಸೂರು ದಸರಾ ಮತ್ತು ಜಿಲ್ಲಾವಾರು ದಸರಾ ಆಚರಣೆಗಳು ಸೇರಿದಂತೆ ಯಾವುದೇ...

ಔರಾದ(ಬಿ) ಬಿಜೆಪಿ ಮಂಡಲದ ನೂತನ ಅಧ್ಯಕ್ಷರಾಗಿ ಅನಿರುದ್ಧ ವಾಡೇಕರ್ ಆಯ್ಕೆ

ಭಾರತೀಯ ಜನತಾ ಪಕ್ಷದ ಔರಾದ(ಬಿ) ಮಂಡಲದ ನೂತನ ಅಧ್ಯಕ್ಷರಾಗಿ ಅನಿರುದ್ಧ ವಾಡೇಕರ್...

ಆಂಧ್ರಪ್ರದೇಶ | ರಸ್ತೆ ಕಾಮಗಾರಿ ವೇಳೆ ಜೆಲಾಟಿನ್ ಸ್ಫೋಟ; ಶಾಲಾ ಶಿಕ್ಷಕಿ ಸೇರಿದಂತೆ ಹಲವರ ಸಾವು

ರಸ್ತೆ ಕಾಮಗಾರಿಗಾಗಿ ಬಳಸಲಾಗುತ್ತಿದ್ದ ಜೆಲಾಟಿನ್ ಸ್ಟಿಕ್‌ಗಳು ಅನಿರೀಕ್ಷಿತವಾಗಿ ಸ್ಫೋಟಗೊಂಡು, ಶಾಲಾ ಶಿಕ್ಷಕಿಯೊಬ್ಬರು...

ರಾಯಚೂರು | ಸ್ಮಶಾನದಲ್ಲಿ ಹೂತ ಶವಗಳ ಅವಶೇಷ ಸಾಗಣೆ ಆರೋಪ: ಮೂವರು ಪೊಲೀಸ್ ವಶಕ್ಕೆ

ನಗರದ 13ನೇ ವಾರ್ಡ್‌ನ ಮಾರುತಿ ನಗರ ಸ್ಮಶಾನದಲ್ಲಿ ಹೂತು ಹಾಕಿದ ಶವಗಳ...