ಮಂಗಳೂರು | ಅಲ್‌ ವಫಾ ಟ್ರಸ್ಟ್‌ನಿಂದ 15 ಜೋಡಿಗಳಿಗೆ ಸರಳ ಸಾಮೂಹಿಕ ವಿವಾಹ

Date:

Advertisements

ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ ಸಮಾರಂಭವು ಇಂದು ಬಂಟ್ವಾಳ ತಾಲೂಕಿನ ನೇರಳಕಟ್ಟೆಯ ಜನಪ್ರಿಯ ಗಾರ್ಡನ್ ಸಭಾಂಗಣದಲ್ಲಿ ನಡೆಯಿತು.

ಎಸ್‌ವೈಎಸ್‌ ದ.ಕ. ಜಿಲ್ಲಾ ಉಪಾಧ್ಯಕ್ಷ ಮೌಲಾನಾ ಸಿರಾಜುದ್ದೀನ್‌ ಸಖಾಫಿ ಕಾರ್ಯಕ್ರಮ ಉದ್ಘಾಟಿಸಿದರು.

ಎಸ್‌ಕೆಎಸ್‌ಎಸ್‌ಎಫ್‌, ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಮೌಲಾನಾ ಅನೀಸ್‌ ಕೌಸರಿ ವಧು ವರರಿಗೆ ಸಂದೇಶ ನೀಡಿದರು. ಉದ್ಯಮಿಗಳಾದ ವಿ.ಕೆ. ಅಬ್ದುಲ್‌ ಖಾದರ್‌ ಬದ್ರಿಯಾ, ಅಬ್ದುಲ್‌ ರಹಿಮಾನ್‌ ಕರ್ನೀರೆ, ಮೋನು ಹಾಜಿ ಪುತ್ತೂರು ಮತ್ತು ಎಂ.ಫ್ರೆಂಡ್ಸ್‌ ಚಾರಿಟೆಬಲ್‌ ಟ್ರಸ್ಟ್‌ನ ಸ್ಥಾಪಕ ರಶೀದ್‌ ವಿಟ್ಲ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

Advertisements
IMG 20250823 WA1764

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಿಗೆ ಅಭಿನಂದನೆ:

ಕಳೆದ 14 ವರ್ಷಗಳಿಂದ ಅಲ್‌ ವಫಾ ಚಾರಿಟೆಬಲ್‌ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಉಮರ್‌ ಯು.ಹೆಚ್.‌ ಅವರು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಗೆ ಅಧ್ಯಕ್ಷರಾಗಿ ರಾಜ್ಯ ಸರಕಾರದಿಂದ ನೇಮಕ ಗೊಂಡಿರುವ ಹಿನ್ನೆಲೆಯಲ್ಲಿ ಸಮಾರಂಭದಲ್ಲಿ ಅಭಿನಂದಿಸಲಾಯಿತು.

ಅಲ್ ವಫಾ ಚಾರಿಟೆಬಲ್ ಟ್ರಸ್ಟ್‌ನ ಅಧ್ಯಕ್ಷ ಮುಹಮ್ಮದ್ ಹನೀಫ್ ಗೋಳ್ತಮಜಲು ಅಧ್ಯಕ್ಷತೆ ವಹಿಸಿದ್ದರು.

IMG 20250823 WA1765

ಪ್ರಧಾನ ಕಾರ್ಯದರ್ಶಿ ಉಮರ್‌ ಯು.ಹೆಚ್.‌ ಸ್ವಾಗತಿಸಿದರು. ಟ್ರಸ್ಟಿಗಳಾದ ಬಿ.ಎ. ಮುಹಮ್ಮದ್‌ ಅಲಿ ಕಾರ್ಯಕ್ರಮ ನಿರೂಪಿಸಿ, ಕೆ.ಎಸ್.‌ ಅಬೂಬಕರ್‌ ಧನ್ಯವಾದವಿತ್ತರು.

ಟ್ರಸ್ಟ್‌ನ ಕೋಶಾಧಿಕಾರಿ ಎಫ್.‌ ಎಂ. ಬಶೀರ್‌, ಟ್ರಸ್ಟಿಗಳಾದ ಬಿ.ಎ. ಶಕೂರ್‌, ವಿ.ಕೆ. ಇಸ್ಮಾಯಿಲ್‌, ಹಮೀದ್‌ ಅತ್ತೂರು, ಮುಹಮ್ಮದ್‌ ಪಿ., ಸಿರಾಜುಲ್‌ ಹಖ್‌, ಪಿ.ಪಿ. ಮಜೀದ್‌ ಮತ್ತು ಬೆಳ್ಳೆಚ್ಚಾರ್‌ ಮುಹಮ್ಮದ್ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಅತ್ತೆಯನ್ನು ಹತ್ಯೆಗೈದ ಸೊಸೆ

ಊಟದಲ್ಲಿ ನಿದ್ರೆ ಮಾತ್ರೆ ಬೆರೆಸಿ ಸೊಸೆಯೇ ಅತ್ತೆಯನ್ನು ಹತ್ಯೆ ಮಾಡಿರುವ ಘಟನೆ...

ಧರ್ಮಸ್ಥಳ ಪ್ರಕರಣ | ಸೌಜನ್ಯ ಹೋರಾಟ ಮುಂದುವರಿಯಲಿದೆ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಕೋಲಾರ | ಪ್ರಗತಿಪರ ರೈತ ತುರಾಂಡಹಳ್ಳಿ ರವಿ ತೋಟಕ್ಕೆ ಅಂತಾರಾಷ್ಟ್ರೀಯ ಅಧಿಕಾರಿಗಳು ಭೇಟಿ

ಕೋಲಾರ ತಾಲೂಕಿನ ತುರಾಂಡಹಳ್ಳಿ ಗ್ರಾಮದ ಪ್ರಗತಿಪರ ರೈತ ಟಿ.ಎನ್ ರವಿ ಅವರ...

ಹಾವೇರಿ | ಬೇಡ್ತಿ-ವರದಾ ನದಿ ಜೋಡಣೆಗೆ ಕೇಂದ್ರ ತಾತ್ವಿಕ ಒಪ್ಪಿಗೆ: ಸಂಸದ ಬಸವರಾಜ ಬೊಮ್ಮಾಯಿ

"ಬೇಡ್ತಿ- ವರದಾ ನದಿ ಜೋಡಣೆ ವಿಚಾರದಲ್ಲಿ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ...

Download Eedina App Android / iOS

X