ಶ್ರೀರಂಗಪಟ್ಟಣ | ಐತಿಹಾಸಿಕ ರಾಕೆಟ್ ಕೋರ್ಟ್ ಆವರಣದಲ್ಲಿ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Date:

ಶ್ರೀರಂಗಪಟ್ಟಣದ ಮೈಸೂರು ಕೋಟೆ ಬಳಿಯಿರುವ ಐತಿಹಾಸಿಕ ರಾಕೆಟ್ ಕೋರ್ಟ್ ಆವರಣದಲ್ಲಿ ಭಾನುವಾರ ​ಮೈಸೂರಿನ ಶೇಷಾದ್ರಿಪುರಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ‘ನನ್ನ ಭಾರತಕ್ಕಾಗಿ ಯುವಜನತೆ’ ಎಂಬ ಸಂದೇಶದಡಿ ಹಮ್ಮಿಕೊಂಡಿದ್ದ ಬೃಹತ್ ಸ್ವಚ್ಛತಾ ಕಾರ್ಯಕ್ರಮವನ್ನು ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಯಶಸ್ವಿಗೊಳಿಸಿದರು.

- Advertisement -

​ಶಿಬಿರದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸತತ ಎರಡೂವರೆ ತಾಸಿಗೂ ಹೆಚ್ಚು ಕಾಲ ಶ್ರಮದಾನ ಮಾಡುವ ಮೂಲಕ ಕಸ ಮತ್ತು ಪ್ಲಾಸ್ಟಿಕ್‌ನಿಂದ ತುಂಬಿದ್ದ ಐತಿಹಾಸಿಕ ತಾಣವನ್ನು ಸ್ವಚ್ಛಗೊಳಿಸಿದರು.
​
​”ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರು ತಮ್ಮ ಆತ್ಮಕಥನ ‘ದಿ ವಿಂಗ್ಸ್ ಆಫ್ ಫೈರ್’ ಕೃತಿಯಲ್ಲಿ ಟಿಪ್ಪು ಸುಲ್ತಾನ್ ಅವರನ್ನು ‘ವಿಶ್ವದ ಮೊದಲ ರಾಕೆಟ್ ಉಡಾವಣೆಯ ಪಿತಾಮಹ’ ಎಂದು ಬಣ್ಣಿಸಿದ್ದಾರೆ. ಭಾರತವು ಯುದ್ಧಗಳಲ್ಲಿ ರಾಕೆಟ್ ತಂತ್ರಜ್ಞಾನದ ತವರು ಎನ್ನುವುದಕ್ಕೆ ಸಾಕ್ಷಿಯಾಗಿ, ಅಮೆರಿಕದ ನಾಸಾ ಸಂಸ್ಥೆಯಲ್ಲೂ ಶ್ರೀರಂಗಪಟ್ಟಣದ ಯುದ್ಧದಲ್ಲಿ ರಾಕೆಟ್ ಬಳಸುತ್ತಿರುವ ಚಿತ್ರವನ್ನು ಪ್ರದರ್ಶಿಸಲಾಗಿದೆ. ಇಂತಹ ಜಾಗತಿಕ ಹಾಗೂ ಐತಿಹಾಸಿಕ ಮಹತ್ವವಿರುವ ಸ್ಥಳದಲ್ಲಿ ನಮ್ಮ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯ ಕೈಗೊಂಡಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ” ಎಂದು ಎನ್‌ಎಸ್‌ಎಸ್ ಅಧಿಕಾರಿ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಡಾ. ರಾಘವೇಂದ್ರ ಹರ್ಷ ವ್ಯಕ್ತಪಡಿಸಿದರು.
​
ಸಮರ್ಪಣಾ ಟ್ರಸ್ಟ್ ಅಧ್ಯಕ್ಷ ಕೆ ಎಸ್ ಜಯಶಂಕರ್ ಮಾತನಾಡಿ, “ಸಂಬಂಧಪಟ್ಟ ಇಲಾಖೆಗಳ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಇಂತಹ ಅಪರೂಪದ ಸ್ಮಾರಕಗಳ ಸ್ವಚ್ಛತೆಗೆ ವಿದ್ಯಾರ್ಥಿಗಳು ಮುಂದಾಗಿರುವುದು ನಿಜಕ್ಕೂ ಶ್ಲಾಘನೀಯ. ಮುಂದಿನ ತಲೆಮಾರುಗಳಿಗಾಗಿ ಸ್ಮಾರಕಗಳ ಸಂರಕ್ಷಣೆ ಅತ್ಯಗತ್ಯ. ‘ನನ್ನ ಭಾರತಕ್ಕಾಗಿ ಯುವಜನತೆ’ ಅಭಿಯಾನದಡಿ ಇಂತಹ ಕಾರ್ಯಗಳಲ್ಲಿ ಯುವಜನರು ಸಕ್ರಿಯವಾಗಿ ಪಾಲ್ಗೊಳ್ಳಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಇದನ್ನೂ ಓದಿದ್ದೀರಾ? ಮಹಿಳಾ ದಿನದ ವಿಶೇಷ | ಗ್ರಾಮೀಣ ಆರ್ಥಿಕತೆ: ಹೈನುಗಾರಿಕೆಯಲ್ಲಿ ಮಹಿಳಾ ಸಬಲೀಕರಣದ ಕಥೆ

​ಈ ಸ್ವಚ್ಛತಾ ಅಭಿಯಾನದಲ್ಲಿ ಎನ್‌ಎಸ್‌ಎಸ್ ವಿದ್ಯಾರ್ಥಿಗಳಾದ ಮನೋಜ್, ತೇಜಸ್ವಿನಿ ಸೇರಿದಂತೆ ಹಲವರು ಉತ್ಸಾಹದಿಂದ ಪಾಲ್ಗೊಂಡು ಐತಿಹಾಸಿಕ ಸ್ಮಾರಕದ ಉಳಿವಿಗಾಗಿ ತಮ್ಮ ಅಮೂಲ್ಯ ಸಮಯ ಮೀಸಲಿಟ್ಟರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಿ: ರೋಟರಿ ಸಂಸ್ಥೆ ಮನವಿ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ವಿಶ್ವ ಪೋಲಿಯೋ ದಿನದ ಅಂಗವಾಗಿ ರೋಟರಿ ಸಂಸ್ಥೆಯ...

ರಾಜಕೀಯ ಬದಲಾವಣೆಗೆ ಜನಾಭಿಪ್ರಾಯದ ಸಂಘಟನೆ ಅಗತ್ಯ: ಜಾಗೃತ ಕರ್ನಾಟಕದ ರಾಜ್ಯ ಪ್ರವಾಸ ಆರಂಭ

ರಾಜಕೀಯವನ್ನು ದೂರವಿಡುವುದಲ್ಲ, ಜನಪರ ರಾಜಕಾರಣವನ್ನು ರೂಪಿಸುವುದೇ ಗುರಿ; ಸಾಮಾಜಿಕ ನ್ಯಾಯ, ಕೋಮು...

ರೈತರ ಬೆನ್ನಿಗೆ ರಾಜ್ಯ ಸರ್ಕಾರ: ಸಚಿವ ಚಲುವರಾಯಸ್ವಾಮಿ ಭರವಸೆ

ರೈತರ ಸಮಸ್ಯೆಗಳಿಗೆ ಸ್ಪಂದಿಸುವುದರಿಂದ ರಾಜ್ಯ ಸರ್ಕಾರ ಹಿಂದೆ ಸರಿಯುವುದಿಲ್ಲ. ರೈತರ ಹಿತ...

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗಣಂಗೂರು ಟೋಲ್‌ನಲ್ಲಿ ರೈತರಿಂದ ಹೆದ್ದಾರಿ ತಡೆ

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವುದು, ಸಕ್ಕರೆ ಬೆಲೆ ಪರಿಷ್ಕರಣೆ, ಕಳೆದ ಸಾಲಿನ...