ಕೆಆರ್‌ಎಸ್‌ ಜಲಾಶಯದ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ: ಹೈಕೋರ್ಟ್‌

Date:

ಮಂಡ್ಯ ಜಿಲ್ಲೆಯ ಕೆಆರ್‌ಎಸ್‌ ಜಲಾಶಯದ 20 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಗಣಿಗಾರಿಕೆಗಳನ್ನು ನಡೆಸಬಾರದು ಎಂದು ಕರ್ನಾಟಕ ಹೈಕೋರ್ಟ್‌ ಮಧ್ಯಂತರ ಆದೇಶ ಹೊರಡಿಸಿದೆ. ಸ್ಫೋಟಕಗಳ ಬಳಕೆಯಿಂದಾಗಿ ಜಲಾಶಯಕ್ಕೆ ಅಪಾಯವಿದೆ ಎಂಬುದರ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದೆ.

- Advertisement -

2023ರ ಮೇನಲ್ಲಿ ಮಂಡ್ಯ ಜಿಲ್ಲಾಧಿಕಾರಿ ವಿಧಿಸಿದ್ದ ನಿರ್ಬಂಧಗಳನ್ನು ಪ್ರಶ್ನಿಸಿ ಪಾಂಡವಪುರ ತಾಲೂಕಿನ ಚಿನಕುರುಳಿಯ ಭೂಮಾಲೀಕ ಸಿ.ಜಿ ಕುಮಾರ್ ಎಂಬವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಲೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌ ದೀಕ್ಷಿತ್ ಅವರಿದ್ದ ವಿಭಾಗದ ಪೀಠವು ವಿಚಾರಣೆ ನಡೆಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನ್ಯಾಯಾಂಗದ ಘನತೆ, ನ್ಯಾಯಾಧೀಶರ ನಿಷ್ಪಕ್ಷಪಾತತೆ ಹಾಗೂ ಜನಸಾಮಾನ್ಯರಿಗೆ ನ್ಯಾಯಾಂಗದ ಮೇಲಿರುವ ವಿಶ್ವಾಸದ ಕುರಿತು ಮಹತ್ವದ ಚರ್ಚೆಗೆ...

“ಗಣಿಗಾರಿಕೆಗೆ ಪರವಾನಗಿ ಹೊಂದಿರುವ ಹಾಗೂ ಪರವಾನಗಿ ಪಡೆದು ಕಾರ್ಯನಿರ್ವಹಿಸುತ್ತಿರುವ ಗಣಿಗಾರಿಕೆಗಳಿಗೂ ಈ ನಿಷೇಧ ಅನ್ವಯಿಸುತ್ತದೆ. ಈ ಹಿಂದೆ, ಅಣೆಕಟ್ಟು ಸುರಕ್ಷತಾ ಕಾಯ್ದೆ-2021ರ ಅಡಿಯಲ್ಲಿ ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ನ್ಯಾಯಾಲಯದ ಗಮನಕ್ಕೆ ತರದಿದ್ದ ಕಾರಣ, 20 ಕಿ.ಮೀ ವ್ಯಾಪ್ತಿಯೊಳಗೆ ಗಣಿಗಾರಿಕೆಗೆ ಅನುಮತಿ ನೀಡಲಾಗಿತ್ತು. ಆದರೆ, ಇನ್ನುಮುಂದೆ ಯಾವುದೇ ಗಣಿಕಾರಿಕೆ ನಡೆಯಬಾರದು” ಎಂದು ಕೋರ್ಟ್‌ ಹೇಳಿದೆ.

ಜಲಾಶಯದ ಮಹತ್ವನ್ನು ಒತ್ತಿ ಹೇಳಿರುವ ಹೈಕೋರ್ಟ್‌, “ಕಾವೇರಿ ನೀರಿಗಾಗಿ ಮೂರು ರಾಜ್ಯಗಳು ಹೋರಾಡುತ್ತವೆ. ಆದರೆ, ಯಾರೂ ಅಣೆಕಟ್ಟನ್ನು ರಕ್ಷಿಸುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದೆ.

“ಜಲಾಶಯವು ಪರಂಪರೆ ಮತ್ತು ಐತಿಹಾಸಿಕ ಮೌಲ್ಯಗಳನ್ನು ಹೊಂದಿದೆ. ಮೈಸೂರಿನ ಹಿಂದಿನ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ದೂರದೃಷ್ಟಿಯಿಂದ ಅಣೆಕಟ್ಟು ನಿರ್ಮಿಸಿದ್ದಾರೆ. ಈ ಅಣೆಕಟ್ಟನ್ನು ಗಣಿಗಾರಿಕೆ ಚಟುವಟಿಕೆಗಳಿಂದ ರಕ್ಷಿಸುವುದು ಸೂಕ್ತವೆಂದು ನಾವು ಭಾವಿಸುತ್ತೇವೆ. ಮುಂದಿನ ಆದೇಶಗಳವರೆಗೆ, ಜಲಾಶಯದ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ಚಟುವಟಿಕೆ ನಡೆಸುವಂತಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಈ ಸುದ್ದಿ ಓದಿದ್ದೀರಾ?: ಬಿಲ್ಕಿಸ್‌ ಬಾನೊ ಅರ್ಜಿ ಎತ್ತಿ ಹಿಡಿದು ಮಹತ್ವದ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್

“ಅಣೆಕಟ್ಟು ಸುರಕ್ಷತಾ ಕಾಯ್ದೆಯ ಪ್ರಕಾರ, ತಜ್ಞರು ನಿರ್ಧಾರ ತೆಗೆದುಕೊಳ್ಳುವವರೆಗೂ ಜಲಾಶಯದ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸಬಾರದು” ಎಂದು ನಿರ್ಬಂಧ ಹೇರಿ ಮಂಡ್ಯ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು.

ತಜ್ಞರು ಪ್ರಾಯೋಗಿಕ ಸ್ಫೋಟಗಳನ್ನು ನಡೆಸಿ, ವರದಿ ತಯಾರಿಸಲು ಪ್ರಯತ್ನಿಸುತ್ತಿದ್ದಾರೆ. ಅಣೆಕಟ್ಟಿನ ಮೇಲೆ ಗಣಿಗಾರಿಕೆಯ ಪ್ರಭಾವವನ್ನು ನಿರ್ಣಯಿಸಲು ಪ್ರಾಯೋಗಿಕ ಸ್ಫೋಟಗಳನ್ನು ನಡೆಸಲು ಸೂಕ್ತ ಪರಿಸ್ಥಿತಿಗಾಗಿ ಅವರು ಕಾಯುತ್ತಿದ್ದಾರೆ ಎಂದು ತಿಳಿದುಬಂದಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಮಟಾ, ಗೋಕರ್ಣ ಹಾಗೂ ಹೊನ್ನಾವರ ಭಾಗಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಹೆಸ್ಕಾಂ ವತಿಯಿಂದ ವಿವಿಧ ವಿದ್ಯುತ್ ಮಾರ್ಗಗಳಲ್ಲಿ ನಿರ್ವಹಣೆ ಹಾಗೂ ತುರ್ತು ಕಾಮಗಾರಿ...

ಹಾಸನ | ಬಿಜೆಪಿ ಮುಖಂಡ ಮಹಿಳೆ ವಂಚನೆ ಆರೋಪ; ಪ್ರಕರಣ ದಾಖಲು 

ಆಲೂರು ತಾಲೂಕಿನಲ್ಲಿ ಬಿಜೆಪಿ ಮುಖಂಡ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ವಂಚನೆ ಆರೋಪದಡಿ...

ಹಾಸನ | ಮದನಗೌಡರಿಗೆ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಹ್ವಾನ; ಅನಂತಪುರಿ ಕನ್ನಡ ಉತ್ಸವ 2026

ಕೇರಳದ ರಾಜಧಾನಿ ತಿರುವನಂತಪುರದಲ್ಲಿ ಡಿಸೆಂಬರ್ 3, 2026ರಂದು ನಡೆಯಲಿರುವ ಅನಂತಪುರಿ ಕನ್ನಡ...

ಚಿಕ್ಕಮಗಳೂರು | 56 ಕಾಡಾನೆಗಳ ಸ್ಥಳಾಂತರ ಕೈ ಬಿಡಬೇಕು; ಶಾಸಕ ಟಿ. ಡಿ ರಾಜೇಗೌಡ 

ಕಾಫಿನಾಡಿನಲ್ಲಿ ಭದ್ರಾ ಅಭಯಾರಣ್ಯಕ್ಕೆ ಬೇರೆಡೆಯಿಂದ 56 ಕಾಡಾನೆಗಳನ್ನು ಸ್ಥಳಾಂತರಿಸುವ ಪ್ರಸ್ತಾವನೆಯನ್ನು ಕೈಬಿಡುವಂತೆ...