ಮಂಡ್ಯ | ಪ್ರತಿಭೆ ಅನಾವರಣಕ್ಕೆ ʻಯುವಜನೋತ್ಸವʼ ಉತ್ತಮ ವೇದಿಕೆ: ಶಾಸಕ ರವಿಕುಮಾರ್.ಪಿ

Date:

ಯುವಜನತೆ ತಮ್ಮಲ್ಲಿರುವ ಸುಪ್ತ ಪ್ರತಿಭೆ ಹಾಗೂ ವಿಶಿಷ್ಟ ಸಾಮರ್ಥ್ಯವನ್ನು ಸ್ಪರ್ಧೆಗಳ ಮೂಲಕ ಅನಾವರಣಗೊಳಿಸಿ, ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಸಾಧನೆ ಮಾಡುವ ಮೂಲಕ ಮಂಡ್ಯ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ಶಾಸಕ ರವಿಕುಮಾರ್.ಪಿ ಕರೆ ನೀಡಿದರು.

- Advertisement -

ನಗರದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಮಾತನಾಡಿ, “ಪ್ರತಿ ಕಾಲೇಜಿನಲ್ಲಿಯೂ ನೂರಾರು ವಿದ್ಯಾರ್ಥಿಗಳಿದ್ದರೂ, ತಮ್ಮಲ್ಲಿರುವ ವಿಶೇಷ ಪ್ರತಿಭೆ ಮತ್ತು ಸಾಮರ್ಥ್ಯದ ಆಧಾರದ ಮೇಲೆ ಆಯ್ಕೆಯಾಗಿ ಯುವಜನೋತ್ಸವದಲ್ಲಿ ಭಾಗವಹಿಸಿರುವುದು ಹೆಮ್ಮೆಯ ಸಂಗತಿ. ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು ಪ್ರತಿಭೆ ಪ್ರದರ್ಶಿಸುವುದರ ಜೊತೆಗೆ ಗೆಲುವು ಸಾಧಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಬೇಕು. ಸ್ವಾಮಿ ವಿವೇಕಾನಂದರು ಅಲ್ಪ ವಯಸ್ಸಿನಲ್ಲಿಯೇ ವಿಶ್ವದ ಎದುರು ಭಾರತದ ಘನತೆಯನ್ನು ಎತ್ತಿಹಿಡಿದ ಆದರ್ಶವನ್ನು ಯುವಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ...

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...

ಹಸಿವು, ಹಕ್ಕು ಮತ್ತು ‘ದೇವರ ಹೆಣ’

ಹಸಿದವನಿಗೆ ಮಾಂಸವನ್ನು ನಿರಾಕರಿಸುವುದು ಕೇವಲ ದ್ವೇಷವಲ್ಲ, ಅದು ತನ್ನ ಜಾತಿಯ ಪಾವಿತ್ರ್ಯವನ್ನು ಹಸಿದ ಹೊಟ್ಟೆಯ ಮೇಲೆ ಹೇರುವ ಕ್ರೌರ್ಯ. ಇಂದಿನ ಗೋರಕ್ಷಣೆಯ ರಾಜಕಾರಣ ಹಿನ್ನೆಲೆಯಲ್ಲಿ ಈ 'ದೇವರ ಹೆಣ' ಕಥೆಯ ಒಳನೋಟ ಇನ್ನಷ್ಟು...

