ಕನ್ನಡ ಭಾಷಾ ಬೆಳವಣಿಗೆಗೆ ಸಮಾನ ಅನುದಾನ ನೀಡದಿದ್ದರೆ ಪ್ರಧಾನಿ ಭೇಟಿ ವೇಳೆ ಮುತ್ತಿಗೆ: ವಿದ್ಯಾರ್ಥಿಗಳ ಎಚ್ಚರಿಕೆ

Date:

ವಿದೇಶಗಳಲ್ಲಿ ಹಿಂದಿ ನುಡಿ ಬೆಳವಣಿಗೆಗೆ ಕೇಂದ್ರ ಸರ್ಕಾರ ನೀಡುತ್ತಿರುವ ಅನುದಾನದಷ್ಟೇ ಅನುದಾನವನ್ನು ವಿದೇಶಗಳಲ್ಲಿ ಕನ್ನಡ ನುಡಿ ಬೆಳವಣಿಗೆಗೂ ನೀಡಬೇಕು ಎಂದು ಆಗ್ರಹಿಸಿ ʼನಾವು ದ್ರಾವಿಡ ಕನ್ನಡಿಗರು ಚಳವಳಿʼಯ ವಿದ್ಯಾರ್ಥಿಗಳು ಪ್ರಧಾನ ಮಂತ್ರಿಗಳಿಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ್ದಾರೆ.

- Advertisement -

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಫೆಬ್ರವರಿ ತಿಂಗಳಲ್ಲಿ ಆದಿಚುಂಚನಗಿರಿಗೆ ಪ್ರಧಾನ ಮಂತ್ರಿಗಳು ಭೇಟಿ ನೀಡುವ ಸಂದರ್ಭದಲ್ಲಿ ಈ ಬೇಡಿಕೆಗೆ ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಮುತ್ತಿಗೆ ಹಾಕಲಾಗುವುದು ಎಂದು ಘೋಷಿಸಿದರು. ಈ ಸಂದರ್ಭ ಜಿಲ್ಲಾಧಿಕಾರಿಗಳ ಮುಖೇನ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

2025ರ ಡಿಸೆಂಬರ್ 28ರಂದು ‘ಮನ್ ಕಿ ಬಾತ್’ ಕಾರ್ಯಕ್ರಮದ 129ನೇ ಸಂಚಿಕೆಯಲ್ಲಿ ಪ್ರಧಾನ ಮಂತ್ರಿಗಳು ದುಬೈನಲ್ಲಿ ಕನ್ನಡಿಗರು ತಮ್ಮ ಸ್ವಂತ ಹಣದಲ್ಲಿ ನಡೆಸುತ್ತಿರುವ ಕನ್ನಡ ಶಾಲೆಗಳನ್ನು ಹೊಗಳಿದ್ದಾರೆ ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಜಗತ್ತಿನಾದ್ಯಂತ ಹಿಂದಿ ನುಡಿ ಪ್ರಚಾರಕ್ಕೆ ಪ್ರತಿವರ್ಷ ನೂರಾರು ಕೋಟಿ ರೂಪಾಯಿ ಅನುದಾನ ನೀಡುತ್ತಿರುವ ಕೇಂದ್ರ ಸರ್ಕಾರ, ವಿದೇಶಗಳಲ್ಲಿ ಕನ್ನಡ ಭಾಷೆ ಬೆಳವಣಿಗೆಗೆ ಯಾವುದೇ ಅನುದಾನ ನೀಡುತ್ತಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2026 01 07 at 5.37.03 PM

ಜನವರಿ 10ರಂದು ‘ವಿಶ್ವ ಹಿಂದಿ ದಿನ’ ಆಚರಣೆಗೆ ವಿದೇಶಗಳಲ್ಲಿ ಸುಮಾರು 300 ಕೋಟಿ ರೂ. ಅನುದಾನ ನೀಡಲಾಗುತ್ತಿದೆ. ಸಂವಿಧಾನದಲ್ಲಿ ಹಿಂದಿಯೊಂದಿಗೆ ಸಮಾನವಾಗಿ ಕನ್ನಡವೂ ಶಾಸ್ತ್ರೀಯ ಭಾಷೆಯ ಸ್ಥಾನ ಪಡೆದಿರುವಾಗ, ಕನ್ನಡಕ್ಕೂ ಸಮಾನ ಬೆಂಬಲ ನೀಡಬೇಕೆಂದು ಅವರು ಆಗ್ರಹಿಸಿದರು. ದೇಶದ ಪ್ರಧಾನ ಮಂತ್ರಿಗಳು ಕರ್ನಾಟಕಕ್ಕೂ ಪ್ರಧಾನಿಗಳಾಗಿದ್ದು, ಕನ್ನಡ ಭಾಷೆ ಬೆಳವಣಿಗೆಗೂ ಸರ್ಕಾರದ ಸ್ಪಷ್ಟ ನೀತಿ ಅಗತ್ಯವಿದೆ ಎಂದು ವಿದ್ಯಾರ್ಥಿಗಳು ಹೇಳಿದರು.

ಇದನ್ನೂ ಓದಿ: ಮಂಡ್ಯ | ಕನ್ನಡ ಕೇವಲ ಒಂದು ಭಾಷೆಯಲ್ಲ, ಅದು ನಮ್ಮ ಸಂಸ್ಕೃತಿ: ಸತೀಶ್ ಜವರೇಗೌಡ

ವಿದೇಶಗಳಲ್ಲಿ ಜನವರಿ 10ರಂದು ‘ವಿಶ್ವ ಕನ್ನಡ ದಿನ’ ಆಚರಣೆಗೆ ಅಲ್ಲಿನ ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಅನುದಾನ ನೀಡಬೇಕು. ಪ್ರತಿ ದೇಶಕ್ಕೂ ಕನಿಷ್ಠ ನಾಲ್ಕು ಕನ್ನಡ ಭಾಷಾ ತಜ್ಞರನ್ನು—ಕನ್ನಡ BA, B.Ed ಪದವೀಧರ ಇಬ್ಬರು ಹಾಗೂ ಕನ್ನಡ MA, PhD ಪಡೆದ ಇಬ್ಬರನ್ನು ಸೂಕ್ತ ಸಂಬಳ ಮತ್ತು ಭತ್ಯೆಗಳೊಂದಿಗೆ ನೇಮಿಸಬೇಕು ಎಂದು ಒತ್ತಾಯಿಸಲಾಯಿತು. ಇದರಿಂದ 200ಕ್ಕೂ ಹೆಚ್ಚು ದೇಶಗಳಲ್ಲಿ 800 ಕನ್ನಡಿಗರಿಗೆ ಉದ್ಯೋಗ ಸಿಗುವುದರ ಜೊತೆಗೆ, ವಿದೇಶದಲ್ಲಿರುವ ಸಾವಿರಾರು ಕನ್ನಡಿಗರ ಮಕ್ಕಳಿಗೆ ಕನ್ನಡ ಕಲಿಸುವ ಅವಕಾಶ ಸಿಗಲಿದೆ ಎಂದು ತಿಳಿಸಲಾಯಿತು.

ಈ ಹೋರಾಟಕ್ಕೆ ಕರ್ನಾಟಕ ಸಂವಿಧಾನ ಸೇನೆ ಹಾಗೂ ಕರವೇ ಸಂಘಟನೆಗಳ ಪದಾಧಿಕಾರಿಗಳು ಬೆಂಬಲ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸದಿದ್ದರೆ ನಿರಂತರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ ಮುಂದಾಳುಗಳಾದ ಅಬಿ ಒಕ್ಕಲಿಗ, ಜಯರಾಂ, ಪ್ರದೀಪ್, ಆಫಿಯಾ, ನಂದಿನಿ, ಸಚಿನ್ ಒಕ್ಕಲಿಗ, ಕುಮಾರ್ ಸೇರಿದಂತೆ ಹಲವು ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಅಂಬೇಡ್ಕರ್ ಅವಹೇಳನ ಆರೋಪ: ವೇದಮೂರ್ತಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಪೊಲೀಸ್ ಇಲಾಖೆಯ ಬಗ್ಗೆ ಅವಹೇಳನಕಾರಿ ಹೇಳಿಕೆ...

ತಮಿಳು ಕಾಲೊನಿ ನಿವಾಸಿಗಳನ್ನು ‘ಭಯೋತ್ಪಾದಕರು’ ಎಂದಿರುವ ಆರೋಪ: ರವೀಂದ್ರ ವಿರುದ್ಧ FIR ದಾಖಲಿಸಲು ಆಗ್ರಹ

ಮಂಡ್ಯ ನಗರದ ತಮಿಳು ಕಾಲೊನಿ ನಿವಾಸಿಗಳನ್ನು ‘ತಮಿಳುನಾಡಿನಿಂದ ಬಂದವರು’, ‘ಭಯೋತ್ಪಾದಕರು’ ಎಂದು...

ಮಂಡ್ಯದ ನ್ಯೂ ತಮಿಳು ಕಾಲೊನಿಯಲ್ಲಿ ‘SIR’ ಗೊಂದಲ: 207 ಮತದಾರರು ಎಲ್ಲಿ ಹೋದರು?

ವಿಶೇಷ ತೀವ್ರ ಪರಿಷ್ಕರಣೆ (Special Intensive Revision–SIR) ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯ...

ಬರದ ನೆರಳಲ್ಲಿ 101 ತಾಲ್ಲೂಕುಗಳು; ಮೈಸೂರು-ಚಾಮರಾಜನಗರ-ಮಂಡ್ಯದಲ್ಲಿ ರೈತರ ಬದುಕಿಗೆ ಕಠಿಣ ಸವಾಲು

ಕರ್ನಾಟಕದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿರುವುದು ಕೇವಲ ಮಳೆ ಕಡಿಮೆಯಾಗಿದೆ...