ಶ್ರೀರಂಗಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಅಂಬೇಡ್ಕರ್ ಪ್ರತಿಮೆ ಇರುವ ಮಂಟಪದ ಸುತ್ತಲು ಆರ್‌ಎಸ್‌ಎಸ್ ಹಾಗೂ ಸಂಘಪರಿವಾರದ ಕೆಲವರು ದುರುದ್ದೇಶಪೂರ್ವಕವಾಗಿ ಕೇಸರಿ ಧ್ವಜ ಹಾರಿಸಲು ಪ್ರಯತ್ನಿಸುತ್ತಿರುವುದಕ್ಕೆ ಮಂಡ್ಯದ ದಸಂಸ ನಾಯಕರಾದ ಗುರುಪ್ರಸಾದ್ ಕೆರಗೋಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಟಪದ ಸುತ್ತಲೂ ದೊಡ್ಡ ಕಂಬಗಳನ್ನು ನೆಟ್ಟು ಕೇಸರಿ ಧ್ವಜ ಹಾರಿಸಲು ಪ್ರಯತ್ನಿಸುತ್ತಿದ್ದು, ಇದು ಶ್ರೀರಂಗಪಟ್ಟಣದ ಶಾಂತಿ-ಸೌಹಾರ್ದತೆ-ಸಹಬಾಳ್ವೆಗೆ ಭಂಗ ತರುವ ದುಷ್ಟ ಪ್ರಯತ್ನವಾಗಿದೆ. ಹಾಗಾಗಿ ಕೂಡಲೇ ಈ ದುಷ್ಕೃತ್ಯವನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮಂಡ್ಯ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಗುರುಪ್ರಸಾದ್ ಕೆರಗೋಡು ಮನವಿ ಮಾಡಿದ್ದಾರೆ.
ಇದಲ್ಲದೆ ಸಂಘಪರಿವಾರದ ದುಷ್ಕೃತ್ಯವನ್ನು ಮಂಡ್ಯ ಹಾಗೂ ಶ್ರೀರಂಗಪಟ್ಟಣದ ದಸಂಸ ನಾಯಕರು ಕೂಡ ಖಂಡಿಸಿದ್ದು, ಕೂಡಲೇ ಕೇಸರಿ ಧ್ವಜ ಹಾರಿಸುವ ಪ್ರಯತ್ನವನ್ನು ತೆರವುಗೊಳಿಸದಿದ್ದಲ್ಲಿ ಭಾರಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉತ್ತರ ಕರ್ನಾಟಕ ಜನತೆಯ ಆಶೋತ್ತರಗಳು ಈ ಬಾರಿಯಾದರೂ ಈಡೇರಲಿ