“ಗ್ರಾಮೀಣ ಪ್ರದೇಶಗಳಲ್ಲಿ ಕಲೆ, ಕ್ರೀಡೆ, ಕಬಡ್ಡಿ, ಕ್ರಿಕೆಟ್, ರಂಗೋಲಿ ಸೇರಿದಂತೆ ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಿಗೆ ಸರ್ಕಾರ ಉತ್ತೇಜನ ನೀಡುತ್ತಿದೆ. ಪ್ರತಿ ಗ್ರಾಮ ಪಂಚಾಯಿತಿಗೆ ಒಂದರಂತೆ ಹಾಗೂ ನಗರ ಪ್ರದೇಶಗಳಲ್ಲಿ ವಾರ್ಡ್‌ವಾರು ಯುವಕ-ಯುವತಿಯರ ‘ಭಾರತ್ ಜೋಡೋ ಸಂಘ’ಗಳನ್ನು ರಚಿಸಲು ಉದ್ದೇಶಿಸಲಾಗಿದೆ. ಪ್ರತಿ ಸಂಘಟನೆಗೆ ಸರ್ಕಾರದಿಂದ ತಲಾ ₹10 ಲಕ್ಷ ಅನುದಾನ ನೀಡಲಾಗುವುದು. 16ರಿಂದ 35 ವರ್ಷದ ಯುವಕ-ಯುವತಿಯರು ಸಂಘಗಳ ಸದಸ್ಯರಾಗಿ ನೋಂದಾಯಿಸಿಕೊಂಡು ಸ್ಥಳೀಯವಾಗಿ ಸೃಜನಶೀಲ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು” ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್. ನಂದಿನಿ ಮಾತನಾಡಿ, “ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ.65ಕ್ಕೂ ಹೆಚ್ಚು ಯುವಜನರಿದ್ದು, ಇದು ರಾಷ್ಟ್ರದ ಅಭಿವೃದ್ಧಿಗೆ ದೊರೆತಿರುವ ಮಹತ್ವದ ಜನಸಂಖ್ಯಾ ಲಾಭಾಂಶವಾಗಿದೆ. ಯುವಜನರ ಪ್ರತಿಭೆ, ಶಕ್ತಿ ಮತ್ತು ಸಾಮರ್ಥ್ಯವನ್ನು ಸಮರ್ಥ ಮಾನವ ಸಂಪನ್ಮೂಲವಾಗಿ ಪರಿವರ್ತಿಸಿ ರಾಷ್ಟ್ರ ನಿರ್ಮಾಣಕ್ಕೆ ಬಳಸಿಕೊಂಡಾಗ ಮಾತ್ರ ದೇಶದ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಲು ಸಾಧ್ಯ” ಎಂದರು.

ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ಮಾತನಾಡಿ, “ಗ್ರಾಮೀಣ ಪ್ರದೇಶಗಳಲ್ಲಿ ಕಲೆ ಮತ್ತು ವಿವಿಧ ಕೌಶಲಗಳಲ್ಲಿ ಪರಿಣತಿ ಹೊಂದಿರುವ ನೂರಾರು ಯುವ ಪ್ರತಿಭೆಗಳಿದ್ದಾರೆ. ಆದರೆ, ಅವರ ಪ್ರತಿಭೆಯನ್ನು ಹೊರಜಗತ್ತಿಗೆ ಪರಿಚಯಿಸಲು ಸೂಕ್ತ ವೇದಿಕೆಗಳ ಕೊರತೆಯಿದೆ. ಯುವಜನೋತ್ಸವದಂತಹ ಕಾರ್ಯಕ್ರಮಗಳು ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಉತ್ತಮ ಅವಕಾಶ ಕಲ್ಪಿಸುತ್ತವೆ” ಎಂದರು.

ಹಿಂದೆ ಗ್ರಾಮೀಣ ಪ್ರದೇಶಗಳಲ್ಲಿ ಯುವಕ ಸಂಘಗಳು ಹಾಗೂ ಯುವತಿ ಮಂಡಳಿಗಳ ಮೂಲಕ ತಾಲೂಕು, ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರಮಟ್ಟದ ಯುವಜನ ಮೇಳಗಳನ್ನು ಆಯೋಜಿಸಲಾಗುತ್ತಿತ್ತು. ಹಳ್ಳಿಹಳ್ಳಿಗಳಲ್ಲಿ ಯುವಕ-ಯುವತಿಯರು ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದರು. ಪ್ರಸ್ತುತ ಯುವಜನೋತ್ಸವಗಳಲ್ಲಿ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆ ಹೆಚ್ಚಾಗಿದ್ದು, ಗ್ರಾಮೀಣ ಯುವಕ ಸಂಘಟನೆಗಳ ಸದಸ್ಯರಿಗೂ ಹೆಚ್ಚಿನ ಅವಕಾಶ ಕಲ್ಪಿಸಬೇಕು ಎಂದು ಅಭಿಪ್ರಾಯಪಟ್ಟರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪ್ರಸನ್ನಕುಮಾರ್ ಮಾತನಾಡಿ, “ದೃಢಸಂಕಲ್ಪ ಹೊಂದಿರುವ ನೂರು ಯುವಕರನ್ನು ನೀಡಿದರೆ ದೇಶದ ಚಿತ್ರಣವನ್ನೇ ಬದಲಾಯಿಸುತ್ತೇನೆ ಎಂಬ ಸ್ವಾಮಿ ವಿವೇಕಾನಂದರ ಆಶಯ ಯುವಜನರ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ. ಯುವಜನರನ್ನು ಜಾಗೃತಗೊಳಿಸಿ ಸಂಘಟಿಸುವಲ್ಲಿ ಯುವಜನೋತ್ಸವಗಳು ಮಹತ್ವದ ಪಾತ್ರ ವಹಿಸುತ್ತವೆ. ಸೂಕ್ತ ಮಾರ್ಗದರ್ಶನ ಮತ್ತು ಸೃಜನಾತ್ಮಕ ಕಾರ್ಯಗಳಿಗೆ ಅವಕಾಶ ಕಲ್ಪಿಸಿದರೆ ಯುವಜನರು ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಬಹುದು” ಎಂದರು.

ಇದೇ ಸಂದರ್ಭದಲ್ಲಿ ಕಳೆದ ಸಾಲಿನಲ್ಲಿ ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಪ್ರಶಸ್ತಿ ಗಳಿಸಿದ ಮಂಡ್ಯ ಜಿಲ್ಲೆಯ ತಂಡವನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಮನುಜಶ್ರೀ ವೈ.ಸಿ., ಮೈ ಭಾರತ್ ಜಿಲ್ಲಾ ಯುವ ಅಧಿಕಾರಿ ಶೃತಿ ಎಸ್. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಯುವಕ-ಯುವತಿಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಸಚಿವ ಯತೀಂದ್ರ ಸಿದ್ದರಾಮಯ್ಯ ರಾಜಮನೆತನಕ್ಕೆ ಅವಹೇಳನಕಾರಿ ಹೇಳಿಕೆ; ಅರಸು ಸಂಘ ಖಂಡನೆ 

ಮೈಸೂರಿನ ಉಸ್ತುವಾರಿ ಸಚಿವರಾದ ಶ್ರೀ ಯತೀಂದ್ರ ಸಿದ್ದರಾಮಯ್ಯ ನವರು ಮೈಸೂರಿನ ರಾಜಮನೆತನದ...

ನಾಲ್ಕು ವರ್ಷವಾದರೂ ಪೂರ್ಣಗೊಳ್ಳದ ಸ್ಲಂ ಬೋರ್ಡ್ ಮನೆಗಳು; ತಾಳಿಕೋಟೆಯಲ್ಲಿ ಮೌನ ಧರಣಿ

ವಿಜಯಪುರ ಜಿಲ್ಲೆ ತಾಳಿಕೋಟೆ ಪಟ್ಟಣದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ (ಸ್ಲಂ ಬೋರ್ಡ್)...

ಹಾವೇರಿ | ನಾಳೆ ಬೇಡ್ತಿ-ವರದಾ ನದಿ ಜೋಡಣೆ ಕುರಿತು ಸಭೆ

ಬೇಡ್ತಿ-ವರದಾ ನದಿ ಜೋಡಣೆ ಕುರಿತು ಹಾವೇರಿ ನಗರದ ಹುಕ್ಕೇರಿಮಠದಲ್ಲಿ ನ.4ರಂದು ಸಂಜೆ...

ಹಸಿವು, ಹಕ್ಕು ಮತ್ತು ‘ದೇವರ ಹೆಣ’

ಹಸಿದವನಿಗೆ ಮಾಂಸವನ್ನು ನಿರಾಕರಿಸುವುದು ಕೇವಲ ದ್ವೇಷವಲ್ಲ, ಅದು ತನ್ನ ಜಾತಿಯ ಪಾವಿತ್ರ್ಯವನ್ನು...