ಶ್ರೀರಂಗಪಟ್ಟಣ | ಸಂವಿಧಾನ ರಚನೆಯಲ್ಲಿ ಮಹಿಳೆಯರ ಪಾತ್ರ ಅವಿಸ್ಮರಣೀಯ: ಡಾ. ಡಿ ಎ ಪ್ರಶಾಂತ್

Date:

ಮಹಿಳೆಯರನ್ನು ಕೇವಲ ನಾಲ್ಕು ಗೋಡೆಗಳ ಮಧ್ಯೆ ಮಕ್ಕಳು ಹೆರುವ ಯಂತ್ರಗಳಂತೆ ನೋಡುತ್ತಿದ್ದ ಆ ಕಾಲಘಟ್ಟದಲ್ಲಿ, ಭಾರತದ ಸಂವಿಧಾನ ರಚನಾ ಸಭೆಯಲ್ಲಿ ಪಾಲ್ಗೊಂಡಿದ್ದ 15 ಮಂದಿ ಮಹಿಳೆಯರ ಸಾಧನೆ ಮತ್ತು ಕೊಡುಗೆಯನ್ನು ನಾವೆಲ್ಲರೂ ಮುಕ್ತ ಕಂಠದಿಂದ ಶ್ಲಾಘಿಸಬೇಕು ಎಂದು ಮೈಸೂರಿನ ಸೆಂಟ್ ಫಿಲೋಮಿನ ಕಾಲೇಜಿನ ಪ್ರಾಧ್ಯಾಪಕ ಡಾ. ಡಿ ಎ ಪ್ರಶಾಂತ್ ಅಭಿಪ್ರಾಯಪಟ್ಟರು.

- Advertisement -

​ಶ್ರೀರಂಗಪಟ್ಟಣ ನಗರದ ಸಂಜಯ ಪ್ರಕಾಶನದ ವತಿಯಿಂದ 135ನೇ ಅಂಬೇಡ್ಕರ್‌ ಜಯಂತಿ ಅಂಗವಾಗಿ ಆಯೋಜಿಸಲಾಗಿದ್ದ ‘ಅಂಬೇಡ್ಕರ್ ಮತ್ತು ಮಹಿಳಾ ಸಬಲೀಕರಣ: ಸಂವಿಧಾನಾತ್ಮಕ ದೃಷ್ಟಿಕೋನ’‌ ವಿಷಯದ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಬೆಳಗಾವಿ | ಬಿಸಿಲಿಗೂ ಕುಗ್ಗದೆ ಕಬ್ಬಿಗೆ ₹5500 ಬೆಲೆಗಾಗಿ...

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ...

​ಸಂವಿಧಾನ ರಚನಾ ಸಭೆಯಲ್ಲಿದ್ದ ಮಹಿಳಾ ಪ್ರಾತಿನಿಧ್ಯದ ಬಗ್ಗೆ ಮಾತನಾಡುತ್ತ “ಸಂವಿಧಾನ ರಚನಾ ಸಭೆಯ ಒಟ್ಟು 389 ಸದಸ್ಯರಲ್ಲಿ ಕೇವಲ 15 ಮಂದಿ ಮಾತ್ರ ಮಹಿಳೆಯರಿದ್ದರು. ಅದರಲ್ಲೂ ಮದ್ರಾಸ್ ಪ್ರಾಂತ್ಯದಿಂದ ಆಯ್ಕೆಯಾಗಿದ್ದ ಏಕೈಕ ದಲಿತ ಮಹಿಳೆ ʼದಾಕ್ಷಾಯಿಣಿ ವೇಲಾಯುಧನ್ʼ, ಅಂದಿನ ಮಟ್ಟಿಗೆ ಒಬ್ಬ ಸಾಮಾನ್ಯ ದಲಿತ ಮಹಿಳೆ ಚುನಾವಣೆಯಲ್ಲಿ ಗೆದ್ದು ಬರುವುದು ಸಾಮಾನ್ಯ ಮಾತಾಗಿರಲಿಲ್ಲ” ಎಂದರು.

​”ಭಾರತದ ಮೊದಲ ಆರೋಗ್ಯ ಸಚಿವೆ ʼರಾಜಕುಮಾರಿ ಅಮೃತ್ ಕೌರ್ʼ ಸೇರಿದಂತೆ ಸುಚೇತಾ ಕೃಪಾಲನಿ, ಬೇಗಂ ಐಜಾಜ್ ರಸೂಲ್, ರೇಣುಕಾ ರಾಯ್, ಲೀಲಾ ರಾಯ್, ಆನಿ ಮಸ್ಕರೇನ್ ಸೇರಿದಂತೆ ವಿವಿಧ ಸಮುದಾಯದ 15 ಮಂದಿ ಮಹಿಳೆಯರು ಸಂವಿಧಾನ ರಚನೆಯ ಚರ್ಚೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಭಾರತ ಸಂವಿಧಾನಕ್ಕೆ ಅದ್ಭುತ ಕೊಡುಗೆ ನೀಡಿದ್ದಾರೆ” ಎಂದು ಸ್ಮರಿಸಿದರು.

ಇದನ್ನೂ ಓದಿ> ಶ್ರೀರಂಗಪಟ್ಟಣ | ಸತತ ಅಧ್ಯಯನ, ಪರಿಶ್ರಮದಿಂದ ಮಾತ್ರ ಮಹಿಳಾ ಸಬಲೀಕರಣ ಸಾಧ್ಯ: ಡಾ. ಸುಜಾತ ಅಕ್ಕಿ

​ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ನೇತೃತ್ವದ ಕರಡು ಸಮಿತಿಯ ಶ್ರಮವನ್ನು ವಿವರಿಸಿದ ಅವರು, ಸಮಿತಿಯಲ್ಲಿದ್ದ ಎನ್. ಗೋಪಾಲಸ್ವಾಮಿ ಅಯ್ಯಂಗಾರ್, ಅಲ್ಲಾಡಿ ಕೃಷ್ಣಸ್ವಾಮಿ ಅಯ್ಯರ್, ಸೈಯದ್ ಮಹಮ್ಮದ್ ಸಾದುಲ್ಲಾ ಹಾಗೂ ಸಂವಿಧಾನಾತ್ಮಕ ಸಲಹೆಗಾರರಾಗಿದ್ದ ಬಿ ಎನ್ ರಾವ್ ಅವರ ಪಾತ್ರವನ್ನು ಶ್ಲಾಘಿಸಿದರು.
​
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀರಂಗಪಟ್ಟಣದ ಹಿರಿಯ ಗಾಂಧಿವಾದಿ ಡಾ. ಬಿ ಸುಜಯ್ ಕುಮಾರ್ ಮಾತನಾಡಿ, “ಬಾಬಾ ಸಾಹೇಬರು ನೀಡಿದ ಸಂವಿಧಾನಾತ್ಮಕ ಹಕ್ಕುಗಳಿಂದಾಗಿ ಇಂದು ಭಾರತದ ಮಹಿಳೆಯರು ಗ್ರಾಮ ಪಂಚಾಯಿತಿಯಿಂದ ರಾಷ್ಟ್ರಪತಿ ಭವನದವರೆಗೆ ಎಲ್ಲ ಕ್ಷೇತ್ರಗಳಲ್ಲೂ ಸಾಧನೆಗೈದಿದ್ದಾರೆ. ಅವರ ದೃಷ್ಟಿಯಲ್ಲಿ ಮಹಿಳಾ ಸಬಲೀಕರಣ ಎಂದರೆ ಕೇವಲ ಸವಲತ್ತು ನೀಡುವುದಲ್ಲ, ಬದಲಿಗೆ ಮಹಿಳೆಯನ್ನು ಸ್ವತಂತ್ರ ಮತ್ತು ಗೌರವಾನ್ವಿತ ವ್ಯಕ್ತಿಯಾಗಿ ರೂಪಿಸುವುದಾಗಿತ್ತು” ಎಂದು ಹೇಳಿದರು.

075f679a 51ff 4998 b416 a12d5bd350f0 1

ಕಾರ್ಯಕ್ರಮದಲ್ಲಿ ಸಂಜಯ ಪ್ರಕಾಶನದ ಎಸ್ ಎಂ ಶಿವಕುಮಾರ್, ಸಮರ್ಪಣ ಟ್ರಸ್ಟ್ ಅಧ್ಯಕ್ಷ ಕೆ ಎಸ್ ಜಯಶಂಕರ್, ಶ್ರೀರಂಗನಾಯಕಿ ಸಮಾಜದ ಅಧ್ಯಕ್ಷೆ ಡಿ. ವಿಶಾಲಾಕ್ಷಿ, ಐಕ್ಯ ಅಲಯನ್ಸ್ ಸಂಸ್ಥೆಯ ಅಧ್ಯಕ್ಷೆ ಎನ್. ಸರಸ್ವತಿ, ಮಹಿಳಾ ಸಾಂತ್ವನ ಕೇಂದ್ರದ ಅಧ್ಯಕ್ಷೆ ಶೀಲಾ ನಂಜುಂಡಯ್ಯ, ಮುಸ್ಲಿಂ ಸೌಹಾರ್ದ ವೇದಿಕೆಯ ಗೌರವಾಧ್ಯಕ್ಷ ಪ್ರೊ. ಇಲಿಯಾಸ್ ಅಹಮದ್ ಖಾನ್, ಪ್ರೊಫೆಸರ್ ಮಹದೇವ್ ಅಬ್ದುಲ್ ಬೇಗ್, ಗಂಜಾಂ ಆಯುಬ್, ಕುಮಾರ್, ಮಾದೇಶ್, ಸುರೇಶ್ ದರಸಗುಪ್ಪೆ, ಕ್ಯಾತನಹಳ್ಳಿ ಚಂದ್ರಣ್ಣ, ರಂಗನಾಥ್, ಡಿ. ನಂಜುಂಡಯ್ಯ, ದೇವರಾಜ್, ಗಣಂಗೂರು ನಂಜೇಗೌಡ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

SIR ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ INDIA ಮೈತ್ರಿಕೂಟ ಸಜ್ಜು; ಸಮನ್ವಯ ಸಮಿತಿ ರಚನೆಗೆ ನಿರ್ಧಾರ

ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ ಬದುಕು!

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು...