ಪಾಳುಬಿದ್ದ ಜಮೀನಿನಲ್ಲಿ ಮಹಿಳೆಯೊಬ್ಬರ ಬೆತ್ತಲೆ ಮೃತದೇಹ ಪತ್ತೆಯಾಗಿದ್ದು, ಆಕೆಯನ್ನು ಅತ್ಯಾಚಾರಗೈದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿಯ ಬೆಂಗಳೂರು-ಮಂಗಳೂರು ಹೆದ್ದಾರಿಯ ಸಮೀಪ ಮೃತದೇಹ ಪತ್ತೆಯಾಗಿದೆ. ಮೃತ ಮಹಿಳೆಯನ್ನು ತಾಲೂಕಿನ ತಿರುಮಲಾಪುರ ಗ್ರಾಮದವರು ಎಂದು ಗುರುತಿಸಲಾಗಿದೆ.
ನಾಲ್ಕು ದಿನಗಳಿಂದ ಮಹಿಳೆ ಕಾಣೆಯಾಗಿದ್ದರು. ಈಗ ಆಕೆಯ ಮೃತದೇಹ ಪತ್ತೆಯಾಗಿದೆ. ಆಕೆಯನ್ನು ಅತ್ಯಾಚಾರಗೈದು ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಸ್ಥಳಕ್ಕೆ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳ್ಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.