ಮಂಡ್ಯ ವಿವಿ ಅಭಿವೃದ್ಧಿ ಕಾರ್ಯಗಳ ಕುರಿತು ಸಚಿವರಿಂದ ಪರಿಶೀಲನೆ

Date:

ಮಂಡ್ಯ ವಿಶ್ವವಿದ್ಯಾಲಯದಲ್ಲಿ‌ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಪರಿಶೀಲನೆ ನಡೆಸಿದರು.

ಮಂಡ್ಯ ವಿವಿ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳು, ಕೋರ್ಸ್‌ಗಳು, ವಿದ್ಯಾರ್ಥಿಗಳ ಸಂಖ್ಯೆ, ಬೋಧಕ ಹಾಗೂ ಲಿಪಿಕ ವರ್ಗದ ಸಿಬ್ಬಂದಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಕುಲಪತಿ ಡಾ. ಪುಟ್ಟರಾಜು ಅವರು ವಿಶ್ವವಿದ್ಯಾಲಯದ ಕೌನ್ಸಿಲ್‌ ಸದಸ್ಯರ ನೇಮಕದ ಬಗ್ಗೆ ಸಚಿವರಿಗೆ ವಿವರಿಸಿದರು. ಬಳಿಕ “ಮಂಡ್ಯ ವಿಶ್ವವಿದ್ಯಾಲಯದ ವ್ಯಾಪ್ತಿಗೆ 47 ಕಾಲೇಜುಗಳು ಬರಲಿದ್ದು, ಒಟ್ಟು 20,748 ವಿದ್ಯಾರ್ಥಿಗಳು ವಿದ್ಯಾಭ್ಯಾಸ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಎಂಬಿಎ, ಎಂಸಿಎ ಸೇರಿದಂತೆ ಇನ್ನಿತರ ಕೋರ್ಸ್‌ಗಳನ್ನು ಪ್ರಾರಂಭಿಸಲು ಚಿಂತಿಸಲಾಗುತ್ತಿದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಅಮೃತ ನಗರೋತ್ಥಾನ ಯೋಜನೆ; ಕಾಮಗಾರಿ ಪರಿಶೀಲನಾ ಸಭೆ

ಸಭೆಯಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕರುಗಳಾದ ಪಿ. ರವಿಕುಮಾರ್, ಎ ಬಿ ರಮೇಶ್ ಬಂಡಿಸಿದ್ದೇಗೌಡ ಹಾಗೂ ವಿಧಾನ ಪರಿಷತ್ ಸದಸ್ಯರುಗಳಾದ ಮರಿತಿಬ್ಬೇಗೌಡ, ದಿನೇಶ್ ಗೂಳಿಗೌಡ, ಮಧು ಜಿ ಮಾದೇಗೌಡ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಸಿಇೊ ಶೇಕ್ ತನ್ವೀರ್ ಆಸಿಫ್, ಸಿಂಡಿಕೇಟ್ ಸದಸ್ಯರುಗಳಾದ ಶರಣಬಸಪ್ಪ ಯತ್ನಳ್ಳಿ ಮತ್ತು ನಾಗರಾಜು ಎಂ ಮತ್ತು ಮಂಡ್ಯ ವಿಶ್ವ ವಿದ್ಯಾಲಯದ ಕುಲ ಸಚಿವ ಡಾ.ರಂಗರಾಜು ಎಚ್‌.ಜಿ ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಾಂಗ್ರೆಸ್‌ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕಿಳಿದ ನಟ ದರ್ಶನ್

ರಾಜ್ಯದಲ್ಲಿ ಬಿರು ಬಿಸಿಲಿನ ಜತೆಗೆ ಚುನಾವಣೆ ಕಾವು ಜೋರಾಗಿದೆ. ಸದ್ಯ ಮಂಡ್ಯ...

ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಎಚ್‌ಡಿಕೆ ‘ದಾರಿತಪ್ಪಿದ ಮಗ’: ಪ್ರಕಾಶ್ ರಾಜ್

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ...

ಆರೋಪಿಯ ವಿವರಣೆ ಕೇಳದೆ ಗಡಿಪಾರು; ಸರ್ಕಾರದ ಆದೇಶ ರದ್ದು ಮಾಡಿದ ಹೈಕೋರ್ಟ್‌

ಅಪರಾಧ ಚಟುವಟಿಕೆಗಳಲ್ಲಿ ತೊಡಗಿ, ಸಾರ್ವಜನಿಕ ಶಾಂತಿ ಹಾಳು ಮಾಡುತ್ತಿದ್ದ ಆರೋಪದ ಮೇಲೆ...

ಎಚ್‌ಡಿಕೆ ಮಣಿಸಲು ಕಾಂಗ್ರೆಸ್‌ ಪಣ; ಮಂಡ್ಯ ಅಖಾಡಕ್ಕೆ ಸ್ಟಾರ್‌ ಪ್ರಚಾರಕರು

ರಾಜ್ಯದ ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರ ಮತ್ತೆ ರಾಜ್ಯದ ಗಮನ...