ಮತ ಕಳ್ಳತನದ ವಿರುದ್ಧ ಮಂಡ್ಯದಲ್ಲಿ ಸಹಿ ಸಂಗ್ರಹ ಅಭಿಯಾನ

Date:

ದೇಶದಲ್ಲಿ ಬಿಜೆಪಿ ಹಾಗೂ ಚುನಾವಣಾ ಆಯೋಗಗಳು ಶಾಮೀಲಾಗಿ ಮತ ಕಳ್ಳತನದಲ್ಲಿ ತೊಡಗಿವೆ ಎಂದು ಎಐಸಿಸಿ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪದ ನಂತರ ದೇಶಾದ್ಯಂತ ನಡೆಯುತ್ತಿರುವ ಸಹಿ ಸಂಗ್ರಹ ಅಭಿಯಾನಕ್ಕೆ ಮಂಡ್ಯದಲ್ಲೂ ಉತ್ತಮ ಸ್ಪಂದನೆ ಸಿಕ್ಕಿದೆ. ಕಾಂಗ್ರೆಸ್ ಪಕ್ಷವು ಮಂಡ್ಯದಲ್ಲಿ ಶನಿವಾರ ಸಹಿ ಸಂಗ್ರಹ ಅಭಿಯಾನವನ್ನು ನಡೆಸಿತು.

- Advertisement -

ಮಂಡ್ಯ ನಗರದ ಹೊಳಲು ಸರ್ಕಲ್‌ನಲ್ಲಿ ಮಂಡ್ಯ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ‘ವೋಟ್‌ ಚೋರಿ’ ವಿರುದ್ಧ ಹಮ್ಮಿಕೊಂಡಿದ್ದ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ ಡಿ ಗಂಗಾಧರ್, “ಪ್ರಜಾಪ್ರಭುತ್ವ ಹಾಗೂ ಚುನಾವಣಾ ವ್ಯವಸ್ಥೆಯನ್ನು ಬುಡಮೇಲು ಮಾಡಲು ಬಿಜೆಪಿ ಯತ್ನಿಸುತ್ತಿದೆ. ಎಐಸಿಸಿ ಹಾಗೂ ಕೆಪಿಸಿಸಿ ಸೂಚನೆ ಮೇರೆಗೆ ಜಿಲ್ಲೆಯ ಕೆ.ಆರ್.ಪೇಟೆ ನಾಗಮಂಗಲ, ಶ್ರೀರಂಗಪಟ್ಟಣ, ಮಳವಳ್ಳಿ, ಮದ್ದೂರು ಪಾಂಡವಪುರ, ಮಂಡ್ಯ ಸೇರಿದಂತೆ ಜಿಲ್ಲೆಯ ಎಲ್ಲಾ ಭಾಗಗಳಲ್ಲೂ ಕೇಂದ್ರ ಸರ್ಕಾರದ ಮತಗಳ್ಳತನದ ವಿರುದ್ಧ ಸಹಿ ಅಭಿಯಾನ ಹಮ್ಮಿಕೊಂಡಿದ್ದೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

“ಮತಗಳ್ಳತನ ಮಾಡುವ ಮೂಲಕ ಬಿಜೆಪಿ ಅಧಿಕಾರ ಹಿಡಿಯುತ್ತಿದೆ. ಮತದಾರರ ಪಟ್ಟಿಯಲ್ಲಿ ಸುಳ್ಳು ಹೆಸರು ಇರುವುದನ್ನು ಕಾಂಗ್ರೆಸ್‌ ಸಾಕ್ಷ್ಯ ಸಮೇತ ಜನರ ಮುಂದಿಟ್ಟಿದೆ. ಒಬ್ಬ ಮತದಾರ ಹಲವು ಕ್ಷೇತ್ರಗಳಲ್ಲಿ ಮತ ಚಲಾವಣೆ ಮಾಡಿರುವುದು ಪತ್ತೆಯಾಗಿದೆ. ಇದರ ವೀಡಿಯೊ ದಾಖಲೆಗಳನ್ನು ಬಿಡುಗಡೆ ಮಾಡಲು ಚುನಾವಣಾ ಆಯೋಗ ಮೀನಾ-ಮೇಷ ಎಣಿಸುತ್ತಿದೆ” ಎಂದು ತಿಳಿಸಿದರು.

ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕಾಗಿದ್ದ ಆಯೋಗ ಬಿಜೆಪಿಯ ಕೈಗೊಂಬೆಯಾಗಿದೆ. ಹೊರರಾಜ್ಯದ ಮತದಾರರು ಕರ್ನಾಟಕದ ಮತದಾರರ ಪಟ್ಟಿಯಲ್ಲಿದ್ದರೂ ಕಣ್ಮುಚ್ಚಿ ಕುಳಿತಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮುಂದಿಟ್ಟಿರುವ ಪ್ರಶ್ನೆಗಳಿಗೆ ಉತ್ತರ ನೀಡುವುದನ್ನು ಬಿಟ್ಟು ಬಿಜೆಪಿಯ ಮುಖವಾಣಿಯಂತೆ ವರ್ತಿಸುತ್ತಿದೆ” ಎಂದು ಕಿಡಿಕಾರಿದರು.

ಮತಗಳ್ಳತನದ ಹೊಸ ಪಿಡುಗು

ರಾಜ್ಯ ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ ಎಸ್ ಆತ್ಮಾನಂದ ಮಾತನಾಡಿ, “ಮತದಾನ ಬಹಳ ಪಾವಿತ್ರ್ಯವಾದದ್ದು ಇದನ್ನು ಅರಿತುಕೊಳ್ಳಬೇಕು, ಮತಗಳ್ಳತನದ ಹೊಸ ಪಿಡುಗು ನಮ್ಮ ಮಧ್ಯ ಉದ್ಬವವಾಗಿರುವುದು ಆತಂಕಕಾರಿ ಸಂಗತಿ. ಚುನಾವಣಾ ಆಯೋಗ ಹಾಗೂ ಸರ್ಕಾರಕ್ಕೆ ಕಾಂಗ್ರೆಸ್ ಪಕ್ಷದ ವರಿಷ್ಠರ ಅಣತಿ ಮೇರೆಗೆ ನ್ಯಾಯಯುತ ಕಾರ್ಯವನ್ನು ಒದಗಿಸಿಕೊಡಬೇಕು ಎಂದು ಸಹಿ ಸಂಗ್ರಹ ಅಭಿಯಾನ ಮಾಡುತ್ತಿದ್ದೇವೆ. ಸಾರ್ವಜನಿಕರು ಸಹಿ ಸಂಗ್ರಹ ಅಭಿಯಾನಕ್ಕೆ ಸಹಕರಿಸಿ ನಮ್ಮ ಹಕ್ಕನ್ನು ಉಳಿಸಿಕೊಳ್ಳುವ ಕಾರ್ಯದಲ್ಲಿ ಭಾಗಿಯಾಗಬೇಕು” ಎಂದು ತಿಳಿಸಿದರು.

ಸಹಿ ಸಂಗ್ರಹ ಅಭಿಯಾನದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶುಭದಾಯಿನಿ, ಸಣ್ಣ ಕೈಗಾರಿಕೆ ಇಲಾಖೆ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್ ಅಪ್ಪಾಜಿ, ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗ ಕಾಂಗ್ರೆಸ್ ಅಧ್ಯಕ್ಷ ಸಾತನೂರು ಕೃಷ್ಣ, ಜಿಲ್ಲಾ ಕಾಂಗ್ರೆಸ್ ವಕ್ತಾರ ಸಿ.ಎಂ. ದ್ಯಾವಪ್ಪ, ಮುಡಾ ನಿರ್ದೇಶಕ ಅರುಣ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಚಂದಗಾಲು ವಿಜಯಕುಮಾರ್ ಅಭಿಲಾಷ್, ಚಿಕ್ಕಬಳ್ಳಿ ಕೃಷ್ಣ, ಹಳುವಾಡಿ ವೆಂಕಟೇಶ್, ಎನ್. ಸೋಮ ಶೇಖರ್,ರಾಜಣ್ಣ,ಉದಯ್, ಹನ್ಸಿಯಬಾನ್, ಶಕುಂತಲಾ, ವೀಣಾ ಶಂಕರ್ ಸೇರಿದಂತೆ ಇತರರು ಭಾಗವಹಿಸಿದ್ದರು.

WhatsApp Image 2025 10 11 at 3.10.40 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಬದುಕಿದ್ದವರನ್ನೂ ಸತ್ತರೆಂದು ನಕಲಿ ದಾಖಲೆ ಸಲ್ಲಿಸಿದ ಯತ್ನಾಳ್: ಎಫ್‌ಐಆರ್ ದಾಖಲು

ಜೀವಂತವಾಗಿರುವ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆಂದು ಸುಳ್ಳು ಮರಣ ಪ್ರಮಾಣಪತ್ರ ಲಗತ್ತಿಸಿ, ಎಸ್‌ಐಆರ್ ಪ್ರಕ್ರಿಯೆ...

ಹವಾಮಾನ ವರದಿ | ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ

ಮನ್ನಾರ್ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ...

‘ಹಾಫ್ ಹೆಲ್ಮೆಟ್’ ನಿಷೇಧ: ಇನ್ಮುಂದೆ ನಿಯಮ ಮೀರಿದರೆ ಭಾರೀ ದಂಡ; ಸಂಚಾರ ಪೊಲೀಸರ ಬಿಗಿ ಕ್ರಮ

ದ್ವಿಚಕ್ರ ವಾಹನ ಸವಾರರ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ...

ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ ‘ಜನತಾ ನ್ಯಾಯಾಲಯ’ – ಎಸ್‌ಐಆರ್ ಅನ್ಯಾಯಗಳ ವಿರುದ್ಧ ಪ್ರತಿಭಟನೆಯ ಕಹಳೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮಗಳು, ಮುಖ್ಯ ಚುನಾವಣಾ...