ಮಂಡ್ಯ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಪರಿಶೀಲನೆ ನಡೆಸಿದರು.
ಮಂಡ್ಯ ವಿವಿ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳು, ಕೋರ್ಸ್‌ಗಳು, ವಿದ್ಯಾರ್ಥಿಗಳ ಸಂಖ್ಯೆ, ಬೋಧಕ ಹಾಗೂ ಲಿಪಿಕ ವರ್ಗದ ಸಿಬ್ಬಂದಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಕುಲಪತಿ ಡಾ. ಪುಟ್ಟರಾಜು ಅವರು ವಿಶ್ವವಿದ್ಯಾಲಯದ ಕೌನ್ಸಿಲ್ ಸದಸ್ಯರ ನೇಮಕದ ಬಗ್ಗೆ ಸಚಿವರಿಗೆ ವಿವರಿಸಿದರು. ಬಳಿಕ “ಮಂಡ್ಯ ವಿಶ್ವವಿದ್ಯಾಲಯದ ವ್ಯಾಪ್ತಿಗೆ 47 ಕಾಲೇಜುಗಳು ಬರಲಿದ್ದು, ಒಟ್ಟು 20,748 ವಿದ್ಯಾರ್ಥಿಗಳು ವಿದ್ಯಾಭ್ಯಾಸ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಎಂಬಿಎ, ಎಂಸಿಎ ಸೇರಿದಂತೆ ಇನ್ನಿತರ ಕೋರ್ಸ್‌ಗಳನ್ನು ಪ್ರಾರಂಭಿಸಲು ಚಿಂತಿಸಲಾಗುತ್ತಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ಮಂಡ್ಯ | ಅಮೃತ ನಗರೋತ್ಥಾನ ಯೋಜನೆ; ಕಾಮಗಾರಿ ಪರಿಶೀಲನಾ ಸಭೆ
ಸಭೆಯಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕರುಗಳಾದ ಪಿ. ರವಿಕುಮಾರ್, ಎ ಬಿ ರಮೇಶ್ ಬಂಡಿಸಿದ್ದೇಗೌಡ ಹಾಗೂ ವಿಧಾನ ಪರಿಷತ್ ಸದಸ್ಯರುಗಳಾದ ಮರಿತಿಬ್ಬೇಗೌಡ, ದಿನೇಶ್ ಗೂಳಿಗೌಡ, ಮಧು ಜಿ ಮಾದೇಗೌಡ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಸಿಇೊ ಶೇಕ್ ತನ್ವೀರ್ ಆಸಿಫ್, ಸಿಂಡಿಕೇಟ್ ಸದಸ್ಯರುಗಳಾದ ಶರಣಬಸಪ್ಪ ಯತ್ನಳ್ಳಿ ಮತ್ತು ನಾಗರಾಜು ಎಂ ಮತ್ತು ಮಂಡ್ಯ ವಿಶ್ವ ವಿದ್ಯಾಲಯದ ಕುಲ ಸಚಿವ ಡಾ.ರಂಗರಾಜು ಎಚ್.ಜಿ ಇದ್ದರು.