‌ಮಂಗಳೂರು | ದೇಶ ವಿರೋಧಿ ಬರಹ ಆರೋಪ; ಹೈಲ್ಯಾಂಡ್ ಆಸ್ಪತ್ರೆಯ ವೈದ್ಯೆ ‌ವಿರುದ್ಧ ಎಫ್‌ಐಆರ್

Date:

Advertisements

ಭಾರತ ವಿರೋಧಿ ಸಂದೇಶವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಆರೋಪದ ಮೇಲೆ ಮಂಗಳೂರು ನಗರದ ಹೈಲ್ಯಾಂಡ್ ಆಸ್ಪತ್ರೆಯ ವೈದ್ಯೆ ‌ವಿರುದ್ಧ ನಗರದ ದಕ್ಷಿಣ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನಗರ ಪೊಲೀಸ್ ಕಮಿಷನರ್‌ ಅನುಪಮ್ ಅಗರ್ವಾಲ್‌ ಈ ಬಗ್ಗೆ ಮಾಹಿತಿ ನೀಡಿದ್ದು, “ಸಾಮಾಜಿಕ ಮಾಧ್ಯಮದಲ್ಲಿ ದೇಶ ವಿರೋಧಿ ಬರಹವನ್ನು ಹಂಚಿಕೊಂಡ ಬಗ್ಗೆ ಹೈಲ್ಯಾಂಡ್‌ ಆಸ್ಪತ್ರೆಯ ವೈದ್ಯೆ ಡಾ. ಅತೀಫಾ ವಿರುದ್ಧ ಭಾರತೀಯ ನ್ಯಾಯಸಂಹಿತೆಯ ಸೆಕ್ಷನ್‌ 353(ಕಿಡಿಗೇಡಿತನದ ಬರಹ ಪ್ರಕಟಿಸುವುದು) ಹಾಗೂ ಸೆಕ್ಷನ್‌ 196(ಧರ್ಮಗಳ ನಡುವೆ ದ್ವೇಷ ಹಬ್ಬಿಸಲು ಯತ್ನಿಸುವುದು)ರಡಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದೇವೆ” ಎಂದು ಹೇಳಿದರು.

“ವೈದ್ಯೆಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸಿದ್ದೇವೆ. ಆಕೆಯ ಸಂದೇಶ ಹಂಚಿಕೊಳ್ಳಲು ಬಳಸಿದ ಮೊಬೈಲ್ ವಶಪಡಿಸಿಕೊಂಡಿದ್ದು, ಪರಿಶೀಲನೆಗಾಗಿ ವಿಧಿವಿಜ್ಞಾನ ತಜ್ಞರಿಗೆ ಕಳುಹಿಸಿದ್ದೇವೆ” ಎಂದು ತಿಳಿಸಿದರು.

Advertisements

“ಸಾಮಾಜಿಕ ಮಾಧ್ಯಮದಲ್ಲಿ ಬರಹವನ್ನು ಹಂಚಿಕೊಂಡ ವೈದ್ಯೆಯು ಸಂಸ್ಥೆಯ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆಂಬ ಕಾರಣಕ್ಕೆ ಹೈಲ್ಯಾಂಡ್‌ ಆಸ್ಪತ್ರೆಯು ಆಕೆಯನ್ನು ಕೆಲಸದಿಂದ ವಜಾ ಮಾಡಿದೆ. ನಂತರ ಆಸ್ಪತ್ರೆಯ ಎಚ್‌ಆರ್ ವಿಭಾಗದವರು ವೈದ್ಯೆ ಡಯಟೀಷಿಯನ್‌ ವಿರುದ್ಧ ಪಾಂಡೇಶ್ವರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಪ್ರವಾಸಿಗರ ಮೇಲೆ ನಡೆದ ದಾಳಿ ಖಂಡಿಸಿ ಪ್ರತಿಭಟನೆ

ಈ ಘಟನೆ ಕುರಿತು ಸ್ಪಷ್ಟನೆ ನೀಡಿ ಹೈಲ್ಯಾಂಡ್‌ ಆಸ್ಪತ್ರೆಯ ಆಡಳಿತ ಮಂಡಳಿ ಟ್ವೀಟ್ ಮಾಡಿದ್ದು, “ದೇಶವಿರೋಧಿಯೆಂದು ಪರಿಗಣಿಸುವಂತಹ ಅಭಿಪ್ರಾಯಗಳನ್ನು ನಮ್ಮ ಸಂಸ್ಥೆಯು ಒಪ್ಪುವುದಿಲ್ಲ. ವೈದ್ಯೆಯು ತಮ್ಮ ಬರಹದಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯಗಳು ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿದ್ದು, ಅದನ್ನು ನಾವೂ ಬಲವಾಗಿ ಖಂಡಿಸುತ್ತೇವೆ. ಇಂತಹ ದೇಶ ವಿರೋಧಿ ಭಾವನೆಗಳಿಂದ ನಾವು ಅಂತರ ಕಾಯ್ದುಕೊಳ್ಳುವ ಮೂಲಕ ದೇಶದ ಸಾರ್ವಭೌಮತೆ, ಐಕ್ಯತೆ ಹಾಗೂ ಭದ್ರತೆಯನ್ನು ಎತ್ತಿಹಿಡಿಯುತ್ತೇವೆ” ಎಂದು ತಿಳಿಸಿದೆ.

ವೈದ್ಯೆಯು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದ ಬರಹವನ್ನು ವಿಶ್ವ ಹಿಂದೂ ಪರಿಷತ್‌ನ ದಕ್ಷಿಣ ಪ್ರಾಂತ ಜಂಟಿ ಕಾರ್ಯದರ್ಶಿ ಶರಣ್ ಪಂಪ್‌ವೆಲ್‌ ಫೇಸ್‌ಬುಕ್‌ನಲ್ಲಿ ಈಚೆಗೆ ಹಂಚಿಕೊಂಡಿದ್ದು, ಆಕೆ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X