ಮಂಡ್ಯ | ಕನ್ನಡ ಶಾಲೆ ಉಳಿಸುವ ಸಂಕಲ್ಪ ಮಾಡಿ: ಬರಗೂರು ರಾಮಚಂದ್ರಪ್ಪ

Date:

ಕನ್ನಡ ಶಾಲೆಗಳು ತಾವಾಗಿಯೇ ಮುಚ್ಚಿದರೆ ಅದು ಆತ್ಮಹತ್ಯೆ; ಸರ್ಕಾರವೇ ಮುಚ್ಚಿದರೆ ಹತ್ಯೆಯಾಗುತ್ತದೆ. ಇವೆರಡನ್ನೂ ಮೀರಿ ಕನ್ನಡ ಶಾಲೆಗಳನ್ನು ಉಳಿಸುವ ಸಂಕಲ್ಪ ಮಾಡಬೇಕು ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ  ಹೇಳಿದರು.

- Advertisement -

ಮಂಡ್ಯ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಕನ್ನಡ ಸೇನೆ ಕರ್ನಾಟಕ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಗುರುವಾರ ನಡೆದ ಕನ್ನಡ ಜಾಗೃತಿ ಸಮಾವೇಶ, ಕನ್ನಡ ರಾಜ್ಯೋತ್ಸವ ಹಾಸ್ಯ ಹಾಗೂ ಮಿಮಿಕ್ರಿ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

“ಕನ್ನಡ ಶಾಲೆಗಳು ಉಳಿದರೆ ಭಾಷೆಯ ಜೊತೆಗೆ ಕನ್ನಡ ಸಿನಿಮಾ, ಪತ್ರಿಕೆ ಮತ್ತು ಪುಸ್ತಕಗಳು ಉಳಿಯುತ್ತವೆ. ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಮಾತ್ರವಲ್ಲದೆ ಸ್ವಾತಂತ್ರ್ಯೋತ್ಸವ, ಅಂಬೇಡ್ಕರ್ ಮತ್ತು ಗಾಂಧಿ ಜಯಂತಿ ಸೇರಿದಂತೆ ನಾಡು ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆಯೂ ನಡೆಯುತ್ತದೆ. ಶಾಲೆ ಉಳಿಸುವುದು ಎಂದರೆ ಭಾಷೆಯ ಜೊತೆಗೆ ಸೌಹಾರ್ದತೆ ಮತ್ತು ವಿವೇಕದ ಪರಂಪರೆಯನ್ನು ಉಳಿಸಿದಂತೆ ಎಂದರು. ಕನ್ನಡ ಭಾಷೆಗೆ ಜಾತ್ಯತೀತ ಆಶಯವಿದೆ. ಕಿಟೆಲ್, ನಿಸಾರ್ ಅಹಮದ್, ಭಾನು ಮುಷ್ತಾಕ್, ಶಿಶುನಾಳ ಶರೀಫ ಸೇರಿದಂತೆ ವಿವಿಧ ಧರ್ಮಗಳವರು ಕನ್ನಡ ಕಟ್ಟುವ ಕೆಲಸ ಮಾಡಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ಪ.ಬಂಗಾಳ- SIR ಮೇಲ್ಮನವಿ | 19 ನ್ಯಾಯಾಧಿಕರಣಗಳ ದುರ್ಗತಿ-...

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ (ಎಸ್‌ಐಆರ್‌) ಮೇಲ್ಮನವಿಗಳ ಇತ್ಯರ್ಥಕ್ಕೆ ಸ್ಥಾಪಿಸಲಾದ 19 ನ್ಯಾಯಾಧಿಕರಣಗಳು ಸಾಲುಸಾಲು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿವೆ. ಕಾರ್ಯಭಾರ, ಕೆಂಪುಪಟ್ಟಿ ಆಡಳಿತದಿಂದ ನಿವೃತ್ತ ನ್ಯಾಯಮೂರ್ತಿಗಳ ರಾಜೀನಾಮೆ, ಸಿಬ್ಬಂದಿಯ ವೇತನ ವಿಳಂಬದ...

ಕೃಷಿಮೇಳ | ‘ಪ್ರಕೃತಿ ಕೊಡಾದೆಲ್ಲ ಒಳ್ಳೀದೆ ಇರ್ತೈತಿ, ಮನ್ಷಾನೇ...

"ಪ್ರಕೃತಿ ಮನುಷ್ಯನಿಗೆ ಕೊಡುವುದೆಲ್ಲವೂ ಒಳ್ಳೆಯದೇ ಇರುತ್ತದೆ, ಆದರೆ ಮನುಷ್ಯ ಪ್ರಕೃತಿಯನ್ನು ಮರೆತು ಏನೇನೋ ಹುಡುಕಿಕೊಂಡು ಹೊರಟಿದ್ದಾನೆ" ಇದು ತಲೆಮಾರುಗಳಿಂದ ಕಂಬಳಿ ನೇಯ್ದು ಬದುಕು ಕಟ್ಟಿಕೊಂಡಿರುವ ಕಂಬಳಿ ನೇಕಾರರ ಮನದಾಳ. ಅಜ್ಜ-ಮುತ್ತಜ್ಜರ ಕಾಲದಿಂದಲೂ ನಡೆದುಕೊಂಡು...

“ಕನ್ನಡ ಉಳಿಸುವುದು ಎಂದರೆ ಸಂವಿಧಾನಾತ್ಮಕ ಸೌಹಾರ್ದತೆಯನ್ನು ಉಳಿಸುವುದು. ಕನ್ನಡಿಗರಿಗೆ ಶಿಕ್ಷಣ ಮತ್ತು ಉದ್ಯೋಗ ಕಲ್ಪಿಸಿದರೆ ಅವರ ಬದುಕು ಹಸನಾಗುವುದರ ಜೊತೆಗೆ ಭಾಷೆಯೂ ಬೆಳೆಯುತ್ತದೆ ಎಂದು ಪ್ರತಿಪಾದಿಸಿದರು.
ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಮಾತನಾಡಿ, ‘ಭಾಷೆಯಲ್ಲಿ ಜಾತಿ ಬೆರೆಸಬಾರದು. ಬೆಂಗಳೂರಿನಲ್ಲಿ ಕನ್ನಡ ಕಣ್ಣು ತೆರೆಯಿಸುವ ಕೆಲಸ ಮತ್ತು ಕನ್ನಡ ಜಾಗೃತಿ ಮೂಡಿಸುವ ಕೆಲಸವನ್ನು ಬರಗೂರು ನೇತೃತ್ವದಲ್ಲಿ ಮಾಡೋಣ” ಎಂದರು.

ಶಾಸಕ ಪಿ. ರವಿಕುಮಾರ್ ಮಾತನಾಡಿ, “ಮೇಕೆದಾಟು ಯೋಜನೆಗೆ ಮುಂದಿನ ಜೂನ್‌ನಲ್ಲಿ ನಮ್ಮ ಸರ್ಕಾರ ಭೂಮಿಪೂಜೆ ಮಾಡುತ್ತಿದೆ. ಇದಕ್ಕೆ ಡಿಪಿಆರ್ ಸಿದ್ಧವಾಗಿದೆ. ಡಿಸೆಂಬರ್‌ನಲ್ಲಿ ಜಯದೇವ ಆಸ್ಪತ್ರೆ ಮತ್ತು ಕ್ಯಾನ್ಸರ್ ಆಸ್ಪತ್ರೆ ಒಂದೇ ದಿನ ಉದ್ಘಾಟನೆ ಆಗುತ್ತಿರುವುದು ಮಂಡ್ಯ ಜನರಿಗೆ ಸಂತಸದ ವಿಚಾರ” ಎಂದರು.

ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಕೆ.ಆರ್. ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸಮಾವೇಶದಲ್ಲಿ ಕನ್ನಡ ರತ್ನ ಪ್ರಶಸ್ತಿಯನ್ನು ಸಿ.ಕೆ. ಗಿರೀಶ್‌ಗೌಡ, ಕೆಕ್ಕೇರಿ ಕೃಷ್ಣಮೂರ್ತಿ, ಶುಭಶ್ರೀ ಪ್ರಸಾದ್ ಅವರಿಗೆ ಮಾಡಲಾಯಿತು.

ಕಾರ್ಯಕ್ರಮಕ್ಕೆ ಮುನ್ನ ನಗರದ ಸರ್ ಎಂವಿ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಕನ್ನಡ ಸೇನೆ ಕರ್ನಾಟಕ ಸಂಘಟನೆ ಪದಾಧಿಕಾರಿಗಳು ಹಾಗೂ ಕನ್ನಡಪರ ಚಳುವಳಿಗಾರರು ಜಮಾವನೆಗೊಂಡು ಕಲಾ ತಂಡಗಳೊಂದಿಗೆ ಕನ್ನಡ ಜಾಗೃತಿಗಾಗಿ ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ಮೆರವಣಿಗೆ ನಡೆಸಿ ಕಲಾಮಂದಿರದವರೆಗೂ ಮೆರವಣಿಗೆ ಸಾಗಿತು.

ಸಮಾರಂಭದಲ್ಲಿ ಮಾಜಿ ಶಾಸಕ ಕೆ.ಟಿ. ಶ್ರೀಕಂಠೇಗೌಡ, ಎಚ್.ಡಿ. ಕೋಟೆ ಸೋಮಣ್ಣ, ಕನ್ನಡ ಸೇನೆ ಜಿಲ್ಲಾ ಘಟಕ ಅಧ್ಯಕ್ಷ ಮಂಜುನಾಥ್, ಮಹಿಳಾ ಅಧ್ಯಕ್ಷೆ ಸೌಭಾಗ್ಯ, ಕಮ್ಮನಾಯಕನಹಳ್ಳಿ ಮಂಜುನಾಥ್, ಕುಮಾರ್, ಖ್ಯಾತ ಹಾಸ್ಯ ಕಲಾವಿದ ಮಿಮಿಕ್ರಿ ಗೋಪಿ, ಸಿನಿಮ ನಟ ಕೆ ಆರ್ ಪೇಟೆ ಶಿವರಾಜ್ ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ಬೇಡ್ತಿ–ವರದಾ ಜೋಡಣೆ ಯೋಜನೆ: ಡ್ರೋನ್ ಸರ್ವೆ ಆರಂಭ

ಬೇಡ್ತಿ–ವರದಾ ನದಿ ಜೋಡಣೆ ಯೋಜನೆಯ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವ...

ಹುಮನಾಬಾದ್‌ | ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಾಂಸ್ಕೃತಿಕ ಚಟುವಟಿಕೆ ಅಗತ್ಯ

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪಠ್ಯ ಶಿಕ್ಷಣದಷ್ಟೇ ಸಾಂಸ್ಕೃತಿಕ ಚಟುವಟಿಕೆಗಳೂ ಮಹತ್ವದ್ದಾಗಿವೆ. ಕೇವಲ...

ಮತದಾರರ ಪಟ್ಟಿ ಪರಿಷ್ಕರಣೆಗೆ ರಾಜಕೀಯ ಪಕ್ಷಗಳು ಸಹಕರಿಸಿ: ಜಿಲ್ಲಾಧಿಕಾರಿ ಶ್ರೀರೂಪ

ಚಾಮರಾಜನಗರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ...