ಮಂಗಳೂರು | ಶಿರಾಡಿ ಘಾಟಿಯಲ್ಲಿ ಇನ್ನೋವಾ ಕಾರು ಭೀಕರ ಅಪಘಾತ: ತಾಯಿ-ಮಗ ಮೃತ್ಯು; ಹಲವರಿಗೆ ಗಂಭೀರ

Date:

ಬೆಂಗಳೂರಿನಿಂದ ಮಂಗಳೂರು ಕಡೆಗೆ ಒಂದೇ ಕುಟುಂಬದ ಸದಸ್ಯರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರೊಂದು ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತಗೊಂಡ ಪರಿಣಾಮ ತಾಯಿ-ಮಗ ಮೃತಪಟ್ಟ ಘಟನೆ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ.

- Advertisement -

ಘಟನೆಯಲ್ಲಿ ಕಾರಿನಲ್ಲಿದ್ದ ಇತರರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಮೃತಪಟ್ಟವರನ್ನು ಪಾಣೆಮಂಗಳೂರು ಬೊಂಡಾಲದ ಶಬ್ಬೀರ್ ಎಂಬವರ ಮಗ ಮೊಹಮ್ಮದ್ ಶಫೀಕ್(20) ಹಾಗೂ ಅವರ ಪತ್ನಿ ಸಫಿಯಾ(50) ಎಂದು ಗುರುತಿಸಲಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ.

ಕಾರು ಶಿರಾಡಿ ಘಾಟ್ ನ ಕೆಂಪುಹೊಳೆ ಸಮೀಪಿಸುತ್ತಿದ್ದಂತೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಂಟೈನ‌ರ್ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದವರ ಪೈಕಿ ಮೂವರು ಮಕ್ಕಳು ಕೂಡಾ ಇದ್ದು, ಅವರಿಗೂ ಕೂಡ ಗಂಭೀರ ಸ್ವರೂಪದ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಲ್ಲಿ ನಿನ್ನೆ ಸಂಬಂಧಿಕರೋರ್ವರ ಮದುವೆ ಔತಣಕೂಟ (Reception) ಸಮಾರಂಭದಲ್ಲಿ ಭಾಗವಹಿಸಿ, ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಘಟನೆಯ ಬಗ್ಗೆ ಈ ದಿನ.ಕಾಮ್‌ಗೆ ಕುಟುಂಬದ ಸದಸ್ಯರೋರ್ವರು ಮಾಹಿತಿ ನೀಡಿದ್ದು, “ಬೆಂಗಳೂರಿನಲ್ಲಿ ನಿನ್ನೆ ನಮ್ಮ ಕುಟುಂಬದ ಸದಸ್ಯರೋರ್ವರ‌ ಮಗನ ಮದುವೆಯ ಔತಣಕೂಟವಿತ್ತು. ಅದರಲ್ಲಿ ಕಾರಿನಲ್ಲಿದ್ದ ಕುಟುಂಬವೂ ಕೂಡ ಈ ಕೂಟದಲ್ಲಿ ಭಾಗವಹಿಸಿತ್ತು. 12 ಗಂಟೆ ರಾತ್ರಿಗೆ ಬೆಂಗಳೂರಿನಿಂದ ಮಂಗಳೂರಿನ ಮನೆಗೆ ಇನ್ನೋವಾ ಕಾರಿನಲ್ಲಿ ಹೊರಟಿದ್ದರು. ಶಿರಾಡಿ ಘಾಟಿಯಲ್ಲಿ ಟ್ರಕ್‌ವೊಂದು ಗುದ್ದಿದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ನಮಗೆ ಗೊತ್ತಾಗಿದೆ” ಎಂದು ತಿಳಿಸಿದ್ದಾರೆ.

IMG 20240521 WA0358

ಮೃತಪಟ್ಟಿರುವ ಶಫೀಕ್ ಕಾರು ಚಲಾಯಿಸುತ್ತಿದ್ದರು. ಇವರು ಮಂಗಳೂರಿನ ಕೊಣಾಜೆಯ ಪಿ ಎ ಇಂಜಿನಿಯರಿಂಗ್ ಕಾಲೇಜಿನ ಡಿಪ್ಲೊಮಾ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಇವರ ತಾಯಿ ಸಫಿಯಾ ಕೂಡ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಮೃತದೇಹವು ಸದ್ಯ ಬಂಟ್ವಾಳ ತಾಲೂಕಿನ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿದ್ದು, ಗಾಯಾಳುಗಳನ್ನು ಮಂಗಳೂರಿನ ಯುನಿಟಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಹುದ್ದೆ ಪಡೆದ ಆರೋಪ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ನೇಮಕಾತಿಯಲ್ಲಿ ನಕಲಿ ಎಸ್‌ಎಸ್‌ಎಲ್‌ಸಿ...

ಯಾದಗಿರಿ | ವಂದೇ ಭಾರತ್ ಸ್ಲೀಪರ್ ರೈಲು ಯಾದಗಿರಿಯಲ್ಲಿ ನಿಲುಗಡೆಗೆ ಒತ್ತಾಯಿಸಿ ಮನವಿ

ಬೆಂಗಳೂರು-ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿ ರೈಲು...

ಹಾವೇರಿ | ಬರಪರಿಹಾರ ಹೆಚ್ಚಳ ಮಾಡುವಂತೆ ಆಗ್ರಹಿಸಿ ರೈತ ಸಂಘ ಸರ್ಕಾರಕ್ಕೆ ಹಕ್ಕೊತ್ತಾಯ

"ಸತತ ಬರಗಾಲ ಹಾಗೂ ಅನಾವೃಷ್ಟಿಯಿಂದ ಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೀಡುತ್ತಿರುವ ಬಟವಾಡೆ...

ಹಾವೇರಿ | ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ, ದೇಶ ಬಚಾವೋ : ಕಾಂಗ್ರೇಸ್ ಪಕ್ಷದಿಂದ ಪ್ರತಿಭಟನಾ ಸಮಾವೇಶ

ಹಾವೇರಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಮೈಲಾರಪ್ಪ...