ಶ್ರೀರಂಗಪಟ್ಟಣ | ಐತಿಹಾಸಿಕ ಸ್ಮಾರಕಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ನಾಗೇಂದ್ರ

Date:

ಐತಿಹಾಸಿಕ ನಗರಿ ಶ್ರೀರಂಗಪಟ್ಟಣದ ಸ್ಮಾರಕಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ ಎಂದು ರೋಟರಿ ಸಂಸ್ಥೆಯ ಕಾರ್ಯದರ್ಶಿ ನಾಗೇಂದ್ರ ಅವರು ಹೇಳಿದರು.

- Advertisement -

​ಮೈಸೂರಿನ ಶೇಷಾದ್ರಿಪುರಂ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕದ ವತಿಯಿಂದ ಪಟ್ಟಣದ ಬಿದ್ದು ಕೋಟೆ ಗಣೇಶ ದೇವಸ್ಥಾನ ಹಾಗೂ ಇನ್ ಮನ್ ಕಾರಾಗೃಹದ (Inman’s Dungeon) ಸುತ್ತಮುತ್ತ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

​ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, “ಶ್ರೀರಂಗಪಟ್ಟಣವು ಕೇವಲ ಬ್ರಿಟಿಷರ ವಿರುದ್ಧದ ಹೋರಾಟಕ್ಕೆ ಮಾತ್ರವಲ್ಲದೆ, ಮೈಸೂರು ಸಂಸ್ಥಾನ ಯುದ್ಧಗಳಲ್ಲಿ ಬಳಸಿದ ವಿಶ್ವವಿಖ್ಯಾತ ರಾಕೆಟ್ ತಂತ್ರಜ್ಞಾನ ಮತ್ತು ಅಂದಿನ ಜನಪರ ಯೋಜನೆಗಳಿಂದಾಗಿ ಇಂದು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಇಂತಹ ಇತಿಹಾಸವನ್ನು ಸಾರಿ ಹೇಳುವ ಸ್ಮಾರಕಗಳನ್ನು ಮುಂದಿನ ಪೀಳಿಗೆಗಾಗಿ ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ” ಎಂದು ತಿಳಿಸಿದರು.

WhatsApp Image 2026 02 27 at 9.57.05 AM

ಇದನ್ನೂ ಓದಿ: ಮಂಡ್ಯ | ಪ್ರೇಮ ವಿವಾಹ; ಯುವಕನ ಮನೆಗೆ ಬೆಂಕಿ ಹಚ್ಚಿದ ಯುವತಿ ತಂದೆ

​ಶಿಬಿರದ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು, ಸ್ಮಾರಕಗಳ ಆವರಣದಲ್ಲಿದ್ದ ಪ್ಲಾಸ್ಟಿಕ್ ಹಾಗೂ ಕಸದ ರಾಶಿಗಳನ್ನು ತೆರವುಗೊಳಿಸುವ ಮೂಲಕ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಿದರು.
​
ಸ್ವಚ್ಛತಾ ಅಭಿಯಾನದಲ್ಲಿ ಸಮರ್ಪಣಾ ಟ್ರಸ್ಟ್ ಅಧ್ಯಕ್ಷ ​ಕೆ ಎಸ್ ಜಯಶಂಕರ್, ​ಎನ್.ಎಸ್.ಎಸ್. ಅಧಿಕಾರಿ ಡಾ. ರಾಘವೇಂದ್ರ ಹಾಗೂ ಕಾಲೇಜಿನ ಉಪನ್ಯಾಸಕರು ಮತ್ತು ನೂರಾರು ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಬ್ಬಿಗೆ ಟನ್‌ಗೆ ₹5,500 ನಿಗದಿಗೆ ಆಗ್ರಹ: ಅ.23ರಂದು ಗಣಂಗೂರು ಟೋಲ್ ಬಂದ್ ಪ್ರತಿಭಟನೆ

ಕಬ್ಬು ಬೆಳೆಗಾರರ ವಿವಿಧ ಸಮಸ್ಯೆಗಳನ್ನು ಪರಿಹರಿಸುವುದು ಹಾಗೂ ರೈತರ ಪ್ರಮುಖ ಬೇಡಿಕೆಗಳನ್ನು...

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ,...

SIR: ಮತದಾನದ ಹಕ್ಕು ಕಸಿಯುವ ಯಾವುದೇ ವ್ಯವಸ್ಥೆ ಒಪ್ಪಲಾಗದು-ಪ್ರಕಾಶ್ ರಾಜ್

ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಮೂಲಭೂತ ಪ್ರಜಾಸತ್ತಾತ್ಮಕ ಹಕ್ಕಾಗಿದ್ದು, ಆ ಹಕ್ಕಿಗೆ...

ಲೋಕಾ ರೇಡ್: 33 ಸ್ಥಳಗಳಲ್ಲಿ ಶೋಧ, ರೂ. 29.60 ಕೋಟಿ ಅಕ್ರಮ ಆಸ್ತಿ ಪತ್ತೆ

ಕರ್ನಾಟಕದಾದ್ಯಂತ ಅಕ್ರಮ ಆಸ್ತಿ (ಡಿಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್...