2010ರ ಮೇ22ರಂದು ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅವಘಾತದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ನಾಳೆ (ಮೇ.22) ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ವಿಮಾನ ದುರಂತದಲ್ಲಿ ಮರಣ ಹೊಂದಿದ 158 ಜನರ ನೆನಪಿಗಾಗಿ ಕೂಳೂರು ತಣ್ಣೀರು ಬಾವಿ ರಸ್ತೆಯಲ್ಲಿ ಪಾರ್ಕ್ ನಿರ್ಮಾಣ ಮಾಡಲಾಗಿದೆ. ಪ್ರತೀ ವರ್ಷದಂತೆ ಈ ಬಾರಿಯೂ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಈ ಸ್ಥಳದಲ್ಲಿ ನಾಳೆ ಬೆಳಗ್ಗೆ 9:30ಕ್ಕೆ ಹಮ್ಮಿಕೊಳ್ಳಲಾಗಿದೆ. ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ: ಮಂಗಳೂರು | ಸರ್ಕಾರಿ ಜಾಗ ಅತಿಕ್ರಮಿಸಿ ಮೂರ್ತಿ ನಿರ್ಮಾಣ- ‘ಈ ದಿನ’ ವರದಿ ನಂತರ ಅಧಿಕಾರಿಗಳಿಂದ ಕ್ರಮ