ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

Date:

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ, ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಗುರುವಾರ ಮಂಡ್ಯ ಜಿಲ್ಲೆ, ಪಾಂಡವಪುರ ತಾಲ್ಲೂಕಿನ ದೊಡ್ಡಬ್ಯಾಡರಹಳ್ಳಿ ಗ್ರಾಮದ ಬಳಿಯಿರುವ ಚೈತ್ರಾ ಗೋಶಾಲೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

- Advertisement -

ರೈತ ಸಂಘದ ಮಂಡ್ಯ ಜಿಲ್ಲಾಧ್ಯಕ್ಷ ಎ.ಎಲ್. ಕೆಂಪೂಗೌಡ ನೇತೃತ್ವದಲ್ಲಿ ನೂರಾರು ರೈತರು ಗೋಶಾಲೆಯ ಮುಂದೆ ಜಮಾಯಿಸಿ, ರೈತರ ಹಸುಗಳನ್ನು ಕೂಡಲೇ ಬಿಡುಗಡೆಗೊಳಿಸಬೇಕು ಹಾಗೂ ಗೋಶಾಲೆಯ ಆಡಳಿತದ ವಿರುದ್ಧ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಹುಣಸೂರು ತಾಲ್ಲೂಕಿನ ದೊಡ್ಡೆಗೌಡನಕೊಪ್ಪಲು ಗ್ರಾಮದ ರೈತರಾದ ಸಣೇಗೌಡ, ಸ್ವಾಮಿಗೌಡ ಮತ್ತು ದರ್ಶನ್ ಅವರಿಗೆ ಸೇರಿದ ಏಳು ಹಸು-ಕರುಗಳನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ಬಜರಂಗದಳ ಹಾಗೂ ಗೋರಕ್ಷಕರ ಹೆಸರಿನ ತಂಡವೊಂದು ತಡೆದಿತ್ತು ಎಂದು ರೈತರು ಆರೋಪಿಸಿದರು. ಬಳಿಕ ಕೆ.ಆರ್. ಪೇಟೆ ಪೊಲೀಸರು ಹಸುಗಳನ್ನು ವಶಕ್ಕೆ ಪಡೆದು ಚೈತ್ರಾ ಗೋಶಾಲೆಗೆ ಕಳುಹಿಸಿದ್ದರು.

ಈ ಸಂಬಂಧ ರೈತರು ನ್ಯಾಯಾಲಯದ ಮೊರೆ ಹೋಗಿದ್ದು, ಹಸುಗಳನ್ನು ರೈತರಿಗೆ ಹಸ್ತಾಂತರಿಸುವಂತೆ ನ್ಯಾಯಾಲಯ ಆದೇಶ ನೀಡಿತ್ತು. ಆದರೂ ಗೋಶಾಲೆಯ ಮುಖ್ಯಸ್ಥರು ಹಸುಗಳನ್ನು ಬಿಡುಗಡೆ ಮಾಡಿಲ್ಲ ಎಂದು ರೈತ ಸಂಘದ ಮುಖಂಡರು ಆರೋಪಿಸಿದರು.

ಪ್ರತಿಭಟನೆಯ ಹಿನ್ನೆಲೆಯಲ್ಲಿ ತಹಶೀಲ್ದಾರ್ ಜಿ. ಆದರ್ಶ, ಪಶು ವೈದ್ಯಕೀಯ ಮತ್ತು ಪಶುಸಂಗೋಪನೆ ಇಲಾಖೆಯ ಉಪ ನಿರ್ದೇಶಕ ಡಾ. ಸಿ. ರಾಮಚಂದ್ರ, ಪೊಲೀಸ್ ಇನ್‌ಸ್ಪೆಕ್ಟರ್‌ಗಳಾದ ಶರತ್ ಕುಮಾರ್, ಮಹೇಶ್ ಮತ್ತು ವಿವೇಕಾನಂದ ಸೇರಿದಂತೆ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದರು. ನಂತರ ಉಪ ವಿಭಾಗಾಧಿಕಾರಿ ಕೆ.ಆರ್. ಶ್ರೀನಿವಾಸ್ ಹಾಗೂ ಡಿವೈಎಸ್‌ಪಿ ಕೃಷ್ಣಕುಮಾರ್ ಅವರು ಗೋಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ರೈತ ಸಂಘದ ಮುಖಂಡರೊಂದಿಗೆ ಸಭೆ ನಡೆಸಿ ಸಮಸ್ಯೆಯ ಕುರಿತು ಮಾಹಿತಿ ಪಡೆದರು.

ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್. ಕೆಂಪೂಗೌಡ ಮಾತನಾಡಿ, “ನ್ಯಾಯಾಲಯದ ಆದೇಶವನ್ನೂ ಕಡೆಗಣಿಸಿ ರೈತರ ಹಸುಗಳನ್ನು ಬಿಡುಗಡೆ ಮಾಡದಿರುವುದು ಸರಿಯಲ್ಲ. ಹಸುಗಳನ್ನು ಕೂಡಲೇ ರೈತರಿಗೆ ಹಸ್ತಾಂತರಿಸಬೇಕು. ಗೋಶಾಲೆಯ ನಿರ್ವಹಣೆ ಹಾಗೂ ಇಲ್ಲಿನ ವ್ಯವಸ್ಥೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದರು.

ಉಪ ವಿಭಾಗಾಧಿಕಾರಿ ಕೆ.ಆರ್. ಶ್ರೀನಿವಾಸ್ ಮಾತನಾಡಿ, ಗೋಶಾಲೆಯನ್ನು ಪರಿಶೀಲಿಸಿದ್ದು, ಅದರ ನಿರ್ವಹಣೆ ಕುರಿತು ತನಿಖೆ ನಡೆಸಲು ಕ್ರಮ ಕೈಗೊಳ್ಳಲಾಗುವುದು. ರೈತರಿಗೆ ಉಂಟಾಗಿರುವ ನಷ್ಟದ ಬಗ್ಗೆಯೂ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಅಧಿಕಾರಿಗಳ ಸಮ್ಮುಖದಲ್ಲಿ ರೈತರಿಗೆ ಸೇರಿದ ಏಳು ಹಸು-ಕರುಗಳನ್ನು ಬಿಡುಗಡೆಗೊಳಿಸಲಾಯಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನೀಡುವ ಮಾಹಿತಿಯ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

ಈ ವಿಶೇಷ ವರದಿ ಓದಿದ್ದೀರಾ? SIR: ‘ನಮ್ಮ ಸಂವಿಧಾನ-ನಮ್ಮ ಹೋರಾಟ-ನಮ್ಮ ಹಕ್ಕು; ನಾವು ಹೋರಾಟಕ್ಕೆ ಸಿದ್ಧ’- ಪ್ರಕಾಶ್ ರಾಜ್

ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡರಾದ ಕೆ.ಟಿ. ಗೋವಿಂದೇಗೌಡ, ಜಗದೀಶ್, ಶಂಭೂಗೌಡ, ಜಯರಾಮೇಗೌಡ, ಅಣ್ಣಯ್ಯ, ಕೃಷ್ಣಗೌಡ, ಹರವು ಪ್ರಕಾಶ್, ಕೆನ್ನಾಳು ನಾಗರಾಜ, ವಿಜಯಕುಮಾರ್, ಮಂಜುನಾಥ್, ಪುಟ್ಟೇಗೌಡ ಹಾಗೂ ರೂಪಾ ಅರಳಕುಪ್ಪೆ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಸಚಿವರಿಗೆ ಮನವಿ

ಮುಂಡಗೋಡ: ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಹಾಗೂ...

ಯಾದಗಿರಿ | ಎಕರೆಗೆ ₹25 ಸಾವಿರ ಬರ ಪರಿಹಾರ, ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ರೈತ ಸಂಘ ಆಗ್ರಹ

ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಪ್ರತಿ ರೈತರ...

ಕುಮಟಾ | ದೇವಿಮನೆ ಘಟ್ಟದಲ್ಲಿ KSRTC ಬಸ್ ಕಂದಕಕ್ಕೆ; 18 ಮಂದಿಗೆ ಗಾಯ

ಕುಮಟಾ: ತಾಲೂಕಿನ ದೇವಿಮನೆ ಘಟ್ಟದ 2ನೇ ತಿರುವಿನ ಬಳಿ ಗುರುವಾರ ರಾತ್ರಿ...

ಯಾದಗಿರಿ | ಸಮರ್ಪಕ ಕೂಲಿ ಪಾವತಿಗೆ ಆಗ್ರಹ: ರಸ್ತಾಪುರ ಗ್ರಾಪಂ ಕಚೇರಿ ಎದುರು ರೈತ ಸಂಘ ಧರಣಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡಿರುವ...