ಮಂಗಳೂರು | ಶಂಸುಲ್ ಇಸ್ಲಾಂ ಉಪನ್ಯಾಸಕ್ಕೆ ಎಬಿವಿಪಿ ವಿರೋಧ; 10ಕ್ಕೂ ಹೆಚ್ಚು ಕಾರ್ಯಕರ್ತರು ಪೊಲೀಸ್ ವಶಕ್ಕೆ

Date:

Advertisements

ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಬಿ.ವಿ ಕಕ್ಕಿಲ್ಲಾಯ ಪ್ರತಿಷ್ಠಾನ ಆಯೋಜಿಸಿರುವ ಉಪನ್ಯಾಸ ಕಾರ್ಯಕ್ರಮಕ್ಕೆ ಎಬಿವಿಪಿ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದ್ದಾರೆ.

ದೆಹಲಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಶಂಸುಲ್ ಇಸ್ಲಾಂ ಅವರಿಂದ ‘ಮೊದಲ ಸ್ವಾತಂತ್ರ್ಯ ಸಂಗ್ರಾಮ 1857- ಜಂಟಿ ಬಲಿದಾನಗಳು, ಜಂಟಿ ವಾರಸುದಾರಿಕೆ’ ಕುರಿತು ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಈ ಉಪನ್ಯಾಸ ಕಾರ್ಯಕ್ರಮಕ್ಕೆ ಎಬಿವಿಪಿ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿ, ‘ಗೋಬ್ಯಾಕ್ ಶಂಸುಲ್’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements
abvp 2

‘ಶಂಸುಲ್ ಇಸ್ಲಾಂ ಅವರಂತಹ ವಿವಾದಾತ್ಮಕ ವ್ಯಕ್ತಿಗಳನ್ನು ಕಾರ್ಯಕ್ರಮಕ್ಕೆ ಕರೆಸಿ ಕಾಲೇಜಿನಲ್ಲಿ ಸಂಘರ್ಷ ವಾತಾವರಣ ಸೃಷ್ಟಿಸಲಾಗುತ್ತಿದೆ’ ಎಂದು ಎಬಿವಿಪಿ ಕಾರ್ಯಕರ್ತರು ಆರೋಪಿಸಿ ಪ್ರತಿಭಟನೆಗೆ ಕುಳಿತಿದ್ದಾರೆ.

ಕಾಲೇಜು ವಿದ್ಯಾರ್ಥಿಗಳನ್ನು ಹೊರತು ಪಡಿಸಿ ಪ್ರತಿಭಟನೆಗೆ ಬಂದು ವಿರೋಧಿ ಘೋಷಣೆ ಕೂಗಿದ 10ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ನಡುವೆಯೇ ವಿ ವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಉಪನ್ಯಾಸ ಕಾರ್ಯಕ್ರಮ ಆರಂಭವಾಗಿದೆ.

ಎಬಿವಿಪಿಯಲ್ಲಿ ಗುರುತಿಸಿಕೊಂಡಿರುವ ಕಾಲೇಜಿನ ವಿದ್ಯಾರ್ಥಿಗಳು ಕೂಡ ಕಾಲೇಜಿನ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

abvp
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

Download Eedina App Android / iOS

X