ಶ್ರೀರಂಗಪಟ್ಟಣ | ವೈಜ್ಞಾನಿಕ ರೂಢಿಗಳಿಂದ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ: ಅಗಲೆ ಯಾದವ್

Date:

​ಸಮಾಜದಲ್ಲಿ ಬೇರೂರಿರುವ ಅವೈಜ್ಞಾನಿಕ ಸಂಪ್ರದಾಯ ಮತ್ತು ಮೂಢನಂಬಿಕೆಗಳನ್ನು ತೊಡೆದುಹಾಕಿ, ವೈಜ್ಞಾನಿಕ ರೂಢಿಗಳನ್ನು ಅಳವಡಿಸಿಕೊಂಡಾಗ ಮಾತ್ರ ಸಾಮಾಜಿಕ ನ್ಯಾಯಕ್ಕೆ ನಿಜವಾದ ಅರ್ಥ ಸಿಗಲು ಸಾಧ್ಯ ಎಂದು ಉದ್ಯಮಿ ಅಗಲೆ ಯಾದವ್ ತಿಳಿಸಿದರು.

- Advertisement -

​ಶ್ರೀರಂಗಪಟ್ಟಣದ ಪ್ರಜ್ಞಾವಂತ ವೇದಿಕೆಯಿಂದ ಹಮ್ಮಿಕೊಂಡಿದ್ದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ​ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಬುದ್ಧ, ಬಸವ, ಅಂಬೇಡ್ಕರ್ ಹಾಗೂ ಕುವೆಂಪು ಅವರಂತಹ ಮಹನೀಯರು ಸಮಸಮಾಜದ ನಿರ್ಮಾಣಕ್ಕಾಗಿ ತಮ್ಮ ಬದುಕನ್ನೇ ಅರ್ಪಿಸಿದ್ದಾರೆ. ಇಂದು ಆರ್ಥಿಕತೆ ಬೆಳೆದಂತೆ ಮನುಷ್ಯನಲ್ಲಿ ಪ್ರಜ್ಞೆ ಹೆಚ್ಚಾಗಬೇಕಿತ್ತು. ಆದರೆ ಹೊಸ ಹೊಸ ಸಂಪ್ರದಾಯಗಳನ್ನು ಹುಟ್ಟುಹಾಕುವ ಮೂಲಕ ಸಮಾಜದಲ್ಲಿ ಪಿಡುಗುಗಳನ್ನು ಸೃಷ್ಟಿಸಲಾಗುತ್ತಿದೆ. ಜಾತಿಗೊಂದು ಬಣ್ಣ ಕೊಟ್ಟು ಸಂಘರ್ಷ ಉಂಟುಮಾಡಲಾಗುತ್ತಿದೆ. ಇದರಿಂದಾಗಿ ಸೌಲಭ್ಯಗಳು ಕೇವಲ ಉಳ್ಳವರ ಪಾಲಾಗುತ್ತಿದ್ದು, ಆರ್ಥಿಕವಾಗಿ ಹಿಂದುಳಿದವರಿಗೆ ಅವಕಾಶಗಳು ಸಿಗುತ್ತಿಲ್ಲ. ಈ ಭೂಮಿಯ ಸಂಪತ್ತು ಮತ್ತು ಪಂಚಭೂತಗಳು ಎಲ್ಲರಿಗೂ ಸಮಾನವಾಗಿ ಹಂಚಿಕೆಯಾಗಬೇಕು” ಎಂದು ಆಶಯ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಈ ಸುದ್ದಿ ಓದಿದ್ದೀರಾ? ರಾಯಚೂರು | ಧರ್ಮದ ಹೆಸರಿನಲ್ಲಿ ದೌರ್ಜನ್ಯ; ಫ್ಯಾಸಿಸಂಗೆ ವಿರುದ್ಧ ಸಾಂಸ್ಕೃತಿಕ ಹೋರಾಟದ ಅಗತ್ಯ

​ ಪ್ರಜ್ಞಾವಂತರ ​ವೇದಿಕೆಯ ಸಂಚಾಲಕ ಸಿ ಎಸ್ ವೆಂಕಟೇಶ್ ಮಾತನಾಡಿ, “ವಿಶ್ವದಲ್ಲೇ ಶ್ರೇಷ್ಠವಾದ ಲಿಖಿತ ಸಂವಿಧಾನ ನಮ್ಮದಾಗಿದ್ದು, ತಾರತಮ್ಯ ದೂರ ಮಾಡಿ ಎಲ್ಲರಿಗೂ ನ್ಯಾಯಯುತ ಬೆಂಬಲ ನೀಡುವುದು ಇದರ ಮೂಲ ಆಶಯವಾಗಿದೆ. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಪಾಲಿಸಿದರೆ ಮಾತ್ರ ಸಮಾನತೆಯ ಸಮಾಜ ನಿರ್ಮಾಣವಾಗುತ್ತದೆ” ಎಂದರು.

​ಕಾರ್ಯಕ್ರಮದಲ್ಲಿ ಪ್ರಜ್ಞಾವಂತ ವೇದಿಕೆಯ ಕಾರ್ಯದರ್ಶಿ ಚಿಕ್ಕ ತಮ್ಮೇಗೌಡ, ಸಮರ್ಪಣಾ ಟ್ರಸ್ಟ್ ಅಧ್ಯಕ್ಷ ಕೆ ಎಸ್ ಜಯಶಂಕರ್, ಮುಖಂಡರಾದ ಪಾಲಹಳ್ಳಿ ಪ್ರಕಾಶ್, ಉಮೇಶ್, ಜಯಶೀಲ, ಗಿರಿಯಪ್ಪ, ಸುಷ್ಮಾ ಸೇರಿದಂತೆ ಹಲವು ಗಣ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಅಂಬೇಡ್ಕರ್ ಅವಹೇಳನ ಆರೋಪ: ವೇದಮೂರ್ತಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಪೊಲೀಸ್ ಇಲಾಖೆಯ ಬಗ್ಗೆ ಅವಹೇಳನಕಾರಿ ಹೇಳಿಕೆ...

ತಮಿಳು ಕಾಲೊನಿ ನಿವಾಸಿಗಳನ್ನು ‘ಭಯೋತ್ಪಾದಕರು’ ಎಂದಿರುವ ಆರೋಪ: ರವೀಂದ್ರ ವಿರುದ್ಧ FIR ದಾಖಲಿಸಲು ಆಗ್ರಹ

ಮಂಡ್ಯ ನಗರದ ತಮಿಳು ಕಾಲೊನಿ ನಿವಾಸಿಗಳನ್ನು ‘ತಮಿಳುನಾಡಿನಿಂದ ಬಂದವರು’, ‘ಭಯೋತ್ಪಾದಕರು’ ಎಂದು...

ಮಂಡ್ಯದ ನ್ಯೂ ತಮಿಳು ಕಾಲೊನಿಯಲ್ಲಿ ‘SIR’ ಗೊಂದಲ: 207 ಮತದಾರರು ಎಲ್ಲಿ ಹೋದರು?

ವಿಶೇಷ ತೀವ್ರ ಪರಿಷ್ಕರಣೆ (Special Intensive Revision–SIR) ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯ...

ಬರದ ನೆರಳಲ್ಲಿ 101 ತಾಲ್ಲೂಕುಗಳು; ಮೈಸೂರು-ಚಾಮರಾಜನಗರ-ಮಂಡ್ಯದಲ್ಲಿ ರೈತರ ಬದುಕಿಗೆ ಕಠಿಣ ಸವಾಲು

ಕರ್ನಾಟಕದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿರುವುದು ಕೇವಲ ಮಳೆ ಕಡಿಮೆಯಾಗಿದೆ...