ದೈಹಿಕ–ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಿ: ಪೊಲೀಸ್ ಸಿಬ್ಬಂದಿಗೆ ಜಿಲ್ಲಾಧಿಕಾರಿ ಸಲಹೆ

Date:

ಪೊಲೀಸರು ದೇಶದ ಒಳಗಿನ ಸೈನಿಕರಂತೆ ಕಾರ್ಯನಿರ್ವಹಿಸುವ ಮೂಲಕ ಸಮಾಜದ ರಕ್ಷಣೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಮಹತ್ತರ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಕರ್ತವ್ಯದ ಒತ್ತಡದ ನಡುವೆಯೂ ಪ್ರತಿಯೊಬ್ಬ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಹೇಳಿದರು.

ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಿದ್ದ ವಾರ್ಷಿಕ ಪೊಲೀಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿ, “ಪೊಲೀಸರು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಿದ್ದಾಗ ಮಾತ್ರ ತಮ್ಮ ಕರ್ತವ್ಯಗಳನ್ನು ಸಮರ್ಥವಾಗಿ ನಿರ್ವಹಿಸಲು ಸಾಧ್ಯ. ಕಾನೂನು ಸುವ್ಯವಸ್ಥೆ ಕಾಪಾಡುವುದು, ಅಪರಾಧ ಚಟುವಟಿಕೆಗಳನ್ನು ತಡೆಗಟ್ಟುವುದು ಸೇರಿದಂತೆ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಲು ಉತ್ತಮ ಆರೋಗ್ಯ ಅತ್ಯಗತ್ಯ. ಆರೋಗ್ಯವಂತ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯಿಂದ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ” ಎಂದರು.

“ವೃತ್ತಿ ಬದುಕಿನಲ್ಲಿ ಮಾನಸಿಕ ಒತ್ತಡ ಎದುರಾಗುವುದು ಸಹಜ. ಇಂತಹ ಒತ್ತಡದಿಂದ ಹೊರಬರಲು ಉತ್ತಮ ಹವ್ಯಾಸ, ಸಕಾರಾತ್ಮಕ ಚಿಂತನೆ ಹಾಗೂ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು. ದಿನದ 24 ಗಂಟೆಗಳಲ್ಲಿ ಕನಿಷ್ಠ ಒಂದು ಗಂಟೆಯನ್ನು ಆರೋಗ್ಯಕ್ಕಾಗಿ ಮೀಸಲಿಟ್ಟರೆ ದಿನವಿಡೀ ಉತ್ಸಾಹದಿಂದ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ. ಆಸಕ್ತಿಗೆ ಅನುಗುಣವಾಗಿ ಕ್ರೀಡೆ, ಯೋಗ ಅಥವಾ ವ್ಯಾಯಾಮದಲ್ಲಿ ತೊಡಗಿಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

“ದೇಹ ಮತ್ತು ಮನಸ್ಸು ಒಂದಕ್ಕೊಂದು ಪೂರಕವಾಗಿದ್ದು, ಎರಡರ ಆರೋಗ್ಯಕ್ಕೂ ಸಮಾನ ಆದ್ಯತೆ ನೀಡಬೇಕು. ಕರ್ತವ್ಯದ ಒತ್ತಡದ ನಡುವೆಯೂ ಕುಟುಂಬದ ಸದಸ್ಯರ ಭಾವನೆಗಳಿಗೆ ಸ್ಪಂದಿಸಿ, ಅವರೊಂದಿಗೆ ಗುಣಮಟ್ಟದ ಸಮಯ ಕಳೆಯಬೇಕು. ಜೀವನದಲ್ಲಿ ಕುಟುಂಬದ ಬೆಂಬಲ ಮತ್ತು ಪ್ರೋತ್ಸಾಹ ಮಹತ್ವದ ಪಾತ್ರ ವಹಿಸುತ್ತದೆ” ಎಂದರು.

“ವಾರ್ಷಿಕ ಪೊಲೀಸ್ ಕ್ರೀಡಾಕೂಟವು ಸಿಬ್ಬಂದಿಯಲ್ಲಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಲು ಹಾಗೂ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದೆ. ಕ್ರೀಡೆಯಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವ ಮನೋಭಾವ ಮುಖ್ಯ. ಪ್ರತಿಯೊಬ್ಬರೂ ತಮ್ಮ ಆಸಕ್ತಿಯ ಕ್ರೀಡೆ, ಕಲಾ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳಬೇಕು. ಪೊಲೀಸ್ ಸಿಬ್ಬಂದಿಯ ಕುಟುಂಬದ ಸದಸ್ಯರೂ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವುದು” ವಿಶೇಷ ಎಂದರು.

ದ್ವಿತೀಯ ದಕ್ಷಿಣ ಏಷ್ಯಾ ಚಾಂಪಿಯನ್‌ಷಿಪ್‌ನಲ್ಲಿ ಭಾಗವಹಿಸಿ ಚಾಂಪಿಯನ್ ಆಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿರುವ ಕುಮಾರಿ ಗಾನವಿ ನಂದೀಶ್ ಅವರನ್ನು ಅಭಿನಂದಿಸಿದ ಜಿಲ್ಲಾಧಿಕಾರಿಗಳು, “ಇಂತಹ ಸಾಧಕ ಕ್ರೀಡಾಪಟುಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಅಗತ್ಯ. ಈ ಹಿನ್ನೆಲೆಯಲ್ಲಿ ಅವರನ್ನು ವಾರ್ಷಿಕ ಪೊಲೀಸ್ ಕ್ರೀಡಾಕೂಟಕ್ಕೆ ಆಹ್ವಾನಿಸಿರುವುದು ಸಂತಸದ ಸಂಗತಿ” ಎಂದರು.

- Advertisement -

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ, ದ್ವಿತೀಯ ದಕ್ಷಿಣ ಏಷ್ಯಾ ಚಾಂಪಿಯನ್ ಕುಮಾರಿ ಗಾನವಿ ನಂದೀಶ್ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನ.28, 29ರಂದು ಮಂಗಳೂರಿನಲ್ಲಿ ‘ಜನನುಡಿ’: ಪೋಸ್ಟರ್ ಬಿಡುಗಡೆ

ಯುವಜನರ ರಾಜಕಾರಣದ ದಿಕ್ಕು, ಭವಿಷ್ಯ ಮತ್ತು ಸವಾಲುಗಳನ್ನು ಪ್ರಧಾನ ಆಶಯವಾಗಿಟ್ಟುಕೊಂಡು ನ.28...

ಧಾರವಾಡ | ಜಾಮೀನು ರದ್ದತಿ ನ್ಯಾಯದ ಹೋರಾಟಕ್ಕೆ ಸಿಕ್ಕ ಜಯ: ಬಸವರಾಜ ಕೊರವರ

ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿರುವುದು...

ಹುಬ್ಬಳ್ಳಿ |ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ದೋಷಿ ಗಿರೀಶ್‌ಗೆ ಜೀವಾವಧಿ ಶಿಕ್ಷೆ

ಹುಬ್ಬಳ್ಳಿಯಲ್ಲಿ ನಡೆದಿದ್ದ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ದೋಷಿ ಗಿರೀಶ್‌ಗೆ ಜೀವಾವಧಿ...

ದೆಹಲಿ ಪ್ರತಿಭಟನೆ ವೇಳೆ ಹಲವರ ಬಂಧನ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟಿಸ್; 10 ದಿನಗಳಲ್ಲಿ ಸಮಗ್ರ ಉತ್ತರಕ್ಕೆ ಸೂಚನೆ

ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...