ಮಂಗಳೂರು | ಗಾಳಿ ಮಳೆಗೆ ವಾಹನಗಳ ಮೇಲೆ ಬಿದ್ದ ಬೃಹತ್ ಆಲದ ಮರದ ಕೊಂಬೆ; ಜಖಂ

Date:

Advertisements

ಮಂಗಳವಾರ ತಡರಾತ್ರಿ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನಗರದ ಹೃದಯಭಾಗದಲ್ಲಿ ಸುರಿದ ಗಾಳಿ ಮಳೆಗೆ ಬೃಹತ್ ಆಲದ ಮರದ ಕೊಂಬೆಯೊಂದು ಬಿದ್ದ ಪರಿಣಾಮ, ಕೆಲವು ವಾಹನಗಳು ಜಖಂಗೊಂಡ ಘಟನೆ ನಡೆದಿದೆ.

ಮಂಗಳೂರು ನಗರದ ಕರಂಗಲ್ಪಾಡಿಯ ಕಡೆಯಿಂದ ಕೋರ್ಟ್‌ ಕಟ್ಟಡಕ್ಕೆ ತೆರಳುವ ರಸ್ತೆಯ ಬಳಿಯಲ್ಲಿ(ಸೈಂಟ್ ಅಲೋಶಿಯಸ್ ಐಟಿಐ ಸಮೀಪ) ಈ ಘಟನೆ ಮಂಗಳವಾರ ರಾತ್ರಿ 9.30ರ ಸುಮಾರಿಗೆ ನಡೆದಿದೆ.

ಆಲದ ಮರದ ಕೊಂಬೆ ಬಿದ್ದ ಪರಿಣಾಮ ಎರಡು ಕಾರುಗಳು ಜಖಂಗೊಂಡಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕರಾವಳಿ ಭಾಗದಲ್ಲಿ ಸೋಮವಾರದಿಂದ ನಿರಂತರ ಮಳೆಯಾಗುತ್ತಿದೆ.

Advertisements

ಮರದ ಕೊಂಬೆ ವಾಹನಗಳ ಮೇಲೆ ಬಿದ್ದಿರುವ ಘಟನೆಯ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, “ರಾತ್ರಿ 9:30ರ ಸುಮಾರಿಗೆ ಈ ಘಟನೆ ನಡೆದಿದೆ. ಮಾಹಿತಿ ತಿಳಿದ ಕೂಡಲೇ ಹೊಯ್ಸಳ ಪೂರ್ವ ವಿಭಾಗದ ಪೊಲೀಸರು ತೆರಳಿದ್ದಾರೆ. ವಿದ್ಯುತ್ ತಂತಿಗಳ ಮೇಲೂ ಕೊಂಬೆ ಬಿದ್ದ ಪರಿಣಾಮ ಹಾನಿಗೀಡಾಗಿತ್ತು. ಹಾಗಾಗಿ, ಕೂಡಲೇ ಮೆಸ್ಕಾಂ ಸಿಬ್ಬಂದಿಯನ್ನು ಕರೆಸಿ, ಮರವನ್ನು ತೆರವುಗೊಳಿಸಲಾಗಿದೆ. ಘಟನೆಯಿಂದ ಎರಡು ವಾಹನಗಳಿಗೆ ಹಾನಿಯುಂಟಾಗಿದೆ” ಎಂದು ತಿಳಿಸಿದ್ದಾರೆ.

WhatsApp Image 2024 05 21 at 10.45.26 PM 1 WhatsApp Image 2024 05 21 at 10.45.26 PM

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X