ಮಂಗಳೂರು | ಲಂಚ ಸ್ವೀಕಾರ ಆರೋಪ; ಟ್ರಾಫಿಕ್ ಇನ್ಸ್‌ಪೆಕ್ಟರ್ ಶರೀಫ್, ಸಿಬ್ಬಂದಿಗೆ ಜಾಮೀನು

Date:

ಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಆರೋಪಿಗಳಾದ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮುಹಮ್ಮದ್ ಶರೀಫ್ ಮತ್ತು ಕಾನ್‌ಸ್ಟೇಬಲ್ ಪ್ರವೀಣ್ ನಾಯ್ಕರಿಗೆ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸಂಧ್ಯಾ ಜಾಮೀನು ಮಂಜೂರು ಮಾಡಿದ್ದಾರೆ.

- Advertisement -

ವ್ಯಕ್ತಿಯೊಬ್ಬರ ಸ್ಕೂಟರ್‌ನ್ನು ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಿಂದ ಬಿಡುಗಡೆಗೊಳಿಸುವ ಸಲುವಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಠಾಣೆಯ ಇನ್ಸ್ ಪೆಕ್ಟರ್ ಮುಹಮ್ಮದ್ ಶರೀಫ್ ಮತ್ತು ಕಾನ್‌ಸ್ಟೇಬಲ್ ಪ್ರವೀಣ್ ನಾಯ್ಕ ಅವರನ್ನು ಮಂಗಳೂರು ಲೋಕಾಯುಕ್ತ ಪೊಲೀಸರು ಜ.28ರಂದು ಬಂಧಿಸಿದ್ದರು. ಅದರಂತೆ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಆರೋಪಿ ಪರ ವಕೀಲರು ಜಾಮೀನು ಅರ್ಜಿಯನ್ನು ಸಲ್ಲಿಸಿದ್ದು ಅರ್ಜಿಯನ್ನು ಪರಿಗಣಸಿದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸಂಧ್ಯಾರವರು ಇನ್ಸ್‌ಪೆಕ್ಟರ್ ಮೊಹಮ್ಮದ್ ಶರೀಫ್‌ ಅವರು ಲಂಚದ ಬೇಡಿಕೆ ಇಟ್ಟ ಬಗ್ಗೆ ಹಾಗೂ ಲಂಚದ ಹಣ ಸ್ವೀಕರಿಸಿದ ಬಗ್ಗೆ ಯಾವುದೇ ಪೂರಕವಾದ ಅಂಶಗಳು ಇಲ್ಲದ ಕಾರಣ ಜಾಮೀನು ಅರ್ಜಿ ಮಂಜೂರು ಮಾಡಿ, ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದ್ದಾರೆ.

ಆರೋಪಿಗಳ ಪರವಾಗಿ ಮಂಜೂರಿನ ವಕೀಲರಾದ ಬಿ. ಅರುಣ್ ಬಂಗೇರ ಮತ್ತು ರಿಹಾನಾ ಪರ್ವಿನ್ ವಾದಿಸಿದ್ದರು.

ಏನಿದು ಪ್ರಕರಣ?

ಪೊಲೀಸರ ವಶದಲ್ಲಿದ್ದ ಸ್ಕೂಟ‌ರ್ ಬಿಡುಗಡೆಗೊಳಿಸಲು ನ್ಯಾಯಾಲಯವು ಆದೇಶ ಮಾಡಿತ್ತು. ಈ ಸಲುವಾಗಿ ದೂರುದಾರರು ಉತ್ತರ ಸಂಚಾರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮಹಮ್ಮದ್ ಶರೀಫ್‌ ಅವರನ್ನು ಭೇಟಿ ಮಾಡಿದ್ದರು. ಸ್ಕೂಟರ್ ಬಿಡುಗಡೆಗೊಳಿಸಲು ₹5 ಸಾವಿರ ಲಂಚ ನೀಡುವಂತೆ ಇನ್ಸ್‌ಪೆಕ್ಟರ್ ಶರೀಫ್‌ ಬೇಡಿಕೆ ಇಟ್ಟಿದ್ದರು. ಮೊತ್ತವನ್ನು ಕಡಿಮೆ ಮಾಡುವಂತೆ ಕೋರಿದಾಗ ಠಾಣಾ ಬರಹಗಾರರಾದ ನಾಗರತ್ನ ಅವರನ್ನು ಭೇಟಿ ಮಾಡಲು ತಿಳಿಸಿದ್ದರು. ಆಕೆಯ ಬಳಿ ಹೋದಾಗ, ಅವಾಚ್ಯವಾಗಿ ಬೈದು ₹ 3 ಸಾವಿರ ಲಂಚ ನೀಡುವಂತೆ ಹೇಳಿದ್ದರು.

ಕಳೆದ ಜ.27 ರಂದು ವಾಹನ ಬಿಡಿಸಲು ಹೋದ ವಾಹನ ಮಾಲೀಕನಿಗೆ ಉತ್ತರ ಪೋಲಿಸ್ ಠಾಣೆಯ ಇನ್ಸ್‌ಪೆಕ್ಟರ್‌ ಮುಹಮ್ಮದ್ ಶರೀಫ್ ಲಂಚದ ಬೇಡಿಕೆ ಇಟ್ಟಿದ್ದರು. ದೂರುದಾರ ಲಂಚವನ್ನು ನೀಡದಿದ್ದ ಹಿನ್ನೆಲೆಯಲ್ಲಿ ವಾಹನ ಬಿಡಿಸಲು ಸತಾಯಿಸಲಾಗಿತ್ತು. ಆದ್ದರಿಂದ ಅವರು ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದರು.

ಇದನ್ನು ಓದಿದ್ದೀರಾ? ಮಂಗಳೂರು | ಲಂಚಕ್ಕೆ ಕೈಯ್ಯೊಡ್ಡಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಟ್ರಾಫಿಕ್ ಎಸ್‌ಐ ಶರೀಫ್, ಸಿಬ್ಬಂದಿ!

ಬಳಿಕ ಆ ವ್ಯಕ್ತಿಯಿಂದ ಮುಹಮ್ಮದ್ ಶರೀಫ್ ಮತ್ತು ಸಿಬ್ಬಂದಿ ಪ್ರವೀಣ್‌ ನಾಯ್ಕ 3000 ರೂ. ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರು ಇಬ್ಬರನ್ನು ಜ.28ರಂದು ಬಂಧಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...